ಉಡುಪಿ:ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ:ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶದಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2025 ರ […]
ಉಡುಪಿ:ಜಕಣಾಚಾರಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಧೀಮಂತ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರ್ಯರು ಕರ್ನಾಟಕದಲ್ಲಿ ಶಿಲ್ಪಕಲೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಬೇಲೂರು ಹಾಗೂ ಹಳೇಬೀಡು ದೇವಸ್ಥಾನಕ್ಕೆ ಅವರ ಶಿಲ್ಪಕಲೆಯ ಕೊಡುಗೆಯು ಅಪಾರವಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಭಾಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಶೋಕಾಚರಣೆ ಹಿನ್ನೆಲೆ, […]
ಉಡುಪಿ:ಜನವರಿ 17 ರಿಂದ ಉಡುಪಿ ನಗರದಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟ : ಸ್ಥಳ ಪರಿಶೀಲನೆ

ಉಡುಪಿ: ಕರ್ನಾಟಕ ರಾಜ್ಯ ಒಲಂಪಿಕ್ಸ್ ಸಂಸ್ಥೆಯು ಉಡುಪಿ ಮತ್ತು ಮಂಗಳೂರಿನಲ್ಲಿ ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟವನ್ನು ನಡೆಯಲಿದ್ದು, ಉಡುಪಿ ನಗರದಲ್ಲಿ ನಡೆಯಲಿರುವ ಕ್ರೀಡೆಗಳಿಗೆ ಅಗತ್ಯವಿರುವ ಮೈದಾನದ ವ್ಯವಸ್ಥೆ, ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಪರಿಶೀಲನೆಯನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ಹಾಗೂ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಇಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಜನವರಿ 17 ರಿಂದ ನಡೆಯಲಿರುವ ರಾಜ್ಯದ ಒಲಂಪಿಕ್ಸ್ […]
ಉಡುಪಿ:ಫೆಬ್ರವರಿ ಮೊದಲನೇ ವಾರದಲ್ಲಿ ಬೃಹತ್ ಉದ್ಯೋಗ ಮೇಳ -ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಉಡುಪಿ ನಗರದಲ್ಲಿ ಬೃಹತ್ ಕೌಶಲ್ಯ ರೋಜ್‌ಗಾರ್ ಉದ್ಯೋಗ ಮೇಳವು ಫೆಬ್ರವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಯುವಜನರಿಗೆ ಉದ್ಯೋಗವನ್ನು ಒದಗಿಸುವ ಬೃಹತ್ ಉದ್ಯೋಗ ಮೇಳವು ಫೆಬ್ರವರಿ ಮೊದಲನೇ ವಾರದಲ್ಲಿ ಉಡುಪಿ ನಗರದ […]
ಮಂಗಳೂರು: ಲಾರಿ-ಸ್ಕೂಟರ್ ನಡುವೆ ಭೀಕರ ಅಪಘಾತ; ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು.

ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ಸಮೀಪ ಸ್ಕೂಟರ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಡಿ. ೩೧ರ ತಡರಾತ್ರಿ ಸಂಭವಿಸಿದೆ. ನಾಟೆಕಲ್ ಪನೀರ್ ನಿವಾಸಿ ಉಮ್ಮರ್ ಫಾರೂಕ್ ಯಾನೆ ಅಝರ್(33) ಮೃತ ಸ್ಕೂಟರ್ ಸವಾರ. ಅಝರ್ ಅವರು ಸ್ವಿಗ್ಗಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಮಂಗಳವಾರ ರಾತ್ರಿ ತಲಪಾಡಿಗೆ ಫುಡ್ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಸ್ಕೂಟರ್‌ಗೆ […]