ಕುಂದಾಪುರ ಮತ್ತು ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ಬೇಕಾಗಿದ್ದಾರೆ.

ಉಡುಪಿ: ಕುಂದಾಪುರ ಮತ್ತು ಬ್ರಹ್ಮಾವರದ ಪ್ಲೇಸ್ಮೆಂಟ್ ಆಫೀಸಿನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: 1.ಟೆಲಿಕಾಲರ್ – 2 (Female) 2.ಆಫೀಸ್ ಸ್ಟಾಫ್ – 2 (Female) ಯಾವುದೇ ಡಿಗ್ರಿ ವಿದ್ಯಾರ್ಹತೆಯೊಂದಿಗೆ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.ಕೆಲಸದ ಸಮಯ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ. ಆದಿತ್ಯವಾರ ರಜಾದಿನ. ಸಂದರ್ಶನದ ನಡೆಯುವ ದಿನಾಂಕ -08-01-2025.ನಿಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮುಖಾಂತರ ಕಳುಹಿಸಿ.9019112723.

ಜ.24ರಿಂದ 26ರವರೆಗೆ ಬ್ರಹ್ಮಾವರದಲ್ಲಿ ಆರೋಗ್ಯ ಇಲಾಖೆಯ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟ

ಉಡುಪಿ: ಕ್ಷಯ ಮುಕ್ತ ಉಡುಪಿ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜ.24ರಿಂದ 26ರವರೆಗೆ ಬ್ರಹ್ಮಾವರ ಎಸ್‌ಎಂಎಸ್ ಕ್ರೀಡಾಂಗಣದಲ್ಲಿ ‘ಎನ್‌ಟಿಇಪಿ-ಸ್ವಾಸ್ಥ್ಯ ಟ್ರೋಫಿ’ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಪಂದ್ಯಾಟದ ಪೋಸ್ಟರನ್ನು ಕುಂದ ಗನ್ನಡದ ಸಾಂಸ್ಕೃತಿಕ ರಾಯಭಾರಿ ಮನು ಹಂದಾಡಿ ಉಡುಪಿ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು. ಆರೋಗ್ಯ ಇಲಾಖೆ ಕ್ಷಯ ರೋಗ ವಿಭಾಗದ ನೌಕರರ ಸಂಘದ ಜಿಲ್ಲಾಧ್ಯಕ್ಷ ಅಲಂದೂರು ಮಂಜುನಾಥ್ ಮಾತನಾಡಿ, ಪಂದ್ಯಾಟದಲ್ಲಿ ರಾಜ್ಯದ ಒಟ್ಟು 18 ತಂಡಗಳು ಭಾಗವಹಿಸಲಿವೆ. ಈ ಸಂದರ್ಭದಲ್ಲಿ ಜಿಲ್ಲೆಯ ನೂರು […]

ಉಡುಪಿ: ಮಾ.1, 2ಕ್ಕೆ ವಕೀಲರ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್, ಶಟಲ್ ಬ್ಯಾಡ್ಮಿಂಟನ್ ಟೂರ್ನ್ ಮೆಂಟ್

ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125 ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನ್ ಮೆಂಟ್ ಅನ್ನು ಮಾರ್ಚ್ 1 ಮತ್ತು 2 ರಂದು ಉಡುಪಿಯ ಎಂಜಿ‌ಎಂ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಉಡುಪಿ ಜಿಲ್ಲಾ […]

ಜ.17ರಿಂದ 23ರವರೆಗೆ ಉಡುಪಿ-ಮಂಗಳೂರಿನಲ್ಲಿ “ಕರ್ನಾಟಕ ಕ್ರೀಡಾಕೂಟ-2025”

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆ ಮತ್ತು ಜಿಲ್ಲಾಡಳಿತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜ.17ರಿಂದ 23ರವರೆಗೆ ಉಡುಪಿ ಹಾಗೂ ಮಂಗಳೂರಿನಲ್ಲಿ ಕರ್ನಾಟಕ ಕ್ರೀಡಾಕೂಟ-2025 ಅನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟದಲ್ಲಿ 25ವಿವಿಧ ಕ್ರೀಡಾ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, 3247 ಸ್ಪರ್ಧಾಳುಗಳು ಹಾಗೂ 599 ತಾಂತ್ರಿಕ ಅಧಿಕಾರಿಗಳು ಮತ್ತು ಸಂಘಟಕರ ತಂಡ ಸೇರಿದಂತೆ ಒಟ್ಟು 4250 ಜನ ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ […]

ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ, ಜನವರಿ 13: ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬ ವ್ಯಕ್ತಿಯು ಡಿಸೆಂಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈ ಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.