ಕಾಪು: ಬಾಲಂ ವಿಶ್ವನಾಥ್ ರಾವ್ ಪಣಿಯೂರು ನಿಧನ.

ಕಾಪು: ಸಾಮಾಜಿಕ, ಧಾರ್ಮಿಕ ಮತ್ತು ಸಹಕಾರಿ ಧುರೀಣ ಬಾಲಂ ವಿಶ್ವನಾಥ್ ರಾವ್ (83) ಸೋಮವಾರ (ಡಿ.16) ಬೆಂಗಳೂರಿನಲ್ಲಿರುವ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರ ಅಗಲಿದ್ದಾರೆ. ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮೊಕ್ತೇಸರರಾಗಿ, ಬೆಳಪು ಗ್ರಾಮ ಪಂಚಾಯತ್, ಬೆಳಪು ವ್ಯವಸಾಯ ಸಹಕಾರಿ ಸಂಘ, ಬೆಳಪು ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಉಡುಪಿ ಎಪಿಎಂಸಿ, ಪಣಿಯೂರು ಶ್ರೀ ದುರ್ಗಾ ದೇವಿ ಹಿರಿಯ ಪ್ರಾಥಮಿಕ […]
ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ವಿಧಿವಶ.

ಅಂಕೋಲಾ: ವೃಕ್ಷಮಾತೆ ಎಂದೆನಿಸಿಕೊಂಡ ಪದ್ಮಶ್ರೀ ತುಳಸಿ ಗೌಡ ಸೋಮವಾರ(ಡಿ16) ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸಾಗಿತ್ತು. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡ ಅವರು ವಯೋ ಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಕಳೆದ ಎಂಟು ತಿಂಗಳಿನಿಂದ ವಯೋ ಸಹಜ ಅನಾರೋಗ್ಯಕ್ಕೆ ತುತ್ತಾದ ತುಳಸಿ ಗೌಡ ಅವರಿಗೆ ಆಸ್ಪತ್ರೆ ಸೇರಿದಂತೆ ಅನೇಕ ಕಡೆ ಚಿಕಿತ್ಸೆಯನ್ನು ನೀಡಲಾಗಿತ್ತು. ಹೊನ್ನಳ್ಳಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಅವರು ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಜಗದೀಶ ನಾಯಕ ತುಳಸಿ ಗೌಡ […]