ಕಾಪು: ಜ.5 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

ಉಡುಪಿ: ಕಾಪು ತಾಲೂಕಿನ ಕಳತ್ತೂರು ಗ್ರಾ.ಪಂ ವ್ಯಾಪ್ತಿಯ ಪಡುಕಳತ್ತೂರಿನ ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಸುರತ್ಕಲ್ ಮುಕ್ಕ ಶ್ರೀನಿವಾಸ್ ಆಸ್ಪತ್ರೆ, ಶಿರ್ವದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ 2025 ರ ಜ.5 ರಂದು ನಡೆಯುವ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಕರಪತ್ರವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಬುಧವಾರ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಶ್ರೀನಿವಾಸ್ ಆಸ್ಪತ್ರೆಯು ಜನರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಈ ಆಸ್ಪತ್ರೆಯ ವೈದ್ಯರು ನಮ್ಮ […]
ಉಡುಪಿ: ಡಿ.27-28 ರಂದು ಸಿಎ ವಿದ್ಯಾರ್ಥಿಗಳ ಸಮ್ಮೇಳನ

ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ (ಐಸಿಎಐ) ಉಡುಪಿ ಶಾಖೆಯ ಆಶ್ರಯದಲ್ಲಿ “ಲೆಕ್ಕಪರಿಶೋಧನ ವಿದ್ಯಾರ್ಥಿಗಳಿಗಾಗಿ ಸಮ್ಮೇಳನ”ವನ್ನು ಇದೇ ಡಿ.27 ಮತ್ತು 28ರಂದು ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಐಸಿಎಐ ಉಡುಪಿ ಶಾಖೆಯ ಅಧ್ಯಕ್ಷ ಕಿರಣ್ ಕುಮಾರ್ ಎಚ್. ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಮೆಗಾ ಸಮ್ಮೇಳನದಲ್ಲಿ ದಕ್ಷಿಣ ಭಾರತದ ಸುಮಾರು 600 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ. ಐಸಿಎಐ ಉಪಾಧ್ಯಕ್ಷ ಚರಣ್ ಜೊತ್ ಸಿಂಗ್ ನಂದಾ ಉದ್ಘಾಟಿಸಲಿದ್ದಾರೆ. ಆ ಬಳಿಕ ಟ್ಯಾಕ್ಸೇಶನ್, ಜಿಎಸ್‌ಟಿ […]
ಉಡುಪಿ: ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್‌ನಲ್ಲಿ ವಿಶ್ವ ವಜ್ರ- ಡೈಮಂಡ್ ಪ್ರದರ್ಶನಕ್ಕೆ ಚಾಲನೆ

ಉಡುಪಿ: ನಗರದ ವಿಎಸ್‌ಟಿ ರಸ್ತೆಯ ವೆಸ್ಟ್‌ಕೋಸ್ಟ್ ಕಟ್ಟಡದಲ್ಲಿರುವ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ ಶೋರೂಂನಲ್ಲಿ ಜ.12ರವರೆಗೆ ಹಮ್ಮಿಕೊಳ್ಳಲಾದ ವಿಶ್ವ ವಜ್ರ- ಡೈಮಂಡ್ ಪ್ರದರ್ಶನಕ್ಕೆ ಇಂದು ಚಾಲನೆ ನೀಡಲಾಯಿತು. ಪ್ರದರ್ಶನವನ್ನು ಉದ್ಘಾಟಿಸಿದ ಬಿಜೆಪಿ ನಾಯಕಿ ವೀಣಾ ಎಸ್. ಶೆಟ್ಟಿ ಮಾತನಾಡಿ, ಇವತ್ತು ಡೈಮಂಡ್‌ಗಳು ಕೇವಲ ಮಹಿಳೆಯರಿಗೆ ಮಾತ್ರವಲ್ಲ ಪುರುಷರಿಗೂ ಇಷ್ಟವಾಗುತ್ತಿದೆ. ಅಂತಹ ಎಲ್ಲ ರೀತಿಯ ವಜ್ರಗಳ ಸಂಗ್ರಹವು ಸುಲ್ತಾನ್‌ನಲ್ಲಿ ಇದೆ. ಅಭಿವೃದ್ಧಿ ಹೊಂದಿರುವ ಉಡುಪಿಯಲ್ಲಿ ಸುಲ್ತಾನ್ ಗೋಲ್ಡ್ ಗ್ರಾಹಕರಿಗೆ ಉತ್ತಮ ಬೆಲೆಯಲ್ಲಿ ಆಭರಣಗಳನ್ನು ಒದಗಿಸುತ್ತಿದೆ. ಇಲ್ಲಿನ ಗ್ರಾಹಕ ಸ್ನೇಹಿ […]
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಕ್ರಿಸ್ಮಸ್ ’ ಆಚರಣೆ

ಉಡುಪಿ: ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಏಸುವಿನ ಜನ್ಮದಿನ ಕ್ರಿಸ್ಮಸ್ ಹಬ್ಬವನ್ನು ಕ್ರೈಸ್ತ ಬಾಂಧವರು ಉಡುಪಿ ಜಿಲ್ಲೆಯಾದ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು. ಹಬ್ಬದ ಅಂಗವಾಗಿ ಕ್ರೈಸ್ತರು ಮಂಗಳವಾರ ರಾತ್ರಿಯೇ ಸಮೀಪದ ಚರ್ಚುಗಳಿಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸ್ನೇಹಿತರು, ಬಂಧು ಬಾಂಧವರೊಂದಿಗೆ ಶುಭಾಶಯ ವಿನಿಮಯ ಮಾಡಿಕೊಂಡರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಸಂಜೆಯ ಬಲಿಪೂಜೆಯನ್ನು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಅರ್ಪಿಸಿ ಹಬ್ಬದ ಸಂದೇಶ ನೀಡಿದರು. ಈ […]
ಉಡುಪಿ: ಮೊಬೈಲ್ ವಿಚಾರಕ್ಕೆ ಕಲ್ಲಿನಿಂದ ಹೊಡೆದು ವ್ಯಕ್ತಿ ಮೇಲೆ ಹಲ್ಲೆ!

ಉಡುಪಿ: ಮೊಬೈಲ್ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಹಲ್ಲೆ ನಡೆಸುವ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರವಿ(30) ಹಲ್ಲೆಗೊಳಗಾದ ವ್ಯಕ್ತಿ. ರವಿ ಒಂದು ವಾರದ ಹಿಂದೆ ಕೂಲಿ ಕೆಲಸಕ್ಕಾಗಿ ಉಡುಪಿಗೆ ಬಂದಿದ್ದರು. ಉಡುಪಿಯ ಮೂಡನಿಡಂಬೂರು ಬಸ್ ನಿಲ್ದಾಣ ಸಮೀಪದ ತಿರುಮಲ ಜ್ಯೂವಲೆರ್ಸ್ ಎದುರು ಸ್ನೇಹಿತ ಹನುಮಂತ ಜೊತೆ ಮೊಬೈಲ್ ವಿಚಾರವಾಗಿ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಹನುಮಂತ , ರವಿಯವರ ತುಟಿ ಮತ್ತು ಕೆನ್ನೆಯ ಭಾಗಕ್ಕೆ […]