ಉಡುಪಿ:ಅಂಗನವಾಡಿ ವಿವಿಧ ಹುದ್ದೆ: ಅರ್ಜಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ
ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ […]
ಉಡುಪಿ:ಬೈ.ಪ.ಪಂಚಾಯತ್: ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಪರವಾನಗಿ
ಉಡುಪಿ: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ತಂಬಾಕು ಉತ್ಪನ್ನಗಳ ಮಾರಾಟಗಾರರು, ಕಡ್ಡಾಯವಾಗಿ ಪ್ರತ್ಯೇಕ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬೇಕು ಮತ್ತು ಶಾಲಾ ಆವರಣದಿಂದ ಕನಿಷ್ಟ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕೋಟ್ಪಾ 2003 ರ ಕಾಯಿದೆಯಂತೆ ನಿಷೇಧಿಸಲಾಗಿದ್ದು, ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ರದ್ದುಪಡಿಸಿ, ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್‌ನ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಉಡುಪಿ: ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಇವರ ಸಿ.ಎಸ್.ಆರ್ ನಿಧಿಯಿಂದ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಸಂಸ್ಥೆಯವರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯ ರಾಜ್ಯ ಮಹಿಳಾ ನಿಲಯದ ನಿವಾಸಿನಿಯರಿಗೆ 21 ದಿನಗಳ ಸೀರೆಕುಚ್ಚು, ಎಂಬ್ರಾಯಿಡರಿ ಹಾಗೂ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಗರದ ನಿಟ್ಟೂರು ರಾಜ್ಯ ಮಹಿಳಾ ನಿಲಯದಲ್ಲಿ ನಡೆಯಿತು. ರೋಬೋಸಾಫ್ಟ್ ಟೆಕ್ನಾಲಜಿಸ್ ಸಂಸ್ಥೆಯ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ (ಆಕೌಂಟ್ಸ್) ಕೃಷ್ಣರಾಜ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಮಾನವ ಸಂಪನ್ಮೂಲದ ಮೇಲೆ ಮಾಡುವ ಹೂಡಿಕೆಯು ದೀರ್ಘಕಾಲದ […]
ಉಡುಪಿ:ಯುವತಿ ನಾಪತ್ತೆ
ಉಡುಪಿ: ಕಾಪು ತಾಲೂಕು ಪಡು ಗ್ರಾಮದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದು, ಡಿಗ್ರಿ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡಿಕೊಂಡಿದ್ದ ಕವಿತಾ (20) ಎಂಬ ಯುವತಿಯು ಡಿಸೆಂಬರ್ 20 ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ […]
ಉಡುಪಿ:ಗ್ರಾಮ ಪಂಚಾಯತ್ ಚುನಾವಣೆ: ಚುನಾವಣಾಧಿಕಾರಿಗಳ ನೇಮಕ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಬರುವ 45- ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ) ನಿಯಮ 1995 ರ ನಿಯಮ (3) ಹಾಗೂ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45(1) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಅಕ್ಷರ ದಾಸೋಹ ಸಹಾಯಕ […]