ಉಡುಪಿ:ಫೆಲೋಶಿಪ್ : ಅರ್ಜಿ ಆಹ್ವಾನ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (2024 ರ ಜನವರಿ 10 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ […]
ಉಡುಪಿ:ಮಕ್ಕಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಎಲ್ಲರೂ ಸಹಕರಿಸಬೇಕು : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ
ಉಡುಪಿ: ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಇಂದು ಬ್ರಹ್ಮಾವರ ವಲಯದ ಕೊಕ್ಕರ್ಣೆ ದುರ್ಗಾ ಆಂಗ್ಲಮಾಧ್ಯಮ ಶಾಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬ್ರಹ್ಮಾವರ ಹಾಗೂ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ […]
ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ರಾಜ್ಯದ ಮಹಿಳೆಯರಿಗೆ ಭದ್ರತೆ ಇಲ್ಲದಂತಾಗಿದೆ
ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದಿಂದ ಮಹಿಳೆಯರಿಗೆ ಭದ್ರತೆ ಇಲ್ಲದಂತೆ ಆಗಿದೆ. ಕಾಲೇಜು ಅಥವಾ ಕೆಲಸಕ್ಕೆ ಹೋದ ಹೆಣ್ಣುಮಕ್ಕಳು ಸುರಕ್ಷಿತವಾಗಿ ಮನೆಗೆ ಬರಲಿಯೆಂದು ಹೆತ್ತವರು ದೇವರಲ್ಲಿ ಪ್ರಾರ್ಥಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಾಣಂತಿಯರ ಹಾಗೂ ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದು, ಇದರ ನಿಯಂತ್ರಣಕ್ಕೆ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. […]
ಹೊಸ ವರ್ಷಕ್ಕೆ ಸರಕಾರಿ ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಬೇಡಿಕೆಗೆ ಒಪ್ಪಿಗೆ
ಸರಕಾರದ ನಾಲ್ಕು ನಿಗಮದವರು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಲ್ಲಿಸಿದ ಬೇಡಿಕೆಗೆ ಸರಕಾಋ ಕೊನೆಗೂ ಒಪ್ಪಿಗೆ ನೀಡಿದ್ದು ಕರ್ನಾಟಕ ಸರ್ಕಾರ ಹೊಸ ವರ್ಷಕ್ಕೆ ಬಸ್ ಪ್ರಯಾಣಿಕರಿಗೆ ಶಾಕ್ ನೀಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(KSRTC)ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC) ಸೇರಿ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ […]
ಸಂಕಷ್ಟದಲ್ಲಿ ಭಾರತದ ಈ ಕ್ರಿಕೆಟ್ ಆಟಗಾರರು! ಕೋಟಿ ಹಗರಣದ ಆರೋಪ
ಭಾರತ ತಂಡದ ಖ್ಯಾತ ಆಟಗಾರ ಸದ್ಯ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಶುಭ್ಮನ್ ಗಿಲ್ಗೆ ಭಾರತದಲ್ಲಿ ಸಂಕಷ್ಟ ಎದುರಾಗಿದ್ದು 450 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ. ಭಾರತ ತಂಡದ ಸ್ಟಾರ್ ಆಟಗಾರರಾದ ಗುಜರಾತ್ ಟೈಟಾನ್ಸ್ ತಂಡದ ಆಟಗಾರರಾದ ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಅವರಿಗೂ ಗುಜರಾತ್ ಅಪರಾಧ ತನಿಖಾ ಇದೇ ಆರೋಪದ ಮೇಲೆ ಸಮನ್ಸ್ ಕಳುಹಿಸಿದೆ. ಭೂಪೇಂದ್ರಸಿನ್ಹ್ ಝಾಲಾ ನೇತೃತ್ವದ BZ ಫೈನಾನ್ಶಿಯಲ್ ಸರ್ವಿಸಸ್ ಹೆಸರಿನ ಕಂಪೆನಿ ಬ್ಯಾಂಕುಗಳಿಗಿಂತ ಜಾಸ್ತಿ […]