ಉಡುಪಿ:ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ : ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ […]

ಉಡುಪಿ:ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆ ವಿತರಣೆ

ಉಡುಪಿ: ಜಿಲ್ಲಾಡಳಿತ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಅಲಿಂಕೋ ಸಂಸ್ಥೆ ವತಿಯಿಂದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವು ಜನವರಿ 6 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು […]

ಉಡುಪಿ:ಬಟ್ಟೆ ವ್ಯಾಪಾರಿ ನಾಪತ್ತೆ

ಉಡುಪಿ: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಕೆಲಸ ಮಾಡಿಕೊಂಡಿದ್ದ ಬೈಂದೂರು ತಾಲೂಕು ಶಿರೂರು ಗ್ರಾಮದ ನಿವಾಸಿ ಮೊಹಮ್ಮದ್ ಅದ್ನಾನ್ (34) ಎಂಬ ವ್ಯಕ್ತಿಯು 2024 ರ ಅಕ್ಟೋಬರ್ 31 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಬಿಳಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ.9480805459, ಬೈಂದೂರು ವೃತ್ತ […]

ಉಡುಪಿ:ಮಗುವಿನೊಂದಿಗೆ ತಾಯಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ನಿಟ್ಟೂರಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಳ್ಳಾರಿ ಜಿಲ್ಲೆ, ಹೂವಿನ ಹಡಗಲಿ ತಾಲೂಕು ಕೊಂಬಳಿ ಗ್ರಾಮದ ನಿವಾಸಿ ಗಂಗಮ್ಮ (30) ಎಂಬ ಮಹಿಳೆಯು ಡಿಸೆಂಬರ್ 31 ರಂದು ತನ್ನ 5 ವರ್ಷದ ಮಗನಾದ ಭರತ್‌ನೊಂದಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಗಂಗಮ್ಮ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ ಹಾಗೂ ಭರತ್ 3 ಅಡಿ ಎತ್ತರ, […]

ಉಡುಪಿ:ಮತದಾರರ ದಿನಾಚರಣೆ : ಪೂರ್ವಭಾವಿ ಸಭೆ

ಉಡುಪಿ: ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಇದೆ ಜನವರಿ 25 ರಂದು […]