ಪಡುಬಿದ್ರಿ: ಕಾರು ಢಿಕ್ಕಿ; ಪಾದಚಾರಿ ಮೃತ್ಯು.

ಪಡುಬಿದ್ರಿ: ಪಡುಬಿದ್ರಿ ಪೊಲೀಸ್‌ ಠಾಣೆ ವ್ಯಾಪ್ತಿಯ ಬಂಟರ ಸಂಘದ ಎದುರು ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್‌ (65) ಮೃತಪಟ್ಟಿದ್ದಾರೆ. ಮಂಗಳೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ಶೇಖರ ಅವರು ನಡೆದುಕೊಂಡು ಹೋಗುತ್ತಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. […]

ಅಂಬಲಪಾಡಿ: ಹೆದ್ದಾರಿ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಹೊಂಡಕ್ಕೆ ಮಗುಚಿ ಬಿದ್ದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾ.ಹೆ. ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಮಗುಚಿಬಿದ್ದ ಘಟನೆ ಅಂಬಲಪಾಡಿ ಜಂಕ್ಷನ್ ರಾ.ಹೆ.66ರಲ್ಲಿ ಇಂದು ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇಲ್ಸೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು […]

ಮೂಡುಬಿದಿರೆ:ಆಳ್ವಾಸ್ ಇಂಗ್ಲಿಷ್ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭ

ವಿದ್ಯಾಗಿರಿ: ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಹೇಳಿದರು. ಆಳ್ವಾಸ್ ಮುಂಡ್ರೆದೆಗುತ್ತು ಕೆ ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಅಂತಹ ವಿದ್ಯೆಗೆ ಏನು ಬೆಲೆ? ಮಾನವೀಯ ಸಂವೇದನೆಯನ್ನುAಟು ಮಾಡುವ ಶಿಕ್ಷಣ ನಮಗೆ ಬೇಕಾಗಿದೆ. […]

ಉಡುಪಿ:ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು IEEE ಯುರೇಕಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ

ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ದಿನಾಂಕ 15 ಡಿಸೆಂಬರ್ 2024 ರಂದು ಪ್ರತಿಷ್ಠಿತ IEEE ಪುಣೆ ವಿಭಾಗವು ಪುಣೆಯ ರಮೀ ಗ್ರ್ಯಾಂಡ್ ಹೋಟೆಲಿನಲ್ಲಿ ಆಯೋಜಿಸಿದ್ದ “IEEE ಯುರೇಕಾ” ಸ್ಪರ್ಧೆಯಲ್ಲಿಬಹುಮಾನವನ್ನು ಪಡೆದಿರುತ್ತಾರೆ. ಈ ಸ್ಪರ್ಧೆಯಲ್ಲಿ ದಕ್ಷಿಣ ಭಾರತದ ವಿವಿಧ ಕಾಲೇಜುಗಳಿಂದ ಒಟ್ಟು 100ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದು ಅಂತಿಮ ಸುತ್ತಿಗೆ 15 ತಂಡಗಳು ಆಯ್ಕೆಯಾಗಿದೆ. ಅಂತಿಮ ಸುತ್ತಿಗೆ ಆಯ್ಕೆಯಾದನಮ್ಮ ವಿದ್ಯಾಸಂಸ್ಥೆಯ ತಂಡದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಡಾಟಾ ಸೈನ್ಸ್ ವಿಭಾಗದ ಪ್ರಥಮ್ ಎಲ್ ಕಾಮತ್, ಆರ್ಟಿಫಿಶಿಯಲ್ […]