ಉಡುಪಿ:ಪೂರ್ವಭಾವಿ ಮರುಪರೀಕ್ಷೆ : ನಿಷೇಧಾಜ್ಞೆ ಜಾರಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ […]
ಉಡುಪಿ:ಎನ್.ಸಿ.ಸಿ ಕೆಡೆಟ್‌ಗಳಿಗೆ ವಿವಿಧ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಯಕ್ರಮ
ಉಡುಪಿ: ಎನ್.ಸಿ.ಸಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವು ಉದ್ಯಮಶೀಲತೆ ಮತ್ತು ಸ್ಟಾರ್ಟಪ್ ಕೌಶಲ್ಯಗಳನ್ನು ವೃದ್ಧಿಸಲು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎನ್.ಸಿ.ಸಿ ಎಕ್ಸ್ಚೇಂಜ್ ಆಫ್ ಪಾರ್ಟಿಸಿಪೆಂಟ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಮತ್ತು ಮಣಿಪಾಲ್ ಕೌಶಲ್ಯಾಭಿವೃದ್ಧಿ ಕೇಂದ್ರದ ಸಹಯೋಗದಲ್ಲಿ ಆಯ್ದ ಎನ್.ಸಿ.ಸಿ ಕೆಡೆಟ್‌ಗಳಿಗೆ ವಿವಿಧ ಸಾಫ್ಟ್ ಸ್ಕಿಲ್ ಡೆವಲಪ್‌ಮೆಂಟ್ ಕಾರ್ಯಕ್ರಮವು ಗುರುವಾರ ನಗರದ ಮಣಿಪಾಲದ ಮಣಿಪಾಲ್ ಇನ್ಸ್ಟಿಟ್ಯೂಟ್ ಆಪ್ ಟೆಕ್ನಾಲಜಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿವೃತ್ತ ಬ್ರಿಗೇಡಿಯರ್ ಹಾಗೂ ಎಂ.ಎಸ್.ಡಿ.ಸಿ ಚೇರ್‌ಮ್ಯಾನ್ ಸುರ್ಜಿತ್ ಸಿಂಗ್ ಪೋಬ್ಲಾ ಮಾತನಾಡಿ, […]
ಕಾರ್ಕಳ: ಹಿರಿಯ ಪತ್ರಕರ್ತ ಬಿ.ಎಂ.ಬಶೀರ್ ಗೆ ʼಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿʼ ಪ್ರದಾನ
ಉಡುಪಿ: ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಬಿ.ಎಂ.ಬಶೀರ್ ಅವರಿಗೆ ʼಡಾ. ಶೇಖರ್ ಅಜೆಕಾರ್ ರಾಜ್ಯ ಪ್ರಶಸ್ತಿʼ ಪ್ರದಾನ ಮಾಡಲಾಯಿತು. ಕಾರ್ಕಳದ ಎಸ್‌ವಿಟಿ ಕಾಲೇಜು ಸಭಾಂಗಣದಲ್ಲಿ ಇಂದು ನಡೆದ ಸಮಾರಂಭದಲ್ಲಿ ನಿವೃತ್ತ ನ್ಯಾಯಮೂರ್ತಿ ನ್ಯಾ. ಸಂತೋಷ್ ಹೆಗ್ಡೆ ಪ್ರಶಸ್ತಿ ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಮಾಜದ ಕಣ್ಣುಗಳು. ಅವರೇ ಸಮಾಜವನ್ನು ಬದಲಾಯಿಸುವವರು. ಮಾನವೀಯತೆಯನ್ನು ರೂಢಿಸಿಕೊಂಡು, ಶಾಂತಿ ಸೌಹಾರ್ದ ಭಾವನೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಭ್ರಷ್ಟಾಚಾರ ವಿರೋಧಿ ನಿಲುವಿಗೆ ಬದ್ಧರಾಗಿ ಉತ್ತಮ ಸಮಾಜ […]
ಬ್ರಹ್ಮಾವರದ ಹೆಸರಾಂತ ಪ್ರೊಡಕ್ಷನ್ & ಪ್ರೊಸೆಸಿಂಗ್ ಇಂಡಸ್ಟ್ರಿಯಲ್ಲಿ ಕೆಲಸಕ್ಕೆ ಬೇಕಾಗಿದ್ದಾರೆ.
ಕುಂದಾಪುರ: ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಅನೂಪ್ ಪೂಜಾರಿ ಅಂತ್ಯ ಸಂಸ್ಕಾರ
ಉಡುಪಿ: ಜಮ್ಮು ಕಾಶ್ಮೀರದಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾದ ಯೋಧ ಅನೂಪ್ ಪೂಜಾರಿ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಕುಂದಾಪುರ ತಾಲೂಕಿನ ಬೀಜಾಡಿ ಕಡಲ ತೀರದಲ್ಲಿ ಇಂದು ನೆರವೇರಿತು. ಅನೂಪ್ ಪಾರ್ಥಿವ ಶರೀರಕ್ಕೆ ಸೇನಾಧಿಕಾರಿಗಳು, ಯೋಧರು ಗೌರವ ವಂದನೆ ಸಲ್ಲಿಸಿದರು. ಬಳಿಕ ಮೂರು ಸುತ್ತು ಕುಶಾಲ ತೋಪು ಸಿಡಿಸಿ ಪೊಲೀಸ್ ಗೌರವ ಸಲ್ಲಿಸಲಾಯಿತು. ಪತ್ನಿ ಮಂಜುಶ್ರಿಗೆ ತ್ರಿವರ್ಣ ಧ್ವಜ ಹಸ್ತಾಂತರ ಮಾಡಲಾಯಿತು. ಸಮುದ್ರ ತೀರದಲ್ಲಿ ಸಹೋದರ ಶಿವರಾಂ ಅವರು ಪಾರ್ಥಿವ ಶರೀರಕ್ಕೆ ಅಗ್ನಿ […]