ಉಡುಪಿ:ಲಯನ್ಸ್ ಕ್ಲಬ್ ಪಕೃತಿ, ಉಡುಪಿ ಮತ್ತು ರೆಡ್ ಕ್ರಾಸ್ ಸೊಸೈಟಿ, ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ
ಉಡುಪಿ:ಲಯನ್ಸ್ ಕ್ಲಬ್ ಪಕೃತಿ, ಉಡುಪಿ ಮತ್ತು ರೆಡ್ ಕ್ರಾಸ್ ಸೊಸೈಟಿ, ಇವರ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮವು ದಿನಾಂಕ : 26-01-2025ನೇ ಅದಿತ್ಯವಾರ ಸಮಯ : ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 3.00ರವರೆಗೆ ಉಡುಪಿ ಜಿಲ್ಲಾ ಘಟಕದಲ್ಲಿ ನಡೆಯಲಿದೆ. ಈ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಲಯನ್ ಶೇಖರ್ ಡಿ. ಶೆಟ್ಟಿ ಅಧ್ಯಕ್ಷರು, ಲಯನ್ ಕ್ಲಬ್ ಪಕೃತಿ ಇವರು ಉದ್ಘಾಟಿಸಲಿದ್ದಾರೆ. ರಕ್ತದಾನ ಪವಿತ್ರ ದಾನ…ಈ ಮೂಲಕ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: […]
ಮಂಗಳೂರು: ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಢಿಕ್ಕಿ: ವಾಹನ ಸವಾರ ಮೃತ್ಯು.
ಸುರತ್ಕಲ್, ಡಿ.20: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ದ್ವಿಚಕ್ರ ವಾಹನ ಬೆನ್ನಟ್ಟಿದ್ದ ಪೊಲೀಸ್ ಸಿಬ್ಬಂದಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ […]
ಮಂಗಳೂರು: ಬಾಲಕಿ, ಮಹಿಳೆಯ ವೀಡಿಯೊ ಚಿತ್ರೀಕರಿಸಿದ ಪ್ರಕರಣ; ಆರೋಪಿಗೆ 5 ವರ್ಷ ಕಾರಾಗೃಹ ಶಿಕ್ಷೆ – ನ್ಯಾಯಾಲಯ ತೀರ್ಪು ಪ್ರಕಟ.
ಮಂಗಳೂರು: ಅಪ್ರಾಪ್ತೆ ಮತ್ತು ವಿವಾಹಿತೆಯು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದುದನ್ನು ತನ್ನ ಮೊಬೈಲ್‌ನಲ್ಲಿ ವೀಡಿಯೋ ಮಾಡಿದ ತೋಟ ಬೆಂಗ್ರೆ ನಿವಾಸಿ ರಂಶೀದ್ ಎಂಬಾತನ ಆರೋಪವು ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ -1 (ಪೊಕ್ಸೊ)ದಲ್ಲಿ ಸಾಬೀತಾಗಿದೆ. ಆರೋಪಿಗೆ ನ್ಯಾಯಾಲಯವು ಐದು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂದಂಡ ವಿಧಿಸಿ ತೀರ್ಪು ನೀಡಿದೆ. 2024ರ ಜುಲೈ 5 ಮತ್ತು 7ರಂದು ರಾತ್ರಿ ಆರೋಪಿಯು ಅಪ್ರಾಪ್ತೆ ಮತ್ತು ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ತನ್ನ ಮೊಬೈಲ್ […]
ಜರ್ಮನಿ: ಕ್ರಿಸ್ಮಸ್ ಮಾರುಕಟ್ಟೆಗೆ ಕಾರು ನುಗ್ಗಿಸಿದ ವ್ಯಕ್ತಿ; ಇಬ್ಬರು ಸಾವು, 60ಕ್ಕೂ ಹೆಚ್ಚು ಜನರಿಗೆ ಗಾಯ.
ಮ್ಯಾಗ್ಡೆಬರ್ಗ್: ಪೂರ್ವ ಜರ್ಮನಿಯ ಮ್ಯಾಗ್ಡೆಬರ್ಗ್ ನಗರದಲ್ಲಿ ನಿನ್ನೆ ಶುಕ್ರವಾರ ಜನನಿಬಿಡ ಕ್ರಿಸ್‌ಮಸ್ ಮಾರುಕಟ್ಟೆಗೆ ಕಾರೊಂದು ನುಗ್ಗಿ ಇಬ್ಬರು ಮೃತಪಟ್ಟು ಕನಿಷ್ಠ 60 ಮಂದಿ ಗಾಯಗೊಂಡಿದ್ದಾರೆ, ಇದೊಂದು ಉದ್ದೇಶಪೂರ್ವಕ ದಾಳಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾರಾಂತ್ಯ ವ್ಯಾಪಾರಿಗಳಿಂದ ತುಂಬಿ ತುಳುಕುತ್ತಿದ್ದಾಗ, ಕಳೆದ ರಾತ್ರಿ 7 ಗಂಟೆ ಸುಮಾರಿಗೆ ಮಾರುಕಟ್ಟೆಗೆ ಕಾರು ನುಗ್ಗಿದ ಕೂಡಲೇ ಚಾಲಕನನ್ನು ಘಟನಾ ಸ್ಥಳದಲ್ಲಿ ಬಂಧಿಸಲಾಯಿತು. ಜರ್ಮನ್ ನ್ಯೂಸ್ ಏಜೆನ್ಸಿ ಡಿಪಿಎ ಬಿತ್ತರಿಸಿದ ದೃಶ್ಯಾವಳಿಗಳಲ್ಲಿ ರಸ್ತೆಯ ಮಧ್ಯದಲ್ಲಿ ಕಾಲ್ನಡಿಗೆಯಲ್ಲಿ ಹೋಗುತ್ತಿದ್ದ ಶಂಕಿತನ ಬಂಧನವಾಗಿದೆ. ಘಟನೆಯಲ್ಲಿ 15 […]
ನಾಳೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆ 2024
ಕಾರ್ಕಳ ಡಿ. 21: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನಡೆಸುತ್ತಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥಾಪಕರ ದಿನಾಚರಣೆಯು ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ 22 ಡಿಸೆಂಬರ್ 2024 ಆದಿತ್ಯವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ 2024 ನೇ ಸಾಲಿನ ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಅಡ್ವಾನ್ಸ್ಡ್ ಮೂಲಕ ಐ ಐ ಟಿ ಪ್ರವೇಶ ಪಡೆದ ಮೂವರು ವಿದ್ಯಾರ್ಥಿಗಳನ್ನು, ಜೆ.ಇ.ಇ ಮೈನ್ಸ್ ಮೂಲಕ ಎನ್.ಐ.ಟಿ ಪ್ರವೇಶ ಪಡೆದ ಎಂಟು ವಿದ್ಯಾರ್ಥಿಗಳನ್ನು, ನೀಟ್ ಮೂಲಕ ಎಂ.ಬಿ.ಬಿ.ಎಸ್. ಪ್ರವೇಶ ಗಳಿಸಿದ 155 ವಿದ್ಯಾರ್ಥಿಗಳನ್ನು, ಸಿ. ಎ. […]