ಉಡುಪಿ:ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ತರಬೇತಿ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ ಮತ್ತು ಇತರ ಬ್ಯಾಂಕಿಂಗ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು. ಆಸಕ್ತರು ಜನವರಿ 8 ರ ಒಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೂ.ಸಂಖ್ಯೆ: 0821-2515944 ಗೆ ಕರೆ ಮಾಡಿ, ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ ಎಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ಕ್ರೀಡಾ ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಪಂಚಾಯತ್ ಅನುದಾನದಿಂದ ನೀಡಲಾಗುವ ಪ್ರೋತ್ಸಾಹಧನಕ್ಕೆ 2024 ನೇ ಕ್ಯಾಲೆಂಡರ್ ವರ್ಷದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಹಾಗೂ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವೈಯಕ್ತಿಕ ಮತ್ತು ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಿದ ಅಥವಾ ಪದಕ ಪಡೆದ ಅರ್ಹ ಕ್ರೀಡಾಪಟುಗಳಿಂದ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ದೃಢೀಕೃತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನ. ಅರ್ಜಿ […]
ಉಡುಪಿ:ಮಕ್ಕಳ ರಕ್ಷಣೆಗಿರುವ ಕಾಯಿದೆಗಳನ್ನು ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ
ಉಡುಪಿ: ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಜಾರಿಗೊಳಿಸಲಾದ ಕಾಯಿದೆಗಳು, ಯೋಜನೆಗಳು ಹಾಗೂ ನಿಯಮಾವಳಿಗಳು ಕೇವಲ ಸುತ್ತೋಲೆಗಳಿಗಷ್ಟೇ ಸೀಮಿತವಾಗಿರದೇ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಶುಕ್ರವಾರ ನಗರದ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು […]
ಸಾಲಿಗ್ರಾಮ: ಜನವರಿ 4 ರಂದು ಸಾಲಿಗ್ರಾಮದಲ್ಲಿ ಸೌಹಾರ್ದ ಸಹಕಾರಿ ದಿನಾಚರಣೆ 2025 ಕಾರ್ಯಕ್ರಮ.
ಉಡುಪಿ: ಸೌಹಾರ್ದ ಸಹಕಾರಿ ದಿನಾಚರಣೆ 2025 ಕಾರ್ಯಕ್ರಮವು “ಸ್ವಾಯತ್ತತೆ, ಸ್ವಯಂ ಆಡಳಿತ, ಸ್ವಯಂ ನಿಯಂತ್ರಣ, ನಮ್ಮ ಧೈಯ ವಾಕ್ಯ” ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಬೆಂಗಳೂರು, ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟ ನಿ, ಉಡುಪಿ. ಇವರ ಜಂಟಿ ಆಶ್ರಯದಲ್ಲಿಶ್ರೀ ಜೈ ಗಣೇಶ್ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ, ಸ್ಟ್ರಾಬರಕಟ್ಟೆ, ಶ್ರೀ ಕೃಷ್ಣ ಸೌಹಾರ್ದ ಸಹಕಾರಿ ಸಂಘ. ನಿ, ಸಾಲಿಗ್ರಾಮ. ಶ್ರೀ ರಾಮಾಂಜನೇಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ, ಕೋಡಿ, ಕನ್ಯಾಣ. ಇವರ […]