ಉಡುಪಿ:ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ

ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಬಲೂನು ಹಾರಿಬಿಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ ಮುಖ್ಯವಾಗಿರುತ್ತದೆ. ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಸಾಧ್ಯ ಎಂದರು. ಗೃಹರಕ್ಷಕ ದಳದ […]

ಉಡುಪಿ:ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಕಾರ್ಯಕ್ರಮವು ಇಂದು ನಗರದ ಅಲೆವೂರು ಪ್ರಗತಿ ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ್ಳಿ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಈ ಜಲ […]

ಉಡುಪಿ:ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪ್ರತಿಕೋದ್ಯಮದ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್.ಎಸ್.ಎಲ್.ಸಿ, ಪಿಯು.ಸಿ ಹಾಗೂ ಡಿಪ್ಲೋಮಾ ವ್ಯಾಸಾಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟಾçನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, […]

ಉಡುಪಿ:ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ನೇರಸಾಲ -ಕುರಿ ಸಾಕಾಣಿಕೆ ಹಾಗೂ ಸ್ವಾವಲಂಬಿ ಸಾರಥಿ-ಫುಡ್ ಕಾರ್ಟ್ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ವೆಬ್‌ಸೈಟ್ https://sevasindhu.Karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ […]

ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ; ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಡುಪಿ: ಅಂಬಲಪಾಡಿ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಕಾಮಗಾರಿ ಪೂರ್ಣಗೊಳ್ಳುವರೆಗೂ ಎಲ್ಲಾ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚರಿಸಲು ವ್ಯವಸ್ಥೆ ಮಾಡಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ. ಬದಲಿ ಸಂಚಾರಿ ಮಾರ್ಗ ಈ ಕೆಳಕಂಡಂತಿದೆ: ಸ್ವಾಗತ ಗೋಪುರದಿಂದ-ಅಂಬಲಪಾಡಿ-ಕರಾವಳಿ ಜಂಕ್ಷನ್ ವರೆಗೆ ಹಾದುಹೋಗಿರುವ ಸರ್ವೀಸ್ ರಸ್ತೆಯಲ್ಲಿ ಏಕಮುಖವಾಗಿ ಎಲ್ಲಾ ವಾಹನಗಳು ಸಂಚರಿಸುವುದು.  ಕರಾವಳಿಯಿಂದ ಅಂಬಲವಾಡಿ-ಸ್ವಾಗತ ಗೋಪುರದ ಕಡೆಗೆ ಹಾದುಹೋಗಿರುವ ಸರ್ವೀಸ್ ರಸ್ತೆಯಲ್ಲಿ ಏಕಮುಖವಾಗಿ ಎಲ್ಲಾ ವಾಹನಗಳು ಸಂಚರಿಸುವುದು. ಬ್ರಹ್ಮಗಿರಿ ಕಡೆಯಿಂದ ಅಂಬಲಪಾಡಿ-ಕಿದಿಯೂರು […]