ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ.
ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಉಡುಪಿ ರಿಲಯನ್ಸ್ ಕ್ಯಾಪಿಟಲ್ (Reliance Capital) ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 32,000 ಜೊತೆಗೆ ಪಿಎಫ್, ಇಎಸ್ಐ ಹಾಗೂ ಫ್ಯಾಮಿಲಿ ಇನ್ಸೂರೆನ್ಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ: 9343349670
ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿ ಕಾರ್ಯಕ್ರಮ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ /Domestic Electrical appliance ( ಸಿಂಗಲ್ ಪೇಸ್ ಮೋಟರ್ ವೈಂಡಿಂಗ್, ಫ್ಯಾನ್ ವೈಂಡಿಂಗ್, ವಾಷಿಂಗ್ ಮಷೀನ್, ಮಿಕ್ಸಿ, ಗ್ರೈಂಡರ್, ಐರನ್ ಬಾಕ್ಸ್, ಹೌಸ್ ವೈರಿಂಗ್, ಗೀಸರ್ ಇತ್ಯಾದಿ) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 12.12.24 ರಿಂದ 10.01.2025ರ ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ […]
ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆ ನಿಯಮ ಸಡಿಲಿಕೆ ಸರಿಯಲ್ಲ – ಮಾಜಿ ಶಾಸಕ ಅರುಣ್ ಶಹಾಪುರ
ರಾಜ್ಯ ಸರಕಾರ ಮ್ಯಾನೇಜ್‌ಮೆಂಟ್ ಲಾಬಿಗೆ ತಲೆಬಾಗಿದ್ದು, ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳಲ್ಲಿ ಆ ಸಮುದಾಯದ ಯಾವೊಬ್ಬ ವಿದ್ಯಾರ್ಥಿ ದಾಖಲಾಗದೇ ಇದ್ದರೂ ಅಲ್ಪಸಂಖ್ಯಾಕ ಮಾನ್ಯತೆ ಪಡೆಯಬಹುದು ಎಂದು ಸರಕಾರ ನಿರ್ಧರಿಸಿರುವುದು ದಲಿತರು ಹಾಗೂ ಹಿಂದುಳಿದ ವರ್ಗಗಳ ಮೇಲೆ ನೇರ ಪರಿಣಾಮ ಬೀರಲಿದೆ. ಅಲ್ಪಸಂಖ್ಯಾಕರ ಶಿಕ್ಷಣ ಸಂಸ್ಥೆಗಳಿಗೆ ಈ ರೀತಿಯಲ್ಲಿ ನಿಯಮ ಸಡಿಲಿಕೆ ಸರಿಯಲ್ಲ ಎಂದು ಮಾಜಿ ಶಾಸಕ ಅರುಣ್ ಶಹಾಪುರ ಕಿಡಿಕಾರಿದ್ದಾರೆ.ಸೋಮವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಮಕ್ಕಳ ಆಧಾರಿತ ಆಗಿರಬೇಕೇ ಹೊರತು ಆಡಳಿತ ಮಂಡಳಿ […]
RBI ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕ.
1990ರ ಬ್ಯಾಚ್ ನ ಐಎಎಸ್ ಅಧಿಕಾರಿ ಸಂಜಯ್ ಮಲ್ಹೋತ್ರಾ ಅವರನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮುಂದಿನ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿಸೆಂಬರ್ 10 ರಂದು ಕೊನೆಗೊಳ್ಳಲಿದೆ. ದಾಸ್ ಅವರು 2018 ರ ಡಿಸೆಂಬರ್ ನಲ್ಲಿ ಊರ್ಜಿತ್ ಪಟೇಲ್ ಅವರಿಂದ ಅಧಿಕಾರ ವಹಿಸಿಕೊಂಡಿದ್ದರು.ಪ್ರಸ್ತುತ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಮಲ್ಹೋತ್ರಾ ಹಣಕಾಸು, ತೆರಿಗೆ, ವಿದ್ಯುತ್, ಮಾಹಿತಿ ತಂತ್ರಜ್ಞಾನ ಮತ್ತು ಗಣಿಗಾರಿಕೆಯಲ್ಲಿ 33 ವರ್ಷಗಳ ವೈವಿಧ್ಯಮಯ ಅನುಭವವನ್ನು […]
SM Krishna: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್ ಎಂ ಕೃಷ್ಣ ನಿಧನ
ಬೆಂಗಳೂರು: ಮಾಜಿ ಸಿಎಂ ಎಸ್. ಎಂ ಕೃಷ್ಣ (92) ಮಂಗಳವಾರ (ಡಿ.10 ರಂದು) ನಸುಕಿನ ಜಾವ 2:30ರ ವೇಳೆಗೆ ವಿಧಿವಶರಾಗಿದ್ದಾರೆ. ಕೆಲಕಾಲದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಇಂದು ಬೆಳಗಿನ ಜಾವ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ. ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು.