ಉಡುಪಿ ನಗರಸಭೆ : ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

ಉಡುಪಿ: ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೂಡಂಗಡಿಗಳು ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ತೊಂದರೆ ನೀಡುವಂತಿರಬಾರದು, ಫಾಸ್ಟ್ ಫುಡ್ ಅಥವಾ ರಸ್ತೆ ಬದಿಗಳಲ್ಲಿ ಗೂಡಂಗಡಿಗಳ ಮೂಲಕ ಹೋಟೆಲ್ ನಡೆಸುವವರು ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು “ಆಹಾರ ಗುಣಮಟ್ಟತೆ ಮತ್ತು ಸುರಕ್ಷತಾ […]

ಉಡುಪಿ:ರಾ.ಹೆ.66 ರಸ್ತೆ ಕಾಮಗಾರಿ : ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ

ಉಡುಪಿ: ಉಡುಪಿ ತಾಲೂಕಿನ ಅಂಬಲಪಾಡಿ ಜಂಕ್ಷನ್ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-66 ರ ರಸ್ತೆ ಕಾಮಗಾರಿ ಪ್ರಾರಂಭವಾಗಿದ್ದು, ವಾಹನ ದಟ್ಟಣೆಯಿಂದ ಸುಗಮ ಸಂಚಾರಕ್ಕೆ ಅಡೆ ತಡೆಗಳು ಉಂಟಾಗುತ್ತಿರುವ ಹಿನ್ನೆಲೆ, ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳು 1989 ರ ಕಲಂ 221(ಎ)(2) & (5) ರನ್ವಯ, ಅಂಬಲಪಾಡಿ ಜಂಕ್ಷನ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ-66 ರಸ್ತೆಯಲ್ಲಿ ಕಾಮಗಾರಿ ಪೂರ್ಣಗೊಳ್ಳುವವರೆಗೂ ಎಲ್ಲಾ ವಾಹನಗಳಿಗೆ ಬದಲೀ ಮಾರ್ಗದಲ್ಲಿ […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಬೈಲೂರು ಎನ್.ಜಿ.ಒ ಕಾಲೋನಿ ನಿವಾಸಿ ಬಿ ಭಾಸ್ಕರ್ ನಾಯ್ಕ್ (65) ಎಂಬ ವ್ಯಕ್ತಿಯು 2023 ರ ಜನವರಿ ಮಾಹೆಯಲ್ಲಿ ಮನೆ ಬಿಟ್ಟು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ, ತುಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು […]

ಹೆದ್ದಾರಿ ಕಾಮಗಾರಿಗೆ ಆಕ್ಷೇಪ ಸರಿಯಲ್ಲ: ಭಾಸ್ಕರ ಶೆಟ್ಟಿ

ಉಡುಪಿ: ಅಂಬಲಪಾಡಿ ಜಂಕ್ಷನ್‌ನಲ್ಲಿ ಕಾಮಗಾರಿ ಆರಂಭವಾಗಿದ್ದು, ಗುತ್ತಿಗೆದಾರರು ಒಂದೂವರೆ ವರ್ಷದೊಳಗೆ ಕಾಮಗಾರಿ ಮುಗಿಸುವ ಭರವಸೆ ನೀಡಿದ್ದಾರೆ. ಈ ಕಾಮಗಾರಿಯಿಂದ ಯಾರಿಗೂ ಸಮಸ್ಯೆ ಆಗುವುದಿಲ್ಲ. ಆದುದರಿಂದ ಇದಕ್ಕೆ ಆಕ್ಷೇಪ ಸಲ್ಲಿಸುವುದು ಸರಿಯಲ್ಲ ಎಂದು ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ 66ರ ಬಳಕೆದಾರರ ವೇದಿಕೆ ಸಂಚಾಲಕ ಭಾಸ್ಕರ ಶೆಟ್ಟಿ ಹೇಳಿದರು. ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿಯಿಂದ ಆಗಿರುವ ಗೊಂದಲದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹೆದ್ದಾರಿ ಕಾಮಗಾರಿ ನಡೆಯುವಾಗ ಸಂಚಾರದಲ್ಲಿ ತೊಂದರೆ ಆಗುವುದು ಸಾಮಾನ್ಯ. ಅದಕ್ಕೆ ಸಾರ್ವಜನಿಕರು ಹಾಗೂ […]

ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಹೆದ್ದಾರಿ ಬಳಕೆದಾರರ ವೇದಿಕೆಯಿಂದ ಪ್ರತಿಭಟನೆ

ಉಡುಪಿ: ಅಂಬಲಪಾಡಿ ಜಂಕ್ಷನ್ ಮೇಲ್ಸೇತುವೆ ಅಂಡರ್ ಪಾಸ್ ಕಾಮಗಾರಿ ವಿರೋಧಿಸಿ ಹಾಗೂ ಎಲಿವೇಟೆಡ್ ಫ್ಲೈ ಓವರ್ ಕಾಮಗಾರಿಗೆ ಒತ್ತಾಯಿಸಿ ಹೆದ್ದಾರಿ ಬಳಕೆದಾರರ ವೇದಿಕೆ ನೇತೃತ್ವದಲ್ಲಿ ಅಂಬಲಪಾಡಿ ಜಂಕ್ಷನ್ ನಲ್ಲಿ‌ ಇಂದು ದಿಢೀರ್ ಪ್ರತಿಭಟನೆ ನಡೆಸಲಾಯಿತು. ಸಾರ್ವಜನಿಕರಿಗೆ ಯಾವುದೇ ಸರಿಯಾದ ಮಾಹಿತಿ ನೀಡದೆ ತರಾತುರಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಇದೊಂದು ಸಂಪೂರ್ಣ ಅವೈಜ್ಞಾನಿಕ‌ ಕಾಮಗಾರಿಯಾಗಿದ್ದು, ಇದರಿಂದ ಸಾಕಷ್ಟು ಜನರಿಗೆ ತೊಂದರೆ ಆಗಿದೆ. ಮಲ್ಪೆ ಮೀನುಗಾರರಿಗೆ ದೊಡ್ಡಮಟ್ಟದಲ್ಲಿ ತೊಂದರೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಹೆದ್ದಾರಿ ಬಳಕೆದಾರರ ವೇದಿಕೆ ಅಂಬಲಪಾಡಿ ಇದರ ಅಧ್ಯಕ್ಷ […]