ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಯುವ ಮಧುಮೇಹಿಗಳಿಗೆ ಶೈಕ್ಷಣಿಕ ಕಾರ್ಯಕ್ರಮ

ಮಣಿಪಾಲ,ಜ. 06: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR), ಭಾರತ ಸರ್ಕಾರದ ಅನುದಾನಿತ ಯಂಗ್ ಡಯಾಬಿಟಿಸ್ ರಿಜಿಸ್ಟ್ರಿ (YDR) ಹಂತ III ಮತ್ತು ವೈದ್ಯಕೀಯ ವಿಭಾಗ, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲವು ಮಕ್ಕಳ ವಿಭಾಗ ಮತ್ತು ಮಕ್ಕಳ ಎಂಡೋಕ್ರೈನಾಲಜಿ ಕ್ಲಿನಿಕ್, ಮಣಿಪಾಲ ಇದರ ಸಹಯೋಗದೊಂದಿಗೆ ಯುವ ಮಧುಮೇಹಿಗಳಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಕ್ರಮವನ್ನು ಡಾ.ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಿತ್ತು. ಅನೇಕ ಯುವ ಮಧುಮೇಹಿಗಳು (2-25 ವರ್ಷ ವಯಸ್ಸಿನವರು) ತಮ್ಮ ಆರೈಕೆದಾರರೊಂದಿಗೆ ಭಾಗವಹಿಸಿದ್ದರು. ಖಾಲಿ ಹೊಟ್ಟೆಯ […]

ಕಾರ್ಕಳ: ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಕ್ರಿಯೇಟಿವ್ ಆವಿರ್ಭವ

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳದಲ್ಲಿ ಜ.04 ರಂದು ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಬಹಳ ವೈಭವಪೂರ್ಣವಾಗಿ ಮೂಡಿಬಂದಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ ಸಂವಾದ ಕಾರ್ಯಕ್ರಮವು ಖ್ಯಾತ ನಿರೂಪಕ ಅವಿನಾಶ್ ಕಾಮತ್ ರವರ ಮುಖೇನ […]

ಬೆಂಗಳೂರು:ಮುಂಜಾಗ್ರತಾ ಕ್ರಮ ವಹಿಸಿದರೆ HMP ವೈರಸ್​ ಬಗ್ಗೆ ಆತಂಕಪಡುವ ಅಗತ್ಯವಿಲ್ಲ:ಸಚಿವ ಗುಂಡೂರಾವ್

ಬೆಂಗಳೂರು: ಕೊರೊನಾ ಕೊಟ್ಟ ಹೊಡೆತದಿಂದ ಜನರು ಇನ್ನೂ ಹೊರಬಂದಿಲ್ಲ. ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ರಣಕೇಕೆ ಹಾಕುತ್ತಿದೆಯಂತೆ. ಹೀಗಿರುವಾಗ ಬೆಂಗಳೂರಿನಲ್ಲೂ ಹೆಚ್​​ಎಂಪಿ ವೈರಸ್ ಪತ್ತೆಯಾಗಿದ್ದು, ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಚ್ಎಂಪಿ ವೈರಸ್ ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕು ಎಂದಿದ್ದಾರೆ. ಆರೋಗ್ಯಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹೆಚ್​​ಎಂಪಿ ವೈರಸ್​ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್​​ಎಂಪಿ ವೈರಸ್ ವಿಶ್ವದಾದ್ಯಂತ ಇದೆ. […]

ಉಡುಪಿ:ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆ, ತಾಲೂಕು ಕಚೇರಿ, ಉಪ ವಿಭಾಗ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ತಮ್ಮ ಹೆಸರುಗಳು ಸರಿಯಾದ ಮಾಹಿತಿಯೊಂದಿಗೆ ಪಟ್ಟಿಯಲ್ಲಿ ಇವೆಯೇ ಎಂಬುದನ್ನು ಪರಿಶೀಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ […]

ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿಯಿಂದ ಮಣಿಪಾಲ್‌ಗೆ ಹೋಗುವ ರಸ್ತೆ ಅಗಲೀಕರಣ […]