ಉಡುಪಿ:ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ : ಡಾ. ತಿಪ್ಪೇಸ್ವಾಮಿ ಕೆ.ಟಿ
ಉಡುಪಿ: ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಮಕ್ಕಳ ಸುರಕ್ಷತೆಗೆ ಸಂಬAಧಿಸಿದAತೆ ಸರಕಾರ ನೀಡಿರುವ ಹಕ್ಕು ಮತ್ತು ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಚಾಚೂ ತಪ್ಪದೇ ಪಾಲಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಶನಿವಾರ ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸವ್ಯಸಾಚಿ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು […]
ಮಣಿಪಾಲ ಮತ್ತು ಮಂಗಳೂರಿನ ಅತಿದೊಡ್ಡ ಪ್ರೊಡಕ್ಷನ್ ಮತ್ತು ಎಕ್ಸ್ ಪೋರ್ಟ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.
ಹೆಬ್ರಿಯಲ್ಲಿ ವಾಯ್ಸ್ ಆಪ್ ಚಾಣಕ್ಯ 2024: ರಾಜ್ಯ ಮಟ್ಟದ ಸಂಗೀತ ಸ್ಪರ್ಧೆ.
ಹೆಬ್ರಿ: ಗುಣಮಟ್ಟದ ತರಬೇತಿಯ ಜೊತೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ ಮತ್ತು ಕಲಾ ಪ್ರಕಾರದ ಸೇವೆ ಸಲ್ಲಿಸುತ್ತಿರುವ ಹೆಬ್ರಿಯ ಚಾಣಕ್ಯ ಸಂಸ್ಥೆಯ ಪರಿಶ್ರಮ ಶ್ಲಾಘನೀಯ ಎಂದು ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ್ ಶೆಟ್ಟಿ ಮುನಿಯಾಲು ಹೇಳಿದರು. ಅವರು ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್(ರಿ) ಹಾಗೂ ಅನಂತಪದ್ಮನಾಭ ಸನ್ನಿಧಿ ಸಭಾಂಗಣ ಹೆಬ್ರಿ ಇವರ ಸಹಯೋಗದೊಂದಿಗೆ ವಾಯ್ಸ್ […]
ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಸಮುದಾಯ ಕಲಾ ಸಂಘದ 14ನೇ ವಾರ್ಷಿಕೋತ್ಸವ
ಉಡುಪಿ: ಯಾವುದೇ ಸಮುದಾಯ ಸಂಘಟಿತವಾಗಿ, ಒಗ್ಗಟ್ಟಿನಿಂದ ಇದ್ದರೆ ಅದನ್ನು ಸಮಾಜ ಗುರುತಿಸುತ್ತದೆ. ಆ ಸಮುದಾಯದ ಬೇಡಿಕೆಗಳು ಈಡೇರುತ್ತವೆ. ಸಮಸ್ಯೆಗಳು ಬಗೆ ಹರಿಯುತ್ತವೆ. ಕಲೆ, ಸಂಸ್ಕೃತಿಯ ಬೆಳವಣಿಗೆಯಾಗುತ್ತದೆ. ಈ ನಿಟ್ಟಿನಲ್ಲಿ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಕಲಾ ಸಂಘ ಉತ್ತಮ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಇತ್ತೀಚಿಗೆ ಹಿರಿಯಡಕ ಸಮೀಪದ ಅಂಜಾರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಅಂಜಾರು ಶ್ರೀ ದುರ್ಗಾಪರಮೇಶ್ವರಿ ಮರಾಟಿ ಸಮುದಾಯ […]
ಉಡುಪಿ:ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5 ರವರೆಗೆ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯೊಂದಿಗೆ ಶನಿವಾರ ಜಂಟಿ ಸಮಾಲೋಚನಾ ಸಭೆ ನಡೆಯಿತು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. […]