ಉಡುಪಿ:ತ್ರಿಶಾ ವಿದ್ಯಾ ಪಿಯು ಕಾಲೇಜಿನಲ್ಲಿ ಕಾರ್ಯಗಾರ : “ಪಿಯುಸಿ ನಂತರ ಮುಂದೇನು ?”

ಉಡುಪಿ:ಪಿಯುಸಿ ನಂತರ ಸ್ಪರ್ಧಾತ್ಮಕ ಯುಗದಲ್ಲಿ ಯಾವ ಕ್ಷೇತ್ರದಲ್ಲಿ ಮುಂದೆ ಅವಕಾಶಗಳಿವೆ ಅನ್ನುವುದನ್ನು ತಿಳಿಯುವುದು ಅವಶ್ಯಕ ಎನ್ನುವ ನಿಟ್ಟಿನಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ವಿದ್ಯಾರ್ಥಿಗಳಿಗೆ “ಪಿಯುಸಿ ನಂತರ ಮುಂದೇನು?” ಎಂಬ ಕಾರ್ಯಾಗಾರವನ್ನು ಡಿಸೆಂಬರ್ 12 ರಂದು ಶ್ರೀಮತಿ ಶಾರದಾ ವಾಸುದೇವ ಕಿಣಿ ಕಲಾ ಭವನ ಕಟಪಾಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಗಾರದಲ್ಲಿ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ರವರು ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸಲು ಬೇಕಾದ ಸಲಹೆ ಸೂಚನೆಗಳನ್ನು ಹೇಳಿದರು. ತ್ರಿಶಾ ಕ್ಲಾಸಸ್ ನ ಬೋಧಕರಾದ […]
ಪೇಜಾವರ ಶ್ರೀಗಳ ಅವಹೇಳನ ಸಹಿಸುವುದಿಲ್ಲ: ಪೆರ್ಣಂಕಿಲ ಶ್ರೀಶ ನಾಯಕ್

ಉಡುಪಿ: ವಿಶ್ವಾದ್ಯಂತ ಕೋಟ್ಯಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ, ತೀರಾ ಕೆಳಮಟ್ಟದಲ್ಲಿ ಅವಹೇಳನ ಮಾಡುವ ಘಟನೆಗಳು ನಡೆಯುತ್ತಿರುವ ಅತ್ಯಂತ ಖಂಡನೀಯ.ಎಂದು ಉಡುಪಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ತಿಳಿಸಿದ್ದಾರೆ. ಉಡುಪಿಯ ಅಷ್ಟ ಮಠಗಳ ಯತಿಗಳ ಪರಂಪರೆಯಲ್ಲಿ ಯಾರೂ ಸಂವಿಧಾನದ ವಿರುದ್ಧ ಮಾತನಾಡಿದ ಉದಾಹರಣೆಗಳಿಲ್ಲ. ಅದರಲ್ಲೂ ಪೇಜಾವರ ಮಠದ ಹಿರಿಯರಾಗಿದ್ದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರಂತೂ ಸಂವಿಧಾನದ ಮೇಲೆ ವಿಶೇಷ ಗೌರವವನ್ನು ಹೊಂದಿದ್ದರು, ತಾವೂ […]
ಮಣಿಪಾಲ: ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ; ಓರ್ವ ವ್ಯಕ್ತಿ ಮೃತ್ಯು. ಮತ್ತೊಬ್ಬ ಗಂಭೀರ.

ಉಡುಪಿ: ಮಣಿಪಾಲ ನಗರ ಠಾಣೆ ವ್ಯಾಪ್ತಿಯ ಅಲೆವೂರು – ಮಣಿಪಾಲ ರಸ್ತೆಯ ಶಾಂತಿನಗರದ ಬಳಿ ತಿರುವಿನಲ್ಲಿ ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಕಾರವಾರ ಮೂಲದ ವ್ಯಕ್ತಿ ಮೃತಪಟ್ಟಿದ್ದಾರೆ. ಸಹಸವಾರ ಹಿರಿಯಡ್ಕ ಪರಿಸರದ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಘಟನೆ ಶುಕ್ರವಾರ ರಾತ್ರಿ 9.30ರ ವೇಳೆಗೆ ಸಂಭವಿಸಿದ್ದು, ಗಾಯಾಳು ಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ವೇಳೆ ಓರ್ವ ವ್ಯಕ್ತಿ ಮೃತಪಟ್ಟ ಬಗ್ಗೆ ವೈದ್ಯರು ದೃಢಪಡಿಸಿದರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. […]
ಡಿ.15 ರಂದು ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನ ಕೋಟೇಶ್ವರ ಕೊಡಿಹಬ್ಬ.

ಕುಂದಾಪುರ: ಕೋಟೇಶ್ವರ ಮಹತೋಬಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಡಿ.15 ರಂದು ಕೊಡಿಹಬ್ಬ ಆಚರಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು: ಡಿ.14 ಶನಿವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ “ಶಿವ ಗಾನಾಮೃತ”. ಡಿ.15 ಭಾನುವಾರ ಮಿತ್ರದಳದ ಮಿತ್ರೆಯರಿಂದ “ತನನಂ ತನನಂ” (ನೃತ್ಯ ವೈವಿಧ್ಯ). ಡಿ.16 ಸೋಮವಾರ ದಕ್ಷಯಜ್ಞ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಯಕ್ಷಗಾನ ತಾಳ ಮದ್ದಳೆ’. ಶ್ರೀ ಕೋಟಿಲಿಂಗೇಶ್ವರ ದೇವರ ದಿವ್ಯ ಸನ್ನಿಧಿಯಲ್ಲಿ ಡಿ.16ರ ವರೆಗೆ ನೆರವೇರುವ ಉತ್ಸವಾದಿಗಳಿಗೆ ತಾವು, ಬಂಧುಮಿತ್ರರೊಡಗೂಡಿ ಆಗಮಿಸಿ, […]
ಕಾರ್ಕಳ: ಯುವ ಕಬ್ಬಡ್ಡಿ ಆಟಗಾರ ಮುಟ್ಲುಪಾಡಿ ಪ್ರೀತಂ ಶೆಟ್ಟಿ ಹೃದಯಾಘಾತದಿಂದ ನಿಧನ

ಉಡುಪಿ: ಯುವ ಕಬ್ಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ(26) ಅವರು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬ್ಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬ್ಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ನೋವಿನಿಂದ ಕುಸಿದು ಬಿದ್ದಿದ್ದರು. ತಕ್ಷಣ ತಂಡದ ಸಹ ಆಟಗಾರರು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗೆ ಆಗಲೇ ಪ್ರೀತಮ್ ಅವರು ಕೊನೆಯುಸಿರೆಳೆದಿದ್ದಾರೆ. ಪ್ರೀತಮ್ ಅವರು ಇನ್ನು ಕೆಲವೇ ದಿನಗಳಲ್ಲಿ ಉದ್ಯೋಗಕ್ಕಾಗಿ ವಿದೇಶಕ್ಕೆ ಹೋಗಬೇಕೆಂದು ಎಲ್ಲಾ ತಯಾರಿ ನಡೆಸಿದ್ದರು. ಆದರೆ ವಿಧಿಯ […]