ಉಡುಪಿ: ರಸ್ತೆ ಬದಿ ತ್ಯಾಜ್ಯ ಎಸೆದ ವ್ಯಕ್ತಿಯಿಂದಲೇ ತೆರವುಗೊಳಿಸಿದ ಗ್ರಾಪಂ ಅಧ್ಯಕ್ಷೆ

ಉಡುಪಿ: ಮನೆಯ ತ್ಯಾಜ್ಯವನ್ನು ವಾಹನದಲ್ಲಿ ತಂದು ಹೊಳೆಬದಿಗೆ ಸುರಿದ ಬೇಜವಾಬ್ದಾರಿ ವ್ಯಕ್ತಿಯಿಂದಲೇ ಅದನ್ನು ಹೆಕ್ಕಿಸಿ, ಆತನನ್ನು ಪೊಲೀಸ್ ಠಾಣೆಯ ಮೆಟ್ಟಿಲು ಹತ್ತುವಂತೆ ಮಾಡಿದ ಘಟನೆ ಇಲ್ಲಿನ ಇನ್ನಂಜೆ ಗ್ರಾಪಂನಲ್ಲಿ ನಡೆದಿದೆ. ಆರೋಪಿ ವ್ಯಕ್ತಿ ತಮ್ಮ ಮನೆಯ ಕಸಮುಸುರೆಗಳನ್ನು ಬೆಳಗಿನ ಜಾವ ವಾಹನದಲ್ಲಿ ತಂದು ಇನ್ನಂಜೆಯ ಮರ್ಕೋಡಿ ಹೊಳೆ ಬದಿಗೆ ಸುರಿದು ಹೋಗುತ್ತಿದ್ದ. ಈ ಬಗ್ಗೆ ಸ್ಥಳೀಯರು ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ ಗಮನಕ್ಕೆ ತಂದಿದ್ದರು. ಅವರು ಸ್ಥಳೀಯ ಗ್ರಾಪಂ ಸದಸ್ಯರೊಂದಿಗೆ ಸ್ಥಳಕ್ಕೆ ಆಗಮಿಸಿ, ಅಲ್ಲಿ ಎಸೆಯಲಾಗಿದ್ದ ತ್ಯಾಜ್ಯದಲ್ಲಿದ್ದ […]

ಉಡುಪಿ ರಿಲಯನ್ಸ್ ಕ್ಯಾಪಿಟಲ್’ನಲ್ಲಿ ಮಹಿಳೆಯರಿಗೆ ಉದ್ಯೋಗಾವಕಾಶ.

ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶವನ್ನು ಕಲ್ಪಿಸಿದೆ. ಉಡುಪಿ ರಿಲಯನ್ಸ್ ಕ್ಯಾಪಿಟಲ್ (Reliance Capital) ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 32,000 ಜೊತೆಗೆ ಪಿಎಫ್, ಇಎಸ್ಐ ಹಾಗೂ ಫ್ಯಾಮಿಲಿ ಇನ್ಸೂರೆನ್ಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30ರಿಂದ ಸಂಜೆ 5:30ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ: 9343349670

ಫ್ರಾನ್ಸ್ ನಲ್ಲಿ ಭೀಕರ “ಚಿಡೋ” ಚಂಡಮಾರುತದ ಪರಿಣಾಮ ಸಾವಿರ ಗಡಿ ದಾಟಿದ ಮೃತರ ಸಂಖ್ಯೆ

ಪ್ಯಾರಿಸ್: ‘ಚಿಡೋ’ ಚಂಡಮಾರುತವು ಫ್ರಾನ್ಸ್‌ನ ಮಯೊಟ್ಟೆ ಪ್ರದೇಶದಲ್ಲಿ ಭಾರಿ ಹಾನಿಯನ್ನುಂಟು ಮಾಡಿದ್ದು ಚಂಡಮಾರುತದ ಹೊಡೆತಕ್ಕೆ ಪ್ರಾಣ ಕಳೆದುಕೊಂಡವರ ಸಂಖ್ಯೆ 1,000 ಗಡಿ ದಾಟುವ ಸಾಧ್ಯತೆ ಇದೆ ಎಂದು ಉನ್ನತ ಅಧಿಕಾರಿಯೊಬ್ಬರು ಭಾನುವಾರ(ಡಿ.15) ಮಾಹಿತಿ ನೀಡಿದ್ದಾರೆ. ಶನಿವಾರ ಹಿಂದೂ ಮಹಾಸಾಗರದ ದ್ವೀಪಗಳಿಗೆ ಚಂಡಮಾರುತ ಅಪ್ಪಳಿಸಿದ್ದು ಇದರಿಂದ ವ್ಯಾಪಕ ಹಾನಿಯಾಗಿದ್ದು ಸಾವಿರಾರು ಮಂದಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಂಡರೆ ಸಾವಿರಾರು ಮಂದಿ ಸಾವಿರಾರು ಮಂದಿ ಜೀವ ಕಳೆದುಕೊಂಡಿರಬಹುದು ಅಲ್ಲದೆ ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಅಲ್ಲದೆ ಇದು 90 ವರ್ಷಗಳಲ್ಲಿ ಮಾಯೊಟ್ಟೆಗೆ […]

ಮಂಗಳೂರು: ಜೀಪು-ಸ್ಕೂಟರ್‌ ನಡುವೆ ಭೀಕರ ಅಪಘಾತ; ಸ್ಕೂಟರ್‌ ಸವಾರ ಮೃತ್ಯು, ಸಹ ಸವಾರೆ ಗಂಭೀರ.

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್‌ ಬ್ರಿಡ್ಜ್ ಬಳಿಯ ಸರ್ವೀಸ್‌ ರಸ್ತೆಯಲ್ಲಿ ಅತೀ ವೇಗದಲ್ಲಿ ಆಗಮಿಸಿದ ಜೀಪ್‌, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದು, ಸಹ ಸವಾರೆ ಗಂಭೀರ ಗಾಯಗೊಂಡಿದ್ದಾರೆ. ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಸಂಪಿಗೆದಡಿ ನಿವಾಸಿ ಅರುಣ್‌ ಕುಮಾರ್‌ (43) ಮೃತಪಟ್ಟವರು. ಸ್ಕೂಟರ್‌ನ ಹಿಂಬದಿಯಲ್ಲಿದ್ದ ರಾಣಿಪುರ ನಿವಾಸಿ ಹೇಮಾವತಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೊಕ್ಕೊಟ್ಟು ಕಾಪಿಕಾಡಿನ ಬಾರ್ & ರೆಸ್ಟೋರೆಂಟ್‌ನಲ್ಲಿ ಅರುಣ್‌ ಅವರು ವೈಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದು, ಶನಿವಾರ ರಾತ್ರಿ […]

ಅಂಬಲಪಾಡಿ ರಾ.ಹೆ. ಮೇಲ್ಸೇತುವೆ ಕಾಮಗಾರಿ ಆರಂಭ – ಸಂಚಾರ ಮಾರ್ಗದಲ್ಲಿ ಬದಲಾವಣೆ

ಉಡುಪಿ: ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಾರಂಭಗೊಂಡಿದ್ದು, ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ವಾಹನ ಸವಾರರು‌ ಉಡುಪಿಗೆ ಪ್ರಯಾಣಿಸುವಾಗ ಅಂಬಲಪಾಡಿಯಿಂದ ಸರ್ವಿಸ್ ರಸ್ತೆ ಮೂಲಕ ಅದಿವುಡುಪಿ ಕರಾವಳಿ ಜಂಕ್ಷನ್ ಮಾರ್ಗವಾಗಿ ಉಡುಪಿಗೆ ತೆರಳಬೇಕು. ಹಾಗೆಯೇ ಉಡುಪಿಯಿಂದ ಅಂಬಲಪಾಡಿಗೆ ಪ್ರಯಾಣಿಸುವಾಗ ಬ್ರಹ್ಮಗಿರಿಯಿಂದ ಅಂಬಲಪಾಡಿ ಸರ್ವಿಸ್ ರಸ್ತೆಯ ಮೂಲಕ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿಯಿಂದ ‘ಯು’ ಟರ್ನ್ ಮೂಲಕ ಅಂಬಲಪಾಡಿಗೆ ಹೋಗಬೇಕು.