ಉಡುಪಿ: ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ ಸಮಾರೋಪ

ಉಡುಪಿ: ನಾಟಕ, ಯಕ್ಷಗಾನ, ನೃತ್ಯ ಮೊದಲಾದ ಕಲಾ ಕೌಶಲಗಳನ್ನು ಮಕ್ಕಳಿಗೆ ಕಲಿಸಿದರೆ ಅವರ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತದೆ ಎಂಬ ಆತಂಕ ಪಡುವುದು ಅಗತ್ಯವಿಲ್ಲ. ರಂಗ ಶಿಕ್ಷಣ ಮಕ್ಕಳ ಪ್ರಗತಿಗೆ ಪೂರಕವಾಗಲಿದೆ ಎಂಬುದನ್ನು ಹೆತ್ತವರು ಅರಿತುಕೊಳ್ಳಬೇಕು ಎಂದು ಖ್ಯಾತ ರಂಗ ಕರ್ಮಿ ಡಾ.ಜೀವನರಾಮ್ ಸುಳ್ಯ ಹೇಳಿದರು. ಅವರು ರಂಗಭೂಮಿ ಉಡುಪಿ ವತಿಯಿಂದ ಹಮ್ಮಿಕೊಂಡ ಶಾಲಾ ಮಕ್ಕಳಿಗೆ ರಂಗ ಶಿಕ್ಷಣ ಅಭಿಯಾನದ ಅಂಗವಾಗಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡ ರಂಗಶಿಕ್ಷಣ ಮಕ್ಕಳ ನಾಟಕೋತ್ಸವದ ಸಮಾರೋಪದಲ್ಲಿ ಮಾತನಾಡಿದರು. ಶಾಲಾ […]

ಜ.7ರಂದು ಅಮ್ಮಂಜೆಯಲ್ಲಿ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕ ಉದ್ಘಾಟನೆ

ಉಡುಪಿ: ಸವಿತಾ ಸಮಾಜ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಅಮ್ಮಂಜೆಯಲ್ಲಿ ನಿರ್ಮಾಣಗೊಂಡಿರುವ ನೂತನ ಟಿಶ್ಯೂ ಪೇಪರ್ ಕೈಗಾರಿಕಾ ಘಟಕದ ಉದ್ಘಾಟನಾ ಸಮಾರಂಭವು ಇದೇ ಜ.7ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ನವೀನ್ ಚಂದ್ರ ಭಂಡಾರಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೂತನ ಘಟಕವನ್ನು ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಸವಿತಾ ಟಿಶ್ಯೂ ಪೇಪರ್ ಉತ್ಪನ್ನಗಳ ಬಿಡುಗಡೆಗೊಳಿಸಲಿದ್ದಾರೆ. ಜಿಲ್ಲಾ ಸವಿತಾ ಸಮಾಜದ ಗೌರವ ಅಧ್ಯಕ್ಷ ಬನ್ನಂಜೆ […]

ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ

ಉಡುಪಿ: ಬೈರಂಪಳ್ಳಿ ಗ್ರಾಪಂನಲ್ಲಿ ನಡೆದಿರುವ ಹಗರಣಗಳನ್ನು ಮರೆಮಾಚುವ ಉದ್ದೇಶದಿಂದ ಪಂಚಾಯತ್ ಕಚೇರಿಗೆ ಬೀಗ ಜಡಿದು, ಪಂಚಾಯತ್ ಸಿಬ್ಬಂದಿ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಹಗರಣಗಳ ತನಿಖೆಯ ಹಾದಿ ತಪ್ಪಿಸಿ ಭ್ರಷ್ಟಾಚಾರಿಗಳು, ಕಳ್ಳರು, ಭ್ರಷ್ಟ ಸಿಬ್ಬಂದಿ ಪಲಾಯನ ಮಾಡಲು ಪ್ರಯತ್ನಿಸಿರುವ ವಿಫಲ ಪ್ರಯತ್ನ ಇದಾಗಿದೆ ಎಂದು ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಮಂದಿಯ ಸ್ವಾರ್ಥ ರಾಜಕಾರಣದಿಂದಾಗಿ ಸರಕಾರದ ಅನುದಾನಗಳು ಬಡ ಜನರಿಗೆ ಸಿಗದೆ ದುರುಪಯೋಗವಾಗುತ್ತಿದೆ. ಗುತ್ತಿಗೆದಾರರು, ಪಂಚಾಯತ್ ನ […]

ಉಡುಪಿ: ದೇಶದೆಲ್ಲಡೆ ಗ್ರಂಥಾಲಯ ಆಂದೋಲನವಾಗಲಿ: ಡಾ. ಮಹಾಬಲೇಶ್ವರ ರಾವ್

ಉಡುಪಿ: ಜನರಲ್ಲಿ ಓದುವ ಹವ್ಯಾಸ ವೃದ್ಧಿ, ಜ್ಞಾನ ಗಳಿಕೆ, ವಿದ್ಯಾವಂತರಾಗಲು ಪೂರಕವಾಗಿ ಗ್ರಂಥಾಲಯ ಆಂದೋಲನ ನಡೆದಿಲ್ಲ ಎಂದು ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಹೇಳಿದ್ದಾರೆ. ಅವರು ಉಡುಪಿ ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದಿಂದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮನೆಯೇ ಗ್ರಂಥಾಲಯ ಯೋಜನೆಯಡಿ 130ನೇ ಗ್ರಂಥಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಬಸ್, ರೈಲು, ವಿಮಾನ ನಿಲ್ದಾಣ, ಆಸ್ಪತ್ರೆ ಸಹಿತ ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ವಿರಾಮ ಸಿಕ್ಕಾಗ ಓದಲು ಪುಸ್ತಕ ಭಂಡಾರ/ಗ್ರಂಥಾಲಯ ನಿರ್ಮಾಣವನ್ನು […]

ಉಡುಪಿ: ಆಟೋ ಚಾಲಕ ನೇಣಿಗೆ ಶರಣು; ಕಾರಣ ನಿಗೂಢ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡ ಆಟೋ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಪಳ್ಳಿಗುಡ್ಡೆಯಲ್ಲಿ ನಡೆದಿದೆ. ಪಳ್ಳಿಗುಡ್ಡೆ ನಿವಾಸಿ ದೀಪಕ್ ಆ‌ರ್ (34) ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ. ಇವರು ಜ.1ರಂದು ರಾತ್ರಿ ಮನೆಯ ಕೊಠಡಿಯ ಕಬ್ಬಿಣದ ಹುಕ್ಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಉಡುಪಿಯ ಕಲ್ಸಂಕ ಆಟೋ ನಿಲ್ದಾಣದಲ್ಲಿ ಚಾಲಕರಾಗಿ ದುಡಿಯುತ್ತಿದ್ದ ದೀಪಕ್ ಅವಿವಾಹಿತರಾಗಿದ್ದರು. ಸರಳ ಸ್ವಭಾವ ಹಾಗೂ ಸ್ನೇಹ ಜೀವಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ […]