ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ: ಡಿ.27 ರಂದು ಸರಕಾರಿ ರಜೆ ಘೋಷಣೆ.

ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ, ಹಾಗೂ ಇಂದು (ಡಿ.27) ಸರಕಾರಿ ರಜೆ ಘೋಷಿಸಲಾಗಿದೆ. ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 2004 ರಿಂದ 2014 ರವರೆಗೆ ಅವರು ದೇಶದ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ Dr.Manmohan Singh ನಿಧನ; ಆರ್ಥಿಕ ಸುಧಾರಣೆಯ ಹರಿಕಾರ ಇನ್ನಿಲ್ಲ!

ನವದೆಹಲಿ: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ವಯೋ‌ಸಹಜ ಕಾಯಿಲೆಯಿಂದ ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಇಂದು ರಾತ್ರಿ ನಿಧನ ಹೊಂದಿದರು. 92 ವರ್ಷ ವಯಸ್ಸಿನ ಮನಮೋಹನ್ ಸಿಂಗ್ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ರಾತ್ರಿ ಇಹಲೋಕ ತ್ಯಜಿಸಿದರು. 2004ರಿಂದ 2014ರ ವರೆಗೆ ಭಾರತ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಇಂದಿರಾ ಗಾಂಧಿ ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಆರ್ಥಿಕ ಸಲಹೆಗಾರರಾಗಿ […]

ಉಡುಪಿ:ಸಮಗ್ರ ಕೃಷಿ ಪದ್ಧತಿ ತರಬೇತಿ

ಉಡುಪಿ: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಇವರ ಸಹಯೋಗದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅಥವಾ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಗ್ರ ಕೃಷಿ ಪದ್ಧತಿಯಲ್ಲಿ 5 ದಿನಗಳ ಕಾಲ ತರಬೇತಿಯನ್ನು 2025 ರ ಜನವರಿ 7 ರಿಂದ 11 ರ ವರೆಗೆ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಕೃಷಿ ಭೂಮಿಯ ಪಹಣಿ ಮತ್ತು ಆಧಾರ್ […]

ಉಡುಪಿ:ಬಜೆಟ್ ತಯಾರಿ: ಪೂರ್ವಭಾವಿ ಸಭೆ

ಉಡುಪಿ: ಉಡುಪಿ ನಗರಸಭೆಯ 2025-26 ನೇ ಸಾಲಿನ ಬಜೆಟ್ ತಯಾರಿಯ ಬಗ್ಗೆ ನಗರಸಭಾ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಅವಶ್ಯಕ ಅಭಿವೃದ್ಧಿ ಕೆಲಸ ಕಾರ್ಯಗಳ ವಿಚಾರ ವಿನಿಮಯಗಳ ಕುರಿತು ಎರಡನೇ ಸುತ್ತಿನ ಪೂರ್ವಭಾವಿ ಸಾರ್ವಜನಿಕ ಸಮಾಲೋಚನಾ ಸಭೆಯು ಡಿಸೆಂಬರ್ 30 ರಂದು ಮಧ್ಯಾಹ್ನ 3 ಗಂಟೆಗೆ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಸದರಿ ಸಭೆಯಲ್ಲಿ ಭಾಗವಹಿಸಿ, ಸಲಹೆ-ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಪೂರ್ವಭಾವಿ ಮರು ಪರೀಕ್ಷೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ-ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಈ ಕೆಳಗಿನಂತೆ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ […]