ಚಿತ್ರದುರ್ಗಾ ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು.

ಬೆಂಗಳೂರು: ರಾಷ್ಟ್ರದ ಗಮನ ಸೆಳೆದಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ ಏಳು ಆರೋಪಿಗಳಿಗೆ ಜಾಮೀನು ನೀಡಿ ಹೈಕೋರ್ಟ್‌ ಪೀಠ ಆದೇಶಿಸಿದೆ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಶುಕ್ರವಾರ (ಡಿ.13) ಈ ಆದೇಶ ಹೊರಡಿಸಿದೆ. ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ‌, ನಾಗರಾಜ್‌, ಅನುಕುಮಾರ್‌, ಲಕ್ಷ್ಮಣ್‌, ಜಗದೀಶ್‌, ಪ್ರದೋಷ್ ಗೆ ಇದೀಗ ಜಾಮೀನು ದೊರೆತಿದೆ. ಸುಮಾರು ಆರು ತಿಂಗಳ ಬಳಿಕ ಜಾಮೀನು ದೊರೆತಿದೆ. ಅನಾರೋಗ್ಯದ […]

ಪೇಜಾವರ ಶ್ರೀ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದವರ ವಿರುದ್ಧ ಕಾನೂನು ಹೋರಾಟ; ವಿಶ್ವ ಹಿಂದೂ ಪರಿಷತ್

ಉಡುಪಿ: ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸಹಿತ ಇತರರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂಬಿ ಪುರಾಣಿಕ್ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನ.23 ರಂದು ಬೆಂಗಳೂರಿನ ವಿವಿ ಪುರಂನಲ್ಲಿರುವ ವಾಸವಿ ವಿದ್ಯಾನಿಕೇತನ ಸಭಾಂಗಣದಲ್ಲಿ ನಡೆದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀ ಸೇರಿದಂತೆ 50 ಕ್ಕೂ ಹೆಚ್ಚು ಸಂತರು ಆಗಮಿಸಿದ್ದರು. ಈ ಸಭೆಯಲ್ಲಿ ಪೇಜಾವರ ಶ್ರೀಗಳು ಆಡಿರುವ ಮಾತನ್ನು […]

ಗ್ರಾಪಂ ಅಧ್ಯಕ್ಷರ, ಉಪಾಧ್ಯಕ್ಷರ, ಸದಸ್ಯರ ಗೌರವಧನ ಹೆಚ್ಚಿಸಿ: ಎಂಎಲ್ ಸಿ ಡಾ. ಧನಂಜಯ ಸರ್ಜಿ ಒತ್ತಾಯ

ಬೆಂಗಳೂರು: ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ ಆಯ್ಕೆಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನವನ್ನು ಕನಿಷ್ಠ ಎರಡು ಪಟ್ಟು ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಸರ್ಕಾರವನ್ನು ಒತ್ತಾಯಿಸಿದರು. ಚಳಿಗಾಲದ 154ನೇ ವಿಧಾನ ಪರಿಷತ್ ಅಧಿವೇಶನದಲ್ಲಿ ಮಾತನಾಡಿದ ಅವರು, ದೇಶದ 141 ಕೋಟಿ ಜನಸಂಖ್ಯೆಯಲ್ಲಿ ಶೇ.65 ರಷ್ಟು ಜನ ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ. ಗಾಂಧೀಜಿ ಅವರ ಕನಸು ಗ್ರಾಮಗಳು ಉದ್ದಾರವಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬ ಗ್ರಾಮ ಸ್ವರಾಜ್ಯ ಕನಸು ನಿಜವಾಗಬೇಕಾದರೆ ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಉಪಾಧ್ಯಕ್ಷರು […]

ಫೆ.7ರಿಂದ ಉಡುಪಿಯಲ್ಲಿ “ಪವರ್ ಪರ್ಬಾ”; ಮಳಿಗೆಗಳ ನೋಂದಣಿ ಪ್ರಕ್ರಿಯೆ ಆರಂಭ

ಉಡುಪಿ: ಪವರ್ ಸಂಸ್ಥೆಯ ಈ ಬಾರಿಯ “ಪವರ್ ಪರ್ಬಾ” ವು 2025ರ ಫೆಬ್ರವರಿ 7ರಿಂದ 9ರ ವರೆಗೆ ಉಡುಪಿ ಮಿಶನ್ ಕಂಪೌಂಡ್ ಬಳಿತ ಕ್ರಿಶ್ಚಿಯನ್ ಹೈಸ್ಕೂಲ್‌ ಮೈದಾನದಲ್ಲಿ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪವರ್ ಸಂಸ್ಥೆಯ ಅಧ್ಯಕ್ಷೆ ತನುಜಾ ಮಾಬೆನ್ ಅವರು, ಪಿ.ಎಂ.ಎಸ್‌. ಸ್ಕೀಮ್ ಆಫ್ ಎಮ್.ಎಸ್.ಎಂ.ಇ ಸಹಯೋಗದೊಂದಿಗೆ ಈ ಬಾರಿಯ ಪವರ್ ಪರ್ಬವನ್ನು ಆಯೋಜಿಸಲಾಗುತ್ತಿದೆ. ಒಟ್ಟು 150ಕ್ಕೂ ಹೆಚ್ಚಿನ ಮಳಿಗೆಗಳನ್ನು ಮಹಿಳಾ ಉದ್ಯಮಿಗಳಿಗಾಗಿ ವ್ಯವಸ್ಥೆ ಮಾಡಲಾಗುವುದು. ಇದರಲ್ಲಿ 60 ಮಳಿಗೆಗಳು ಪಿ.ಎಂ.ಎಸ್. ಸ್ಕೀಮ್ […]

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನ-ಅಲ್ಲು ಅಭಿಮಾನಿಗಳಿಗೆ ಬಿಗ್ ಶಾಕ್

ಹೈದರಾಬಾದ್: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಇದರೊಂದಿಗೆ ಅಲ್ಲು ಅಭಿಮಾನಿಗಳು ಶಾಕ್ ಗೆ ಒಳಗಾಗಿದ್ದಾರೆ.ಪುಷ್ಪ-2 ಸಿನಿಮಾದ ಪ್ರೀಮಿಯರ್ ಶೋ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆ ಬಲಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ಯಾನ್ ಇಂಡಿಯಾ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ತೆಲಂಗಾಣ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಲ್ತುಳಿತಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ಮಂದಿರದ ಮಾಲಕ ಸೇರಿ ಚಿತ್ರ ತಂಡದ ಮೇಲೆ ಕೇಸ್ ದಾಖಲಾಗಿತ್ತು. ಅದರಂತೆ ಚಿಕ್ಕಡಪಲ್ಲಿ […]