ಉಡುಪಿ:ಗೃಹರಕ್ಷಕರಿಂದ ಸಮಾಜಕ್ಕೆ ನಿಸ್ವಾರ್ಥ ಸೇವೆ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡುತ್ತಿದ್ದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ […]

ಉಡುಪಿ:ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗ ಹೆಚ್ಚಿಸಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169ಎ ರಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ಅಸಮರ್ಪಕ ದಾರಿದೀಪ ನಿರ್ವಹಣೆ, ಚರಂಡಿಗಳ ನಿರ್ಮಾಣ, ಪಾದಚಾರಿ ಮಾರ್ಗದಲ್ಲಿ ಇಂಗು ಗುಂಡಿಗಳು ಹಾಗೂ […]

ಉಡುಪಿ:ಸಿರಿಧಾನ್ಯಗಳ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ :ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸಿರಿಧಾನ್ಯಗಳನ್ನು ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿಯಾಗುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸಿರಿಧಾನ್ಯಗಳನ್ನು ನಮ್ಮ ಪೂರ್ವಜರು ಈ ಹಿಂದೆ ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, […]

ಉಡುಪಿ:ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೋಲಾರ್ ಘಟಕ ಅಳವಡಿಸಿರುವುದು ಶ್ಲಾಘನೀಯ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಸ್ವಾಭಾವಿಕವಾಗಿ ಲಭ್ಯವಿರುವ ಸೌರಶಕ್ತಿ ಬಳಕೆಯಿಂದ ವಿದ್ಯುತ್ ಶಕ್ತಿ ಉತ್ಪಾದನೆಯ ಸೋಲಾರ್ ಘಟಕಗಳನ್ನು ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಚಿತವಾಗಿ ಅಳವಡಿಸಿದ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀ ಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ […]

ಕೇವಲ 21 ದಿನಗಳಲ್ಲಿ ತನುಜಾಸ್ ಮೈಂಡ್ ಥೆರಪಿಯೊಂದಿಗೆ ನಿಮ್ಮ ಮನಸ್ಸನ್ನು ಮರುವಿನ್ಯಾಸಗೊಳಿಸಿ

ಉಡುಪಿ: ಒತ್ತಡ, ಆತಂಕ, ಭಯ, ನಕಾರಾತ್ಮಕ ಆಲೋಚನೆಗಳು ಮತ್ತು ಸ್ವಯಂ-ಅನುಮಾನವು ದೈನಂದಿನ ಜೀವನದ ಭಾಗವಾಗಿರುವ ಜಗತ್ತಿನಲ್ಲಿ, ಸಮತೋಲನವನ್ನು ಕಂಡುಹಿಡಿಯುವುದು ಅಸಾಧ್ಯವೆಂದು ಭಾವಿಸಬಹುದು. ಆದರೆ ಕೇವಲ 21 ದಿನಗಳಲ್ಲಿ ನಿಮ್ಮ ನಿಜವಾದ ಸಾಮರ್ಥ್ಯವನ್ನು ಅನ್ಲಾಕ್ ಮಾಡುವ ಮೂಲಕ ನಿಮ್ಮ ಆಲೋಚನೆಗಳು ಮತ್ತು ಭಾವನೆಗಳನ್ನು ನೀವು ವಹಿಸಿಕೊಂಡರೆ ಏನು? ತನುಜಾಸ್ ಮೈಂಡ್ ಥೆರಪಿ “ನಿಮ್ಮ ಮನಸ್ಸನ್ನು ಮರುವಿನ್ಯಾಸಗೊಳಿಸುತ್ತದೆ. ಮಾನಸಿಕ ಸ್ವಾಸ್ಥ್ಯಕ್ಕೆ ಸಮಗ್ರವಾದ ವಿಧಾನವು ನಿಮ್ಮ ಜೀವನವನ್ನು ಒಳಗಿನಿಂದ ಪರಿವರ್ತಿಸುತ್ತದೆ. ಕಾರ್ಯಕ್ರಮವನ್ನು ಚಿಕಿತ್ಸಕ ತಂತ್ರಗಳು ಮತ್ತು ಸಾವಧಾನತೆ ಅಭ್ಯಾಸಗಳ ಅಡಿಪಾಯದ ಮೇಲೆ […]