ಮಂಗಳೂರು: ನೀರಿನಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಮಂಗಳೂರು: ಸಮುದ್ರಪಾಲಾಗುತ್ತಿದ್ದ ಸಹೋದರನ ಪುತ್ರಿಯನ್ನು ರಕ್ಷಿಸಲು ಹೋಗಿ ವ್ಯಕ್ತಿ ತಾನು ನೀರುಪಾಲಾದ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಬೆಂಗಳೂರು ಶಿವಾಜಿನಗರದ ಎಚ್.ಪಿ.ಕೆ ರೋಡ್ ನಿವಾಸಿ ದಿ.ಖಝೂಮ್ ಅಬ್ದುಲ್ ಶೈಖ್ ಎಂಬವರ ಪುತ್ರ ಕೆ.ಎಮ್. ಸಾಜಿದ್ ಆಲಿ (45) ಮೃತ ದುರ್ದೈವಿ. ಹಿರಿಯ ಸಹೋದರನ ಪುತ್ರಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ನಡುವೆ ಸಿಲುಕಿದ್ದನ್ನು ನೋಡಿ ಸಾಜಿದ್ ಆಲಿ ರಕ್ಷಿಸಿದ್ದಾರೆ, ಆದರೆ ಆ ವೇಳೆ ತಾವೇ ಅಲೆಗಳ ನಡುವೆ ಸಿಲುಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗಿ ವಾಪಸ್‌ ದಡಕ್ಕೆ […]

ಉದ್ಯಾವರ ಬಲಾಯಿಪಾದೆಯ “ನಿವಾಸ”ದಲ್ಲಿ ಕ್ರಿಸ್ಮಸ್ ಸೆಲೆಬ್ರೆಷನ್ ನ ಸಂಭ್ರಮ

ಉಡುಪಿ: ವಿಶೇಷ ರೀತಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಸಿದ್ಧಗೊಂಡಿತ್ತು ಉದ್ಯಾವರ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ 66ರ ಬಳಿ ಇರುವ “ನಿವಾಸ”. ಡಿಸೆಂಬರ್ 29ರಂದು ಭಾನುವಾರ ಸಂಜೆ 4ರಿಂದ ರಾತ್ರಿ 10 ರವರೆಗೆ ಕ್ರಿಸ್ಮಸ್ ಆಚರಣೆ ನಡೆಯಿತು. ಕಾರ್ಯಕ್ರಮ ಸಂಜೆ 4:00 ರಿಂದ ಆರಂಭವಾಯಿತು. ವಿಷೇಶವಾಗಿ ಮಕ್ಕಳ ಆಟಗಳು, ಮ್ಯಾಜಿಕ್ ಶೋ , ಮೈಮ್ ಆಕ್ಟ್ (ಕಾರುಣ್ಯ ವಿಶೇಷ ಶಾಲೆ ಇವರಿಂದ) ಹಾಗೂ ನೃತ್ಯ ಕಾರ್ಯಕ್ರಮ. (ಮಮತ್ಯ ತೊಟ್ಟಿಲು ಅನಾಥಾಶ್ರಮ ಇವರಿಂದ) , ಶಾರ್ ದಿ ಬ್ಯಾಂಡ್ , ನೃತ್ಯ […]

ಉಡುಪಿ: ಗಾಂಜಾ ಮತ್ತು ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ

ಉಡುಪಿ: ಮಾದಕ ವಸ್ತು ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ನಾಲ್ಕು ಮಂದಿಯನ್ನು ಸೆನ್‌ ಅಪರಾಧ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕುರ್ಕಾಲು ಗ್ರಾಮದ ನಿವಾಸಿ ಪ್ರೇಮನಾಥ (23), ಪೆರ್ಡೂರಿನ ನಿವಾಸಿ ಶೈಲೇಶ ಶೆಟ್ಟಿ (24), ಬೊಮ್ಮರಬೆಟ್ಟು ನಿವಾಸಿಗಳಾದ ಪ್ರಜ್ವಲ್‌ (28) ಮತ್ತು ರತನ್‌ (27) ಎಂದು ಗುರುತಿಸಲಾಗಿದೆ. ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಪೌಡರ್‌ ಅನ್ನು ಮಾರಾಟ ಮಾಡಲು […]

2025 ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚಿಸುವ ಸಾಧ್ಯತೆ; ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರ ಸೂಚನೆ.

ಮಂಗಳೂರು: ಹೊಸ ವರ್ಷದ ಸಂದರ್ಭವನ್ನು ಬಳಸಿಕೊಂಡು ಸೈಬರ್‌ ವಂಚಕರು ವಂಚಿಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರದಿಂದ ಇರುವಂತೆ ಪೊಲೀಸರು ತಿಳಿಸಿದ್ದಾರೆ. 2025ನೇ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರುವ ಲಿಂಕ್‌ಗಳನ್ನು ಎಪಿಕೆ ಫೈಲ್‌ಗ‌ಳಲ್ಲಿ(APK) ಮೊಬೈಲ್‌ಗೆ ಕಳುಹಿಸಿ ಮೊಬೈಲ್‌ನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಮೊಬೈಲ್‌ ಹ್ಯಾಕ್‌ ಮಾಡಿದ ಅನಂತರ ಆ ಮೊಬೈಲ್‌ನಿಂದ ವಾಟ್ಸ್‌ಆ್ಯಪ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಹಾನಿಕಾರಕ ಲಿಂಕ್‌ ಮತ್ತು ಎಪಿಕೆ ಫೈಲ್‌ಗ‌ಳನ್ನು ದೊಡ್ಡ ಮಟ್ಟದಲ್ಲಿ ಶೇರ್‌ ಮಾಡುವ ಸಾಧ್ಯತೆ ಇರುತ್ತದೆ.ಸಾರ್ವಜನಿಕರು ಈ ರೀತಿಯ ಹೊಸ […]

ಉಡುಪಿ ಶ್ರೀಕೃಷ್ಣ ಮಠಕ್ಕೆ ಚಿತ್ರನಟ, ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಭೇಟಿ

ಉಡುಪಿ: ಚಿತ್ರನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಇಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರೊಂದಿಗೆ ಉಪೇಂದ್ರ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಉಪೇಂದ್ರ ಅವರನ್ನು ಸ್ವಾಮೀಜಿ ಗೌರವಿಸಿದರು. ಬಳಿಕ ಗೀತಾ ಮಂದಿರ ವೀಕ್ಷಿಸಿದ ಉಪೇಂದ್ರ, ಗೀತೋತ್ಸವ ಸಮಾರೋಪದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಲಹರಿ ವೇಲು ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಉಪೇಂದ್ರ, ಜನಗಳ ಆಶೀರ್ವಾದದಿಂದ […]