ಉಡುಪಿ: ಯೋಧ ಅನೂಪ್ ಪೂಜಾರಿ ದಂಪತಿ ಹಾಡಿದ “ಅಪರಂಜಿ ಚಿನ್ನವೋ ಚಿನ್ನವೋ” ಹಾಡು ವೈರಲ್

ಉಡುಪಿ: ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ ಸಾವು ಜನರನ್ನು ನೋವಿನ ಕಡಲಿಗೆ ತಳ್ಳುವಂತೆ ಮಾಡಿದೆ. 33 ರ ಹರೆಯ, ಕುಟುಂಬದ ಆಕ್ರಂದನ, ಪುಟ್ಟ ಮಗುವಿನ ಅಳು ಊರ ಜನರ ಪ್ರೀತಿ ಕೋಟ್ಯಾಂತರ ಜನರನ್ನು ವಿಚಲಿತಗೊಳಿಸಿದೆ. ಅನೂಪ್ ಪೂಜಾರಿ ಮತ್ತು ಮಂಜುಶ್ರೀಯದ್ದು ಪ್ರೇಮ ವಿವಾಹ. ಸಂಗೀತಾಸಕ್ತರಾದ ಇಬ್ಬರಿಗೆ ಫೇಸ್ ಬುಕ್ ನಲ್ಲಿ ಪರಿಚಯವಾಗಿತ್ತು. ಸಂಗೀತ ಮತ್ತು ಪ್ರೀತಿಗೆ ಜಾತಿ ಅಡ್ಡಿಯಾಗಲಿಲ್ಲ. ಎರಡು ಮನೆಯವರನ್ನು ಒಪ್ಪಿಸಿ 2022 ರಲ್ಲಿ ಮದುವೆಯಾಗಿದ್ದರು. ಅನೂಪ್ ಮತ್ತು ಮಂಜುಶ್ರೀ ಆಪ್ತರ, ಸಂಬಂಧಿಕರ ಕಾರ್ಯಕ್ರಮಗಳಲ್ಲಿ ಹಾಡುತ್ತಿದ್ದರು. […]

ಮೊಬೈಲ್‌ ಕೊಡದಿದ್ದಕ್ಕೆ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ.

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿಯಲ್ಲಿ ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆ ಯತ್ನ ಮಾಡಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.26) ನಡೆದಿದೆ. ಧನುಶ್ರೀ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಳೆದ ಸೋಮವಾರ ಸಂಜೆ 7.30 ಗೆ ಕಾಲೇಜು ಮುಗಿಸಿ ಮನೆಗೆ ಬಂದಾಗ ಘಟನೆ ನಡೆದಿದೆ. ಮೊಬೈಲ್ ಹಾಗೂ ಟಿವಿ ನೋಡಬೇಡ ಎಂದು ತಾಯಿ ಹೇಳಿದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಳೆನಾಶಕ ಕುಡಿದು ಆತ್ಮಹತ್ಯೆ ಯತ್ನ ಮಾಡಿದ್ದು, ಆಯನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗಿತ್ತು. ನಂತರ […]

ಮಂಗಳೂರು:ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳದಿಂದ ಆಗ್ರಹ

ಮಂಗಳೂರು: ಹೊಸ ವರ್ಷದ ನೆಪದಲ್ಲಿ ಯುವ ಜನತೆಯನ್ನು ಗುರಿಯಾಗಿಸಿ ನಡೆಸುವ ಎಲ್ಲ ಕಾರ್ಯಕ್ರಮಗಳನ್ನು ಪೊಲೀಸ್‌ ಇಲಾಖೆ ನಿರ್ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಪೊಲೀಸ್‌ ಇಲಾಖೆಗೆ ಮನವಿ ಮಾಡಿವೆ. ಹಲವಾರು ವರ್ಷದಿಂದ ಡ್ರಗ್ಸ್‌ ಮಾಫಿಯಾ ಕರಾವಳಿ ಭಾಗದಲ್ಲಿ ವ್ಯಾಪಕವಾಗಿದ್ದು, ಪಾರ್ಟಿಗಳಿಗೆ ಪೂರೈಕೆಯಾಗುತ್ತಿದೆ. ಸಾಕಷ್ಟು ಯುವಕ ಯುವತಿಯರ ಜೀವನ ಹಾಳಾಗಿದೆ. ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮತ್ತು ಸರಕಾರದ ಗಮನಕ್ಕೆ ಸಾಕಷ್ಟು ಬಾರಿ ಇದನ್ನು ತರಲಾಗಿದೆ. ಮಂಗಳೂರಿನಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತಿದ್ದು, ಇದರ ಹಿಂದೆ ದೊಡ್ಡ […]

ಮಂಗಳೂರು: ಡಿ.28 ರಂದು 8ನೇ ವರ್ಷದ ‘ಮಂಗಳೂರು ಕಂಬಳ’

ಮಂಗಳೂರು: ಬಂಗ್ರಕೂಳೂರಿನ ಗೋಲ್ಡ್‌ ಪಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.28 ಹಾಗೂ 29ರಂದು 8ನೇ ವರ್ಷದ “ಮಂಗಳೂರು ಕಂಬಳ’ ಅತ್ಯಂತ ಸಂಭ್ರಮ ಸಡಗರದಿಂದ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಕಂಬಳವು ಕಳೆದ 7 ವರ್ಷಗಳಿಂದ ಮಂಗಳೂರಿನ ಗೋಲ್ಡ್‌ ಪಿಂಚ್‌ ಸಿಟಿಯಲ್ಲಿ ಎಂಆರ್‌ಜಿ ಗ್ರೂಪ್‌ನ ಚೇರ್ಮನ್‌ ಪ್ರಕಾಶ್‌ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ನಡೆಯುತ್ತಿದೆ. ಹುತಾತ್ಮ ಯೋಧ, […]

ರಾಜ್ಯರಸ್ತೆ ಸಾರಿಗೆ ನಿಗಮ: ಮಂಗಳೂರು-ಬೆಂಗಳೂರು 4 ಎಸಿ ಸ್ಲೀಪರ್ ಅಂಬಾರಿ ಉತ್ಸವ ಬಸ್‌ಗಳ ಚಾಲನೆ.

ಮಂಗಳೂರು: ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗಕ್ಕೆ 4 ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ವಾಹನಗಳು ಸೇರ್ಪಡೆಗೊಂಡಿವೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕುಂದಾಪುರ-ಮಂಗಳೂರು-ಹಾಸನ ಬೆಂಗಳೂರು ಹಾಗೂ ಮಂಗಳೂರು-ಹಾಸನ- ಬೆಂಗಳೂರು ಮಾರ್ಗದಲ್ಲಿ ಹೊಸ ಎಸಿ ಸ್ಲೀಪರ್ ಅಂಬಾರಿ ಉತ್ಸವ ಬಸ್‌ಗಳು ಸಂಚರಿಸಲಿವೆ. ಮಂಗಳೂರಿನಿಂದ ಬೆಂಗಳೂರಿಗೆ ಪ್ರತಿದಿನ ರಾತ್ರಿ 10:15ಕ್ಕೆ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ 11:01ಕ್ಕೆ ಹೊರಡಲಿದೆ. ಕುಂದಾಪುರದಿಂದ ರಾತ್ರಿ 8:30ಕ್ಕೆ ಹಾಗೂ ಬೆಂಗಳೂರಿನಿಂದ ರಾತ್ರಿ 8:30ಕ್ಕೆ ಹೊರಡಲಿದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ಬಸ್ ನಿಲ್ದಾಣ:7760990720, […]