‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಿತ್ರ ಬಿಡುಗಡೆ -ಪತ್ರಕರ್ತರಿಗೆ ವಿಶೇಷ ಪ್ರದರ್ಶನ
ಉಡುಪಿ: ಯಕ್ಷಗಾನದಲ್ಲಿನ ಹೆಣ್ಣಿನ ಪಾತ್ರಕ್ಕೆ ಸಂಬಂಧಿಸಿದ ಕಥಾ ಹಂದರ ಹೊಂದಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಮಾನ್ಯತೆ ಹಾಗೂ ಪ್ರದರ್ಶನ ಕಂಡಿರುವ ‘ದ್ವಮ್ದ್ವ’ ಕನ್ನಡ ಕಲಾತ್ಮಕ ಚಲನಚಿತ್ರ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಹಾಗೂ ಪತ್ರಕರ್ತರಿಗೆ ವಿಶೇಷ ಪ್ರದರ್ಶನವನ್ನು ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿತ್ತು. ಬೆಂಕಿ ಬ್ಯಾಚ್ಮೇಟ್ಸ್ ಪ್ರೊಡಕ್ಷನ್ ಮತ್ತು ಕೋಣನೂರು ಪ್ರೊಡಕ್ಷನ್ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸಿನೆಮಾ ನಿರ್ದೇಶಕ ಪೃಥ್ವಿ ಕೋಣನೂರು ‘ದ್ವಮ್ದ್ವ’ ಚಲನಚಿತ್ರವನ್ನು ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಗೊಳಿಸಿದರು. […]
ಬುಲ್ ಟ್ರಾಲ್, ಲೈಟ್ ಫಿಶಿಂಗ್ ಮೀನುಗಾರಿಕೆ ನಿಷೇಧಿಸುವಂತೆ ಆಗ್ರಹಿಸಿ ನಾಡದೋಣಿ ಮೀನುಗಾರರಿಂದ ಧರಣಿ
ಉಡುಪಿ: ಬುಲ್ ಟ್ರಾಲ್ ಮತ್ತು ಅವೈಜ್ಞಾನಿಕ ಬೆಳಕು ಮೀನುಗಾರಿಕೆ (ಲೈಟ್ ಫಿಶಿಂಗ್) ನಿಷೇಧ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ನಾಡದೋಣಿ ಮೀನುಗಾರರು ಶುಕ್ರವಾರ ಬೈಂದೂರು ತಾಲೂಕಿನ ತ್ರಾಸಿ ಕಡಲ ಕಿನಾರೆಯಲ್ಲಿ ಧರಣಿ ನಡೆಸಿದರು. ಉಡುಪಿ, ದ.ಕ. ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಾಡದೋಣಿ ಮೀನುಗಾರರು ತ್ರಾಸಿ ಸಮುದ್ರದಲ್ಲಿ ನೂರಾರು ನಾಡದೋಣಿಗಳನ್ನು ಲಂಗರು ಹಾಕಿ ಪ್ರತಿಭಟಿಸಿದರು.ಲೈಟ್ ಫಿಶಿಂಗ್ ಹಾಗೂ ನಿಷೇಧವಾಗಿರುವ ಬಲೆಗಳನ್ನು ಬಳಸಿ ಮಾಡುವ ಬುಲ್ […]
ಉಡುಪಿ:ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು : ವಾರ್ಷಿಕೋತ್ಸವ ಸಮಾರಂಭ
ಉಡುಪಿ:ಆತ್ಮ ವಿಶ್ವಾಸ, ಪ್ರಾಮಾಣಿಕತೆ ಮತ್ತು ಸತತ ಪರಿಶ್ರಮವಿದ್ದಾಗ ಮಾತ್ರ ವಿದ್ಯಾರ್ಥಿಗಳು ಗೆಲುವನ್ನು ಸಾಧಿಸಬಹುದು. ನಮ್ಮೊಳಗಿನ ಹಿಂಜರಿಕೆಗೆ ನಾವೇ ಉತ್ತರ ಕಂಡುಕೊಳ್ಳಲು ಸಾಧ್ಯವಿಲ್ಲ ಎನ್ನುವವರ ಎದುರು ಅಸಾಧ್ಯವನ್ನ ಸಾಧಿಸಿ ತೋರಿಸುವವರಾಗಬೇಕು. ನಮ್ಮ ತಂದೆ ತಾಯಿಗಳ ಪ್ರೀತಿ ಆದರಗಳಿಗೆ ಪಾತ್ರರಾಗಿ ಪ್ರಬುದ್ಧ ವ್ಯಕ್ತಿಗಳಾಗಬೇಕೆಂದು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ, ಸಾಹಿತಿ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಇತ್ತೀಚಿಗೆ ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಪಡುಬಿದ್ರೆ: ನೇಣು ಬಿಗಿದು ಯುವಕ ಆತ್ಮಹತ್ಯೆ
ಪಡುಬಿದ್ರೆ: ಸಾಲದ ಚಿಂತೆಯಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡ ಯುವಕ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ಇವರು ಮೂರು ತಿಂಗಳ ಹಿಂದೆ ಊರಿಗೆ ಮರಳಿದ್ದರು. ಸಾಲದ ಚಿಂತೆಯಲ್ಲಿದ್ದರೆನ್ನಲಾಗಿದೆ. ಮನೆಯಲ್ಲಿದ್ದ ಸಮಯದಲ್ಲಿ ಸಾಲ ಕೊಟ್ಟ ಬ್ಯಾಂಕ್ ನವರು, ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರೆನ್ನಲಾಗಿದ್ದು, ಇದರಿಂದ ಮಾನಸಿಕವಾಗಿ ನೊಂದಿದ್ದರು. ಬುಧವಾರ ಬೆಡ್ ರೂಂನಲ್ಲಿ ಫ್ಯಾನಿಗೆ ಚೂಡಿದಾರದ ವೇಲಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪಡುಬಿದ್ರೆ […]
ಶುಭದ ಆಂಗ್ಲ ಮಾಧ್ಯಮ ಶಾಲೆ: ಅಂತರ್ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ; ಪ್ರಮುಖ ಬಿ ಪೂಜಾರಿ ಚಾಂಪಿಯನ್.
ಕಿರಿಮಂಜೇಶ್ವರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ) ಪ್ರಮುಖ ಬಿ ಪೂಜಾರಿ (1ನೇ ತರಗತಿ) 5 ಪಂದ್ಯಗಳಲ್ಲಿ ಐದನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕಿ, ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.