ಉಡುಪಿ:ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು […]