ಉಡುಪಿ: ಕ್ರಿಸ್ಮಸ್ ಆಚರಣೆಗೆ ಸಜ್ಜುಗೊಂಡ ಚರ್ಚ್ ಗಳು; ಇಂದು ರಾತ್ರಿ ಹಬ್ಬದ ಸಂಭ್ರಮ
ಉಡುಪಿ: ಕರಾವಳಿಯಲ್ಲಿ ಕ್ರಿಸ್ಮಸ್ ಹಬ್ಬದ ಕೊನೇ ಹಂತದ ಸಿದ್ಧತೆಗಳು ನಡೆಯುತ್ತಿವೆ. ಡಿಸೆಂಬರ್ 24ರ ಮಧ್ಯರಾತ್ರಿಯ ವೇಳೆ ಕ್ರಿಸ್ತರು ಜನಿಸಿದ ಘಳಿಗೆಯನ್ನು ಸ್ಮರಿಸಿ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಸಲಿದೆ. ಮಂಗಳವಾರ ರಾತ್ರಿ ಎಲ್ಲ ಚರ್ಚ್ ಗಳಲ್ಲಿ ಕ್ರಿಸ್ಮಸ್ ಹಬ್ಬದ ಜಾಗರಣೆ ಆಚರಿಸಿ ಕ್ರಿಸ್ತ ಜಯಂತಿಯ ವಿಶೇಷ ಬಲಿಪೂಜೆಗಳನ್ನು ಸಲ್ಲಿಸುತ್ತಾರೆ. ಕ್ಯಾರೊಲ್ ಗಾಯನದೊಂದಿಗೆ ಸಂಭ್ರಮಾಚರಣೆ ಆರಂಭವಾಗುತ್ತದೆ. ನಗರದ ಎಲ್ಲ ಚರ್ಚ್‌ಗಳಲ್ಲಿ ಮಂಗಳವಾರ ಸಂಜೆ 7 ಗಂಟೆಯಿಂದ ಹಬ್ಬದ ಮೆರುಗು ಶುರುವಾಗುತ್ತದೆ. ಕ್ಯಾರೊಲ್‌ಗಳ ಗಾಯನದ ಬಳಿಕ ಧರ್ಮಗುರುಗಳ ನೇತೃತ್ವದಲ್ಲಿ ಬಲಿಪೂಜೆಗಳು […]
ಉಡುಪಿ:ಪ್ರತಿಯೊಬ್ಬರೂ ಗ್ರಾಹಕರ ರಕ್ಷಣೆಯ ಹಕ್ಕುಗಳ ಕುರಿತು ಮಾಹಿತಿ ಹೊಂದಿರುವುದು ಅವಶ್ಯ : ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್
ಉಡುಪಿ: ಗ್ರಾಹಕರ ರಕ್ಷಣೆಗಾಗಿಯೇ ಅನೇಕ ಹಕ್ಕು ಮತ್ತು ಕಾನೂನುಗಳಿವೆ. ಇವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಾಗ ಮಾತ್ರ ದೈನಂದಿನ ಸರಕು ಮತ್ತು ಸೇವೆಗಳನ್ನು ಪಡೆಯುವಲ್ಲಿ ಕೆಲವೊಮ್ಮೆ ಎದುರಿಸುವ ವಂಚನೆ ಮತ್ತು ಮೋಸದಿಂದ ಪಾರಾಗಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಇಂದು ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ […]
ಜ. 12ರಂದು ಮಂಗಳೂರಿನಲ್ಲಿ ‘ರಾಮಂ ಭಜೇ’ ಸೂರ್ಯಗಾಯತ್ರಿ ಅವರಿಂದ ಸಂಗೀತದ ಮೂಲಕ ರಾಮಾರಾಧನೆ
ಮಂಗಳೂರು: ಏಮ್ ಫಾರ್ ಸೇವಾ ಸಂಸ್ಥೆಯು ತನ್ನ ಚಾರಿಟಿ ಕಾರ್ಯಕ್ರಮಗಳಿಗೆ ಪೂರಕವಾಗಿ ಜ.12ರ ಸಂಜೆ 6.೦೦ರಿಂದ ಮಂಗಳೂರಿನ ಪುರಭವನದಲ್ಲಿ ನಗರದ ಸಂಗೀತ ಭಾರತಿ ಪ್ರತಿಷ್ಠಾನದಸಹಯೋಗದೊಂದಿಗೆ ಮ್ಯೂಸಿಕಲ್ ಸೆಲೆಬ್ರೇಷನ್ ಆಫ್ ರಾಮ ಎಂಬ ಪರಿಕಲ್ಪನೆಯೊಂದಿಗೆ `ರಾಮಂ ಭಜೇ ಎಂಬ ಸಂಗೀತ ಕಾರ್ಯಕ್ರಮವನ್ನುಆಯೋಜಿಸಿದ್ದು, ದೇಶದ ಹೆಸರಾಂತ ಯುವ ಕಲಾವಿದೆ ಸೂರ್ಯಗಾಯತ್ರಿ ಅವರ ಹಾಡುಗಾರಿಕೆ ನಡೆಯಲಿದೆ. ಏಮ್ ಫಾರ್ ಸೇವಾ ಸಂಸ್ಥೆಯು 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೊತ್ತ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಂಗೀತಾಸಕ್ತರಿಗೆ ಹೊಸ ರೀತಿಯಸಂಗೀತಾನುಭವ ನೀಡಬೇಕು ಎಂಬ ಉದ್ದೇಶದಿಂದ […]
ಉಡುಪಿ: ಆಯತಪ್ಪಿ ತೋಡಿಗೆ ಬಿದ್ದು ವ್ಯಕ್ತಿ ಸಾವು
ಉಡುಪಿ: ಉಡುಪಿ ನಗರದ ಶಿರಬೀಡು ಪ್ರಸನ್ನ ಗಣಪತಿ ದೇವಸ್ಥಾನದ ಸಮೀಪ ನೀರು ಹರಿಯುವ ತೋಡಿಗೆ ವ್ಯಕ್ತಿಯೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ಈ ವೇಳೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಸ್ಥಳೀಯರ ನೆರವಿನಿಂದ ವ್ಯಕ್ತಿಯನ್ನು ಮೇಲಕ್ಕೆತ್ತಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪರೀಕ್ಷಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದು, ವಾರಸುದಾರರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಟ್ರಾಫಿಕ್ ಸಮಸ್ಯೆ ನೀಗಿಸಲು ಕಲ್ಸಂಕ ದಲ್ಲಿ ಸ್ಟೀಲ್ ಬ್ರಿಡ್ಜ್ ನಿರ್ಮಾಣ: ಯಶ್ ಪಾಲ್ ಸುವರ್ಣ
ಉಡುಪಿ: ಉಡುಪಿ ನಗರದ ಪ್ರಮುಖ ರಸ್ತೆ ಹಾಗೂ ಜಂಕ್ಷನ್ ಗಳಲ್ಲಿ ಉಂಟಾಗುತ್ತಿರುವ ಟ್ರಾಫಿಕ್ ಸಮಸ್ಯೆ ಕುರಿತು ಉಡುಪಿ ನಗರಸಭೆಯ ಸಭಾಂಗಣದಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲಿಗೆ ವಿಷಯ ಪ್ರಸ್ತಾಪಿಸಿದ ಆಡಳಿತ ಪಕ್ಷದ ಸದಸ್ಯ ವಿಜಯ ಕೊಡವೂರು ಅವರು, ಅಂಬಲಪಾಡಿ ಜಂಕ್ಷನ್ನಲ್ಲಿನ ಮೇಲ್ಸೇತುವೆ ಕಾಮಗಾರಿಯಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ ಹಾಗೂ ಕಲ್ಸಂಕಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಪ್ರತಿದಿನ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಆದರೆ ಟ್ರಾಫಿಕ್ ನಿರ್ವಹಣೆಯನ್ನು ಸರಿಯಾಗಿ ಮಾಡದೆ ತೊಂದರೆ ಆಗುತ್ತಿದೆ […]