ಉಡುಪಿ ಜಿಪಂಗೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರ

ಉಡುಪಿ: ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಜಿ.ಪಂ. ಸಿಇಒ ಪ್ರತೀಕ್ ಬಾಯಲ್ ಹಾಗೂ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಅವರು ಪ್ರಶಸ್ತಿ ಸ್ವೀಕರಿಸಿದರು. ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ನಾನಾಜಿ ದೇಶ್‌ಮುಖ್ ಸರ್ವೋತ್ತಮ ಪಂಚಾಯತ್ ಪ್ರಶಸ್ತಿಗೆ 3ನೇ […]

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಅನಗತ್ಯ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪ

ಬೆಳಗಾವಿ: ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಬಿಜೆಪಿ ನಾಯಕರು ವಿನಾಕಾರಣ ರಾಜಕೀಯ ಮಾಡುತ್ತಿದ್ದಾರೆ. ಮಾತುಕತೆಗೆ ಮುಖ್ಯಮಂತ್ರಿಗಳು ಮುಖಂಡರುಗಳನ್ನು ಕರೆತರುವಂತೆ ನನಗೇ ಸೂಚಿಸಿದ್ದರು.‌ ಸಿಸಿ ಪಾಟೀಲ್ ಸೇರಿದಂತೆ ಹಲವು ನಾಯಕರಿಗೆ ನಾನೇ ಖುದ್ದು ಕರೆ ಮಾಡಿದರೂ ಯಾರು ಸಭೆಗೆ ಬರಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.ಪಂಚಮಸಾಲಿ ಮೀಸಲಾತಿ ವಿಚಾರವಾಗಿ ಮಂಗಳವಾರದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಕುರಿತು ಅಧಿವೇಶನದಲ್ಲಿ ಮತ್ತು ಮಾಧ್ಯಮಗಳೆದುರು ಪ್ರತಿಕ್ರಿಯಿಸಿದ ಸಚಿವರು, ಮೀಸಲಾತಿ ಹೋರಾಟ ರಾಜಕೀಯ ಆಗುತ್ತಿದೆ. ಇದರಲ್ಲಿ […]

ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆ

ಉಡುಪಿ: ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಥಮ ಸಭೆಯು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಅಧ್ಯಕ್ಷತೆಯಲ್ಲಿ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆಯಿತು. ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರಕಾರದ ಮಹತ್ವಾಕಾಂಕ್ಷೆಯ ಈ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಮಿತಿಯವರು ಒಟ್ಟಾಗಿ ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡುವ ಅಗತ್ಯವಿದೆ. […]

ಮಣಿಪಾಲ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ ನ ದಶಮಾನೋತ್ಸವ; ಡಿ.14ರಿಂದ ಮೂರು ದಿನಗಳ ಅದ್ದೂರಿ ಕಾರ್ಯಕ್ರಮ

ಉಡುಪಿ: ಮಣಿಪಾಲದ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್)ನ ದಶಮಾನೋತ್ಸವದ ಅಂಗವಾಗಿ ಮೂರು ದಿನಗಳ ಅದ್ದೂರಿ ಕಾರ್ಯಕ್ರಮವನ್ನು ಇದೇ ಡಿ.14, 15 ಮತ್ತು 16ರಂದು ಮಾಹೆಯ ಸರ್ವೋದಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಮುಖ್ಯಸ್ಥ ವರದೇಶಿ ಹಿರೇಗಂಗೆ ತಿಳಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.14 ರಂದು ಬೆಳಿಗ್ಗೆ 10 ಗಂಟೆಗೆ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಉದ್ಘಾಟಿಸಲಿದ್ದಾರೆ. ಸಹ ಕುಲಾಧಿಪತಿಗಳಾದ ಡಾ. ಎಚ್.ಎಸ್ ಬಲ್ಲಾಳ್ ಅಧ್ಯಕ್ಷತೆ […]

ಉಡುಪಿ: ಡಿ. 14, 15ರಂದು “ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ”

ಉಡುಪಿ: ಬೆಂಗಳೂರಿನ ಭರತ ನೃತ್ಯ ಸಂಗೀತಾ ಅಕಾಡೆಮಿ ಮತ್ತು ಮೈಸೂರಿನ ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ನ ಸಂಯುಕ್ತ ಆಶ್ರಯದಲ್ಲಿ ಎಂ.ಜಿ.ಎಂ. ಕಾಲೇಜಿನ ಸಹಯೋಗದೊಂದಿಗೆ ಎರಡು ದಿನಗಳ “ನೃತ್ಯ ಮತ್ತು ಪ್ರದರ್ಶನ ಕಲೆಗಳ ರಾಷ್ಟ್ರೀಯ ಸಮ್ಮೇಳನ”ವನ್ನು ಇದೇ ಡಿ. 14 ಮತ್ತು 15 ರಂದು ಉಡುಪಿ ಎಂಜಿಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ ಎಂದು ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ನ ಅಧ್ಯಕ್ಷ ಪ್ರೊ. ಕೆ. ರಾಮಮೂರ್ತಿ ರಾವ್ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]