ಮಕರ ಸಂಕ್ರಾಂತಿ ಉತ್ಸವ; ಸಾಮಾನ್ಯ ವೃತಾಧಾರಿಗಳಂತೆ ಶಬರಿಮಲೆಯಾತ್ರೆ ಕೈಗೊಂಡ ಉಡುಪಿ ಶಾಸಕರು

ಉಡುಪಿ: ಮಕರ ಸಂಕ್ರಾಂತಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಲಕ್ಷಾಂತರ ಭಕ್ತರು ಪ್ರತಿದಿನ ಅಯ್ಯಪ್ಪಸ್ವಾಮಿ ದೇವರ ದರ್ಶನ ಮಾಡುತ್ತಿದ್ದಾರೆ. ದೇಶದ ವಿವಿಧ ಭಾಗಗಳಿಂದ ಕೇರಳದ ಶಬರಿಮಲೆಗೆ ಜ್ಯೋತಿ ದರ್ಶನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕಳೆದ 21 ವರ್ಷಗಳಿಂದ ಅಯ್ಯಪ್ಪ ಮಾಲೆ ಧರಿಸಿ ವೃತಾಚರಣೆ ಮಾಡುತ್ತಿದ್ದಾರೆ. ಉಡುಪಿಯ ಹಿಂದೂ ಯುವ ಸೇನೆ ಮತ್ತು ಬನ್ನಂಜೆಯ ಅಯ್ಯಪ್ಪ ಭಕ್ತವೃಂದದ ಶಿಬಿರದಲ್ಲಿ ವಿಶೇಷ ಪೂಜೆ ಮತ್ತು ಅನ್ನ ಸಂತರ್ಪಣೆ ನಡೆಸುವ ಮೂಲಕ ಯಶ್ ಪಾಲ್ ಸುವರ್ಣ […]

ಕುಂದಾಪುರ: ಕಾರು – ಟೆಂಪೋ ಢಿಕ್ಕಿ; ವಾಹನ ಚಾಲಕರಿಗೆ ಗಂಭೀರ ಗಾಯ

ಉಡುಪಿ: ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ರವಿವಾರ ರಾತ್ರಿ ಸಂಭವಿಸಿದೆ. ಕುಂದಾಪುರ ಕಡೆ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಬಂದು ಕುಂದಾಪುರದಿಂದ ಉಡುಪಿ ಕಡೆ ಹೋಗುತ್ತಿದ್ದ ಐಸ್ ಕ್ರೀಮ್ ಸಾಗಾಟದ ಟೆಂಪೋಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ವಾಹನಗಳು ಜಖಂಗೊಂಡಿದ್ದು ಇಬ್ಬರು ಚಾಲಕರು ಗಂಭೀರ ಗಾಯಗೊಂಡಿದ್ದಾರೆ.

ಮಹಾಕುಂಭ ಮೇಳದ ಯಶಸ್ಸಿಗಾಗಿ ಮಠ -ಮನೆ ಮಂದಿರಗಳಲ್ಲಿ ಪ್ರಾರ್ಥಿಸಿ; ಪೇಜಾವರ ಶ್ರೀ ಕರೆ

ಉಡುಪಿ: ಉತ್ತರ ಪ್ರದೇಶ ಪ್ರಯಾಗರಾಜ್ ಪವಿತ್ರ ತ್ರಿವೇಣಿ ಸಂಗಮದಲ್ಲಿ 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾಕುಂಭ ಮೇಳದ ಸಂಪೂರ್ಣ ಯಶಸ್ಸಿಗಾಗಿ ನಾಡಿನ ಸಮಸ್ತ ಸಾಧು ಸಂತರು ಹಾಗೂ ಪ್ರತೀ ಮನೆ ಮಂದಿರಗಳಲ್ಲಿ ಸಮಸ್ತ ಹಿಂದು ಸಮಾಜ ದೇವರ ಮುಂದೆ ದೀಪ ಬೆಳಗಿ ಪ್ರಾರ್ಥಿಸುವಂತೆ ಪೇಜಾವರ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಕರೆ ನೀಡಿದ್ದಾರೆ. ಮಹಾಕುಂಭ ಮೇಳ ಇಡೀ ಜಗತ್ತಿನ ಒಂದು ಮಹಾಕೌತುಕ. ಪ್ರಪಂಚದ ಅತೀ ದೊಡ್ಡ ಧಾರ್ಮಿಕ ಮೇಳವಾಗಿದೆ . ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನವನ್ನು ಉದ್ದೇಶವಾಗಿಟ್ಟುಕೊಂಡು ದೇಶ ವಿದೇಶಗಳಿಂದ ಕೋಟ್ಯಂತರ […]

ಕುಂದಾಪುರ: ಡ್ರೈವರ್ ಇಲ್ಲದೆ ಚಲಿಸಿದ ಖಾಸಗಿ ಬಸ್; ನಿಂತಿದ್ದ ಕಾರಿಗೆ ಢಿಕ್ಕಿ

ಉಡುಪಿ: ಡಿಪೋದಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸೊಂದು ಡ್ರೈವರ್ ಇಲ್ಲದೆ ಚಲಿಸಿ ಸರ್ವೀಸ್ ರಸ್ತೆ ಹಾಗೂ ಹೆದ್ದಾರಿ ಬ್ಯಾರಿಕೇಡ್ ದಾಟಿ ಹೋಟೆಲೊಂದರ ಮುಂದಿದ್ದ ಕಾರಿಗೆ ಢಿಕ್ಕಿಯಾಗಿ ನಿಂತ ಘಟನೆ ಕುಂದಾಪುರ ಹೊರವಲಯದ ಹಂಗಳೂರು ಎಂಬಲ್ಲಿ ಸೋಮವಾರ ಬೆಳಿಗ್ಗೆ 7ಗಂಟೆಗೆ ನಡೆದಿದೆ. ಬಸ್ ಶುಚಿಗೊಳಿಸಿ ಸಿಬ್ಬಂದಿ ಬಸ್ಸಿನಿಂದ ಇಳಿದಿದ್ದರು. ಇದಾದ ಬಳಿಕ ಡಿಪೋದಿಂದ ಬಸ್ಸು ಮುಂದಕ್ಕೆ ಚಲಿಸಿ ಸರ್ವೀಸ್ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ಸರ್ವೀಸ್ ರಸ್ತೆಗೆ ಅಡ್ಡಲಾಗಿದ್ದ ಬ್ಯಾರಿಕೇಡ್ ಮುರಿದು ಸಾಗಿ ಹೋಟೆಲೊ‌ಂದರ ಎದುರು ನಿಂತಿದ್ದ ಕಾರಿಗೆ ಢಿಕ್ಕಿಯಾಗಿದೆ. […]

ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಸಾಹಿತಿ ಎಸ್ಎಲ್ ಭೈರಪ್ಪ ಭೇಟಿ

ಉಡುಪಿ: ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ ಅವರು ಉಡುಪಿ ಜಿಲ್ಲೆಯ ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕಿಗೆ ಭೇಟಿ ನೀಡಿದರು. ಶಿವರಾಮ ಕಾರಂತರ ಜೀವನ ಹಾಗೂ ಸಾಹಿತ್ಯದ ವಿಚಾರಗಳನ್ನು ನಾನಾ ಬಗೆಯಲ್ಲಿ ತಿಳಿಯಪಡಿಸುವ ಈ ಕೇಂದ್ರವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಿವರಾಮ ಕಾರಂತರ ಸಾಹಿತ್ಯ ಮತ್ತು ಸಾಮಾಜಿಕ ಚಳುವಳಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರತಿ ವರ್ಷ ಶಿವರಾಮ ಕಾರಂತರ ಹೆಸರಲ್ಲಿ ಹುಟ್ಟೂರ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಹಿಂದೆ ಎಸ್ಎಲ್ ಬೈರಪ್ಪ ಅವರಿಗೆ ಪ್ರಶಸ್ತಿ ನೀಡಲಾಗಿತ್ತು. ಈ […]