ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ
ಉಡುಪಿ: ಆರು ಮಂದಿ ನಕ್ಸಲರಿಗೆ ರಾಜ್ಯ ಸರ್ಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !. ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ […]
ಮಂಗಳೂರು: ಜ.11ರಂದು ಉಳ್ಳಾಲ ನರಿಂಗಾನ ಕಂಬಳೋತ್ಸವ.
ಮಂಗಳೂರು: ವಿಧಾನಸಭೆ ಸ್ಪೀಕರ್, ಶಾಸಕ ಯು.ಟಿ.ಖಾದರ್ ನೇತೃತ್ವದ ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮ ಪಂಚಾಯತ್ ಸಹಕಾರದಲ್ಲಿ ನರಿಂಗಾನ ಗ್ರಾಮದ ಮೋರ್ಲ-ಬೋಳದಲ್ಲಿ ತೃತೀಯ ವರ್ಷದ ಹೊನಲು ಬೆಳಕಿನ ಲವ-ಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ ಜ.11ರಂದು ಬೆಳಗ್ಗೆ 8.30ರಿಂದ ನಡೆಯಲಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಸಿಎಂ ಸಿದ್ದರಾಮಯ್ಯ ಸಂಜೆ 4.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ಪಜೀರಿನಲ್ಲಿ 25 ವರ್ಷ ಕಂಬಳ ನಡೆಸಿದ, ಕೋಣದ ಯಜಮಾನ ವೆಂಕಪ್ಪ […]
ತಿರುಪತಿ ದೇವಸ್ಥಾನದಲ್ಲಿ ಕಾಲ್ತುಳಿತ: ಆರು ಮಂದಿ ಮೃತ್ಯು.
ಆಂಧ್ರಪ್ರದೇಶ: ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಘೋರ ದುರಂತ ಸಂಭವಿಸಿದೆ, ವೈಕುಂಠ ಏಕಾದಶಿಯ ಟಿಕೆಟ್ ಕೌಂಟರ್ ಬಳಿ ಟಿಕೆಟ್ ಗಾಗಿ ನೂಕು ನುಗ್ಗಲು ಸಂಭವಿಸಿ ನಡೆದ ಕಾಲ್ತುಳಿತದಲ್ಲಿ ಆರು ಮಂದಿ ಮೃತಪಟ್ಟು ಹಲವರು ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ(ಜ.8) ರಾತ್ರಿ ನಡೆದಿದೆ. ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಪಡೆಯಲು ಬುಧವಾರ ಬೆಳಗ್ಗೆಯಿಂದಲೇ ತಿರುಪತಿಯ ವಿವಿಧ ಟಿಕೆಟ್ ಕೇಂದ್ರಗಳಲ್ಲಿ ಸುಮಾರು 4,000 ಕ್ಕೂ ಅಧಿಕ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಈ ವೇಳೆ ಟೋಕನ್ ವಿತರಣೆಗಾಗಿ ಬೈರಾಗಿ ಪಟ್ಟಿಡಾ ಪಾರ್ಕ್‌ನಲ್ಲಿ […]
ಕುಂದಾಪುರ: ಜ.10ರಂದು ತ್ರಾಸಿ ಬೀಚ್ ನಲ್ಲಿ ನಾಡದೋಣಿ ಮೀನುಗಾರರ ಪ್ರತಿಭಟನೆ.
ಕುಂದಾಪುರ: ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆಯಾದ ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡುವುದರ ಬಗ್ಗೆ ಜ.10ರಂದು ತ್ರಾಸಿ ಬೀಚ್ ನಲ್ಲಿ ನಡೆಯುವ ಪ್ರತಿಭಟನೆಗೆ ಮೂರು ಜಿಲ್ಲೆಗಳ ನಾಡದೋಣಿ ಮೀನು ಗಾರಿಕೆಗೆ ರಜೆ ಘೋಷಣೆ ಮಾಡಲಾಗಿದೆ. ಮೂರು ಜಿಲ್ಲೆಗಳ ಮೀನುಗಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾ ರೆಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಅಧ್ಯಕ್ಷ ಅಳ್ವಿಕೋಡಿ ನಾಗೇಶ್ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಸ್ತೆ ಅಪಘಾತ ಗಾಯಾಳುಗಳಿಗೆ 1.5 ಲಕ್ಷ ರೂ. ನಗದುರಹಿತ ಚಿಕಿತ್ಸೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಹೊಸದಿಲ್ಲಿ : ಸರಕಾರವು ಮಾರ್ಚ್ ವೇಳೆಗೆ ರಸ್ತೆ ಅಪಘಾತಗಳಲ್ಲಿ ಗಾಯಾಳುಗಳಿಗೆ ನಗದುರಹಿತ ಚಿಕಿತ್ಸೆಯನ್ನು ಒದಗಿಸುವ ರಾಷ್ಟ್ರವ್ಯಾಪಿ ಯೋಜನೆಯನ್ನು ಆರಂಭಿಸಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಬುಧವಾರ ಇಲ್ಲಿ ಪ್ರಕಟಿಸಿದರು. ಈ ಯೋಜನೆಯಡಿ ಗಾಯಾಳುಗಳು ಅಪಘಾತದ ಬಳಿಕ ಏಳು ದಿನಗಳ ಕಾಲ 1.5 ಲಕ್ಷ ರೂ.ವರೆಗೆ ನಗದುರಹಿತ ಚಿಕಿತ್ಸೆಯನ್ನು ಪಡೆಯಲಿದ್ದಾರೆ. ಯೋಜನೆಯು ಎಲ್ಲ ರೀತಿಗಳ ರಸ್ತೆಗಳಲ್ಲಿ ಮೋಟರ್ ವಾಹನಗಳಿಂದ ಉಂಟಾಗುವ ಅಪಘಾತಗಳನ್ನು ಒಳಗೊಂಡಿರಲಿದೆ. ಅಪಘಾತ ಸಂಭವಿಸಿದ 24 ಗಂಟೆಗಳಲ್ಲಿ ಪೋಲಿಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ಹಿಟ್ ಆ್ಯಂಡ್ […]