ಉಡುಪಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ

ಉಡುಪಿ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಬಂಧನ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ‌ ಬಿಜೆಪಿ ಕಾರ್ಯಕರ್ತರು ಕಡಿಯಾಳಿಯ ಬಿಜೆಪಿ‌ ಕಚೇರಿ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದರು. ಪೊಲೀಸರು ರಾಜ್ಯ ಕಾಂಗ್ರೆಸ್ ನಾಯಕರ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದ ಬಳಿಕ ಹರಾಜಕತೆ ಸೃಷ್ಟಿಯಾಗಿದೆ. ವಿಧಾನಸಭಾ […]

ಉಡುಪಿ: ನಾಳೆ (ಡಿ.21) ಗೋ. ಮಧುಸೂದನ್​ ಅವರ ಭಗವಾನುವಾಚ ಪುಸ್ತಕ ಲೋಕಾರ್ಪಣೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್​ ಗೀತೋತ್ಸವದಲ್ಲಿ ಡಿ.21ರಂದು ಸಂಜೆ 5.30ಕ್ಕೆ ಶ್ರೀ ಭಗವಾನುವಾಚ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ವಿಧಾನ ಪರಿಷತ್​ ಮಾಜಿ ಸದಸ್ಯ ಗೋ. ಮಧುಸೂದನ್​ ತಿಳಿಸಿದರು. ಈ ಕುರಿತು ಕೃಷ್ಣಮಠದ ಕನಕಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರ್ಯಾಯ ಶ್ರೀ ಸುಗುಣೇಂದ್ರತಿರ್ಥ ಶ್ರೀಪಾದರು ಹಾಗೂ ಕಿರಿಯ ಶ್ರೀ ಸುಶೀಂದ್ರತಿರ್ಥ ಶ್ರೀಪಾದರು ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಆರೆಸ್ಸೆಸ್​ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್​ […]

ಉಡುಪಿ: ಡಿ.21ರಿಂದ 28ರವರೆಗೆ ಮಕ್ಕಳ ನಾಟಕೋತ್ಸವ

ಉಡುಪಿ: ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ‌ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವದಲ್ಲಿ ಆಯ್ದ 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು 12 ನಾಟಕಗಳನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಭೂಮಿಯ‌ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರ ಕುತ್ಪಾಡಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಯುವಜನರು ಮತ್ತು ಮಕ್ಕಳಲ್ಲಿ ರಂಗಭೂಮಿಯ ಕುರಿತು ಅರಿವು ಮೂಡಿಸಿ, ಆಸಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಉಡುಪಿಯ ಆಯ್ದ ಹನ್ನೆರಡು ಪ್ರೌಢಶಾಲೆಗಳಲ್ಲಿ “ರಂಗಭೂಮಿ ರಂಗಶಿಕ್ಷಣ” ಎಂಬ ರಂಗ […]

ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ

ಉಡುಪಿ: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಲ್ಲಿ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ (ಎಮ್‌ಇಇಎಮ್‌ಎಸ್ –2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣವನ್ನು ದಿನಾಂಕ 20 ಮತ್ತು 21 ಡಿಸೆಂಬರ್ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ ಇಂಡಸ್ಟಿಯಲ್ ರಿಸರ್ಚ್, ಬೆಂಗಳೂರು ಇಲ್ಲಿನ ಹಿರಿಯ ವಿಜ್ಞಾನಿಗಳಾದ ಡಾ. […]

ಉಡುಪಿ: ಅಂಬೇಡ್ಕರ್ ಬಗ್ಗೆ ಅವಹೇಳನ; ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಸಂಸತ್ತಿನಲ್ಲಿ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾನಹಾನಿ ಪದ ಬಳಕೆ ಮಾಡಿರುವ ಸಿ.ಟಿ. ರವಿ ವಿರುದ್ಧ ಉಡುಪಿ ಕಾಂಗ್ರೆಸ್ ಎಸ್.ಸಿ ಘಟಕ ಹಾಗೂ ಉಡುಪಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಇಂದು ಪ್ರತಿಭಟನೆ‌ ನಡೆಸಲಾಯಿತು. ಕಾಂಗ್ರೆಸ್ ಭವನದಿಂದ ಬ್ರಹ್ಮಗಿರಿ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಸಚಿವ ಅಮಿತ್ ಶಾ ಹಾಗೂ […]