ಉಡುಪಿ:ಪ್ರವಾಸೋದ್ಯಮ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ
ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ವಿವರ : ಫುಡ್ […]
ಉಡುಪಿ:ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಉದ್ಘಾಟನೆ
ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ನಲ್ ಜಲ್ ಮಿತ್ರ ಬಹು ಕೌಶಲ್ಯ ತರಬೇತಿ ಕಾರ್ಯಕ್ರಮವು ಇಂದು ನಗರದ ಉಪ್ಪೂರಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ನಡೆಯಿತು. ಹದಿನೇಳು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಾತನಾಡಿ, ಜಲ್ ಜೀವನ್ ಮಿಷನ್ ಮೂಲಕ ಜಿಲ್ಲೆಯ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಲಾಗಿದೆ. […]
ಉಡುಪಿ:ಯುವ ಪರಿವರ್ತಕರ ಹುದ್ದೆ : ಅರ್ಜಿ ಆಹ್ವಾನ
ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಜಿಲ್ಲೆಯಲ್ಲಿ […]
ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
ಉಡುಪಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಡಿಸೆಂಬರ್ 31 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಪಡಿತರ ಚೀಟಿಗಳಿಗೆ ಮತ್ತು ಆದ್ಯತೇತರ ಪಡಿತರ ಚೀಟಿಗಳಿಗೆ ಕುಟುಂಬದ ಸದಸ್ಯರ ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ, ಹೆಸರು ತೆಗೆಯುವ ಬಗ್ಗೆ ಲಾಗಿನ್ ನೀಡಿದ ಗ್ರಾಮ ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ […]
ಮೌಲ್ಯಯುತವಾದ ಆಧಾರ್ ಕಾರ್ಡ್ ಅನ್ನು ಹೊಂದುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ- ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು […]