ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರ ಬೀಜಾಡಿ ಮೂಲದ ಯೋಧ ಅನೂಪ್ ಪೂಜಾರಿ ಹುತಾತ್ಮ

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದಲ್ಲಿ ಸೇನಾ ವಾಹನ ಸ್ಕಿಡ್ ಆಗಿ ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕರ್ನಾಟಕದ ಮೂವರು ಯೋಧ ಸೇರಿ ಐವರು ಮೃತಪಟ್ಟಿದ್ದು, ಈ ಪೈಕಿ ಓರ್ವ ಯೋಧ ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಅವರು ಹುತಾತ್ಮರಾಗಿದ್ದಾರೆ. ಬೀಜಾಡಿ ನಿವಾಸಿ ಚಂದು ಪೂಜಾರಿ ಮತ್ತು ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಹುತಾತ್ಮ ಯೋಧ […]

ಹೆಬ್ರಿ: ಜೇಣುನೋಣ ದಾಳಿಗೆ ಕೃಷಿಕೂಲಿ ಕಾರ್ಮಿಕ ಮೃತ್ಯು

ಹೆಬ್ರಿ, ಡಿ.24: ಜೇಣುನೋಣ ಏಕಾಏಕಿ ದಾಳಿ ನಡೆಸಿದ ಪರಿಣಾಮ ಕೃಷಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಾಲ್ಕೂರು ಎಂಬಲ್ಲಿ ನಡೆದಿದೆ. ಮೃತರನ್ನು ನಾಲ್ಕೂರು ನಿವಾಸಿ ಕೃಷ್ಣ(53)ಎಂದು ಗುರುತಿಸಲಾಗಿದೆ. ಇವರು ಡಿ.19ರಂದು ಗದ್ದೆಯ ಬಳಿ ಸೊಪ್ಪು ಸವರುತ್ತಿರುವಾಗ ಜೇಣು ನೊಣಗಳು ಏಕಾಎಕಿ ದಾಳಿ ಮಾಡಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಫಲಕಾರಿಯಾಗದೆ ಡಿ.23ರಂದು ಬೆಳಗ್ಗೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ತರಕಾರಿ ವ್ಯಾಪಾರಿ ನಾಪತ್ತೆ

ಬ್ರಹ್ಮಾವರ, ಡಿ.24: ಬ್ರಹ್ಮಾವರದಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಹೇರೂರು ನಿವಾಸಿ ಜಯಕರ(44) ಎಂಬವರು ಡಿ.22ರಂದು ಮಧ್ಯಾಹ್ನ ಮನೆಯಿಂದ ಹೋದವರು ಈವರೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಯುವನಿಧಿ ಯೋಜನೆಗೆ ನೋಂದಣಿ ಪ್ರಾರಂಭ.

ಉಡುಪಿ: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆಯ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಮಣಿಪಾಲದ ತಮ್ಮ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ ಚಂದ್ರಶೇಖರ್ ನಾಯ್ಕ್, ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ 1500 ರೂ.ಗಳನ್ನು ಪ್ರತಿ ತಿಂಗಳು […]