ಉಡುಪಿ: ಬಂಟಕಲ್ ಕಾಲೇಜಿನಲ್ಲಿ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭ.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಎರಡು ದಿನಗಳ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚ್ಚರಿಂಗ್ (ಎಮ್‌ಇಇಎಮ್‌ಎಸ್ – 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು 21 ಡಿಸೆಂಬರ್ 2024 ರಂದು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು. ಈ ಸಮ್ಮೇಳನದಲ್ಲಿ ಭಾಗವಹಿಸಲು ದೇಶ – ವಿದೇಶಗಳಿಂದ ಒಟ್ಟು 237 ಪ್ರಬಂಧಗಳು ಬಂದಿದ್ದು, ಅಂತಿಮವಾಗಿ 12 ಪ್ರಬಂಧಗಳನ್ನು […]
ಉಡುಪಿ:ಕಟ್ಟಡಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರ ವಿರುದ್ಧ ಶಿಸ್ತು ಕ್ರಮ
ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಕೊಳಚೆ ನೀರನ್ನು ಅನಧಿಕೃತವಾಗಿ ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಕಲುಷಿತ ನೀರು ಕುಡಿಯುವ ನೀರಿನ ಮೂಲಗಳು ಸೇರಿ ನೆರೆಹೊರೆಯ ಬಾವಿಗಳ ನೀರು ಹಾಳಾಗುತ್ತಿದೆ ಹಾಗೂ ನೈರ್ಮಲ್ಯಕ್ಕೂ ತೊಂದರೆಯುಂಟಾಗುತ್ತಿದೆ. ನಗರಸಭಾ ವ್ಯಾಪ್ತಿಯಲ್ಲಿ ಇರುವ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಮಾಲೀಕರು ತಮ್ಮ ಕಟ್ಟಡದ ಕಲುಶಿತ ನೀರನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಟ್ಟಡ […]
ಉಡುಪಿ:ಸಮಾರಂಭಗಳಲ್ಲಿ ಮಧ್ಯ ಸರಬರಾಜು ಹಾಗೂ ವಿತರಣೆಗೆ ಅಬಕಾರಿ ಇಲಾಖೆಯ ಅನುಮತಿ ಕಡ್ಡಾಯ
ಉಡುಪಿ: ಜಿಲ್ಲೆಯ ಎಲ್ಲಾ ಇವೆಂಟ್ ಮ್ಯಾನೇಜ್ಮೆಂಟ್, ಮದುವೆ ಸಭಾಂಗಣ, ಇತರೆ ಕಾರ್ಯಕ್ರಮ ಜರುಗುವ ಸಭಾಂಗಣ, ಹೋಂ ಸ್ಟೇ, ರೆಸಾರ್ಟ್ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯು ಶುಕ್ರವಾರ ಜಿಲ್ಲೆಯ ಅಬಕಾರಿ ಉಪ ಆಯುಕ್ತರ ಕಛೇರಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ (ಜಾರಿ ಮತ್ತು ತನಿಖೆ) ಡಾ.ಬಾಲಕೃಷ್ಣ ಸಿ ಹೆಚ್, ಮುಂಬರುವ ಕ್ರಿಸ್‌ಮಸ್, ಹೊಸ ವರ್ಷ ಆಚರಣೆ ಮತ್ತು ಇತರೆ ಸಭೆ ಸಮಾರಂಭಗಳಲ್ಲಿ ಊಟದೊಂದಿಗೆ ಮದ್ಯ ಸರಬರಾಜು ಮಾಡಿದ್ದಲ್ಲಿ ಅಬಕಾರಿ […]
ಉಡುಪಿ:ಪಿಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ನೀಡಲು ಶಿಫಾರಸ್ಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ – ಸಂಸದ ಕೋಟಾ ಶ್ರೀನಿವಾಸ ಪೂಜಾರಿ
ಉಡುಪಿ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಪಡೆದ ಅರ್ಹ ಫಲಾನುಭವಿಗಳಿಗೆ ಚಟುವಟಿಕೆಗಳನ್ನು ನಡೆಸಲು ಬ್ಯಾಂಕುಗಳು ಆರ್ಥಿಕ ನೆರವು ನೀಡಲು ಶಿಫಾರಸ್ಸು ಆದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ […]
ಉಡುಪಿ:ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಗ್ರಾಮ ಒನ್ ಸಹಕಾರಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ […]