ಉಡುಪಿ:ವಿವಿಧ ಚಟುವಟಿಕೆಗಳಿಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಕರ್ನಾಟಕ ರೈತ ಸಮೃದ್ಧಿ ಯೋಜನೆಯಡಿ ನೋಂದಣಿ, ಉತ್ಪನ್ನದ ಗುಣಮಟ್ಟದ ಮಾರುಕಟ್ಟೆ ಕಲ್ಪಿಸುವ ಕಾರ್ಯಕ್ರಮಗಳಾದ ವೆಬ್‌ಸೈಟ್ ಜಾಹೀರಾತು, ಸಾಮಾಜಿಕ ಜಾಲತಾಣದ ಬಳಕೆ, ಕೃಷಿ ಆಪ್ಸ್ ಬಳಕೆ, ರಫ್ತಿಗೆ ಸಹಾಯಧನ, ವ್ಯಾಪಾರ ಮಳಿಗೆಗಳಲ್ಲಿ ಬಾಡಿಗೆ ಆಧಾರದಲ್ಲಿ ಶೆಲ್ಫ್ ಪಡೆಯುವುದು ಮತ್ತು ಪ್ಯಾಕೇಜಿಂಗ್ ಸೇವೆಯನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಆಸಕ್ತ ರೈತ ಉತ್ಪಾದಕ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗರಿಷ್ಠ 5 ಲಕ್ಷ ರೂ. ವರೆಗೆ ಸಹಾಯಧನ ಪಡೆಯಲು ಅವಕಾಶವಿದೆ. ಈಗಾಗಲೇ ಸ್ಥಾಪಿಸಿ ಚಾಲನೆಯಲ್ಲಿರುವ ಮೌಲ್ಯವರ್ಧನೆ ಸರಪಳಿಯಲ್ಲಿನ […]

ಉಡುಪಿ:ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ […]

ಸಿಎಂ ಸಿದ್ದರಾಮಯ್ಯನವರ ಗೃಹ ಕಚೇರಿ ಅರ್ಬನ್ ನಕ್ಸಲರ ಪಾಲಿಟ್ ಬ್ಯೂರೋ ಆಗಿ ಬದಲಾಗಿದೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಗಾಂಧಿವಾದದಿಂದ ಮಾವೋವಾದಕ್ಕೆ ಹೊರಳಿದೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಸರ್ಕಾರದ ನಕ್ಸಲ್ ಪ್ಯಾಕೇಜ್ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು, ಫೇಸ್ ಬುಕ್ ನಲ್ಲಿ ಸರ್ಕಾರದ ನಡೆಯನ್ನು ಖಂಡಿಸಿದರೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸುವವರು, ಈಗ ಬಂದೂಕು ಹಿಡಿದು ಗುಂಡಿಟ್ಟು ಭಯ ಸೃಷ್ಟಿಸುವವರಿಗೆ ಹೂಗುಚ್ಚ ಕೊಟ್ಟು ಸ್ವಾಗತಿಸಿ ಸಮೋಸಾ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ಅರ್ಬನ್ […]

ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

ಕುಂದಾಪುರ : ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05.01.2025 ರಿಂದ 06.01.2025 ರ ವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯರಾದ ವೈಷ್ಣವಿ, ರಿಷಾ ಮತ್ತು ಅಂಶು ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ […]

ಉಡುಪಿ:ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಜ.11ರಂದು ಶ್ರೀ ಪಂಚದುರ್ಗ ನಮಸ್ಕಾರ ಪೂಜೆ

ಉಡುಪಿ:ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಇದೇ ತಿಂಗಳ ತಾರೀಕು ಹನ್ನೊಂದರ ಶನಿವಾರದಂದು ಶ್ರೀ ಪಂಚದುರ್ಗ ನಮಸ್ಕಾರ ಪೂಜೆ ಸಂಪನ್ನಗೊಳ್ಳಲಿದೆ.. ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಸಂಜೆ ಗಂಟೆ 5 ರಿಂದ ಪೂಜೆ ಆರಂಭಗೊಳ್ಳಲಿದೆ.. ಏಕಕಾಲದಲ್ಲಿ ಪಂಚವರ್ಣಾತ್ಮಕವಾಗಿ ರಚಿಸಲಾಗುವ 5 ಮಂಡಲಗಳಲ್ಲಿ ಮೂಲದುರ್ಗ ಜಲದುರ್ಗ ಅಗ್ನಿದುರ್ಗ ವನದುರ್ಗ ಹಾಗೂ ಅಗ್ರ ದುರ್ಗೆ ಎಂದು ಪಂಚ ದೀಪದಲ್ಲಿಪಂಚ ದುರ್ಗೆಯರನ್ನು ಪಂಚ ರೂಪದಿಂದ ಪೂಜಿಸಲಾಗುತ್ತದೆ.. […]