ಉಡುಪಿ:ಪ್ರೋತ್ಸಾಹ ಧನ :ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 6 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂರ್ಪಕಿಸಬಹುದಾಗಿದೆ ಎಂದು […]

ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ನಗರದ ಖಾಸಗಿ ಬಸ್ಸಿನ ಚೆಕಿಂಗ್ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ (40) ಎಂಬ ವ್ಯಕ್ತಿಯು ಡಿಸೆಂಬರ್ 4 ರಂದು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋದಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಹೆಚ್ಚಿನ ಮಾಹಿತಿ ದೊರತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338 ಅಥವಾ ಪಿ.ಐ ಕುಂದಾಪುರ ಠಾಣೆ ಮೊ.ನಂ:9480805455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಉಡುಪಿ: ಕಳೆದು ಹೋಗಿದ್ದ 18 ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಉಡುಪಿ: ಕಳೆದು ಹೋಗಿದ್ದ 18 ಮಂದಿಯ ಮೊಬೈಲ್ ಗಳನ್ನು ಪತ್ತೆ ಮಾಡಿರುವ ನಗರ ಪೊಲೀಸರು, ಸೋಮವಾರ ಆ ಮೊಬೈಲ್ ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದರು. ಸಾರ್ವಜನಿಕರು ತಾವು ಕಳೆದುಕೊಂಡಿದ್ದ ಮೊಬೈಲ್ ಗಳ ಪತ್ತೆಗಾಗಿ ಸೆಂಟ್ರಲ್ ಇಕ್ವಿಪ್ ಮೆಂಟ್ ರಿಜಿಸ್ಟರ್ (ಸಿಇಐಆರ್) ಮತ್ತು ಕೆಎಸ್ ಪಿ ಇ-ಲಾಸ್ಟಸ್ಟ್ ನಲ್ಲಿ ದೂರು ದಾಖಲಿಸಿದ್ದರು. ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಕಳೆದುಕೊಂಡಿದ್ದ ಒಟ್ಟು 3,53,400 ರೂ. ಮೌಲ್ಯದ ಒಟ್ಟು 18 ಮೊಬೈಲ್ ಗಳನ್ನು ಪತ್ತೆ ಮಾಡಲಾಗಿದ್ದು, ಉಡುಪಿ ಡಿವೈಎಸ್ಪಿ ಪ್ರಭು ಡಿಟಿ ಅವರು […]

ಉಡುಪಿ: ಎಳ್ಳಮವಾಸ್ಯೆ ಪ್ರಯುಕ್ತ ಸಾವಿರಾರು ಜನರಿಂದ ಸಮುದ್ರ ಸ್ನಾನ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಎಳ್ಳಮವಾಸ್ಯೆಯನ್ನು ಸಂಪ್ರದಾಯಬದ್ದವಾಗಿ ಆಚರಿಸಲಾಯ್ತು. ಎಳ್ಳಮವಾಸ್ಯೆಯಂದು ಪಿತೃಗಳಿಗೆ ಪಿಂಡ ಬಿಡುವುದು ಸಂಪ್ರದಾಯ. ಜೊತೆಗೆ ಎಳ್ಳಮವಾಸ್ಯೆಯಂದು ಸಮುದ್ರ ಸ್ನಾನ ಮಾಡಿದ್ರೆ ಸಕಲ ಚರ್ಮರೋಗ ನಿವಾರಣೆಯಾಗುತ್ತೆ ಎಂಬ ನಂಬಿಕೆ ಜನರಲ್ಲಿದೆ. ಈ ದಿನದಂದು ಸಮುದ್ರ ಸ್ನಾನ ಮಾಡುವುದು ಸಂಪ್ರದಾಯ. ಬೆಳಗ್ಗೆಯಿಂದಲೇ ಸಾವಿರಾರು ಮಂದಿ ಮಲ್ಪೆಯಲ್ಲಿ ಸಮುದ್ರ ಸ್ನಾನ ಮಾಡಿದರು. ಪಿತೃಗಳಿಗೆ ಎಳ್ಳಮವಾಸ್ಯೆಯಂದು ಪಿಂಡಪ್ರದಾನ ಮಾಡಿದ್ರೆ ಅವರ ಆತ್ಮ ಸದ್ಗತಿಯನ್ನು ಪಡೆಯುತ್ತದೆ- ಆತ್ಮಕ್ಕೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಉಡುಪಿ ನಗರ ಮಾತ್ರವಲ್ಲದೆ , ಜಿಲ್ಲೆಯ ಮೂಲೆ ಮೂಲೆಗಳಿಂದಲೂ […]

ಜ. 4ರಂದು ಲಯನ್ಸ್ ಕ್ಲಬ್ 317ಸಿ ಪ್ರಾಂತ್ಯ 2ರ ಪ್ರಾಂತೀಯ ಸಮ್ಮೇಳನ

ಉಡುಪಿ: ಉಡುಪಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಕ್ಲಬ್ 317ಸಿ ಪ್ರಾಂತ್ಯ 2ರ ಪ್ರಾಂತೀಯ ಸಮ್ಮೇಳನ ‘ಜಯವರೇಣ್ಯ’ ಜ.4ರಂದು ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್‌ನಲ್ಲಿ ನಡೆಯಲಿದೆ ಎಂದು ಪ್ರಾಂತ್ಯಾಧ್ಯಕ್ಷ ವರುಣ್ ಕೆ. ಶೆಟ್ಟಿ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲೆಯಿಂದ 500ಕ್ಕೂ ಅಧಿಕ ಪ್ರತಿನಿಧಿಗಳು ಮತ್ತು ಆಹ್ವಾನಿತ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಆಕರ್ಷಕ ಬ್ಯಾನರ್ ಪ್ರದರ್ಶನ ಜರುಗಲಿದೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಜೀವರಕ್ಷಕ ಈಶ್ವರ ಮಲ್ಪೆ, […]