ಉಡುಪಿ:ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ ಜಾರಿ

ಉಡುಪಿ: ಕರ್ನಾಟಕ ಲೋಕಸೇವಾ ಆಯೋಗ ಬೆಂಗಳೂರು ಇವರ ವತಿಯಿಂದ ಜನವರಿ 19 ಮತ್ತು 25 ರಂದುನಡೆಸಲಾಗುತ್ತಿರುವ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಲಾದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ […]
ಉಡುಪಿ: ಜಿಲ್ಲೆಯಲ್ಲಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಶೀಘ್ರ ಅನುಷ್ಠಾನ; ಅಧಿಕಾರಿಗಳೊಂದಿಗೆ ಸಂಸದ ಕೋಟ ಚರ್ಚೆ

ಉಡುಪಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅನುಷ್ಠಾನವನ್ನು ಇನ್ನಷ್ಟು ಚುರುಕು ಗೊಳಿಸಲು ಹಾಗೂ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ನೀಡಲು ಸಂಸದ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು. ಯೋಜನೆಯಲ್ಲಿ ಆಯ್ಕೆಯಾದ 6,732 ಫಲಾನುಭವಿಗಳ ಫೈಕಿ 4,864 ಮಂದಿ ತರಬೇತಿ ಪಡೆದಿದ್ದು, ಇನ್ನುಳಿದ ಅರ್ಜಿದಾರರಿಗೆ ತರಬೇತಿಯನ್ನು ಸಮರ್ಪಕವಾಗಿ ನೀಡಲು ಮತ್ತು ಪ್ರತಿಯೊಬ್ಬ ತರಬೇತಿ ಪಡೆದ ವ್ಯಕ್ತಿಗೆ ಸಾಲ ಸೌಲಭ್ಯ […]
ಉಡುಪಿ:ಫೆ.7ರಿಂದ 9ರವರೆಗೆ ಮಹಿಳಾ ಉದ್ಯಮಿಗಳ ಆರ್ಥಿಕ ಬಲವರ್ಧನೆಗಾಗಿ “ಪವರ್ ಪರ್ಬ 25′

ಉಡುಪಿ :ಗೃಹೋದ್ಯೋಗ ಹಾಗೂ ಕುಟುಂಬ ಉದ್ಯಮಗಳಲ್ಲಿ ತೊಡಗಿರುವ ಮಹತ್ವಾಕಾಂಕ್ಷಿ ಮಹಿಳಾ ಉದ್ಯಮಿಗಳು ಸದಸ್ಯರಾಗಿರುವ ಹಾಗೂ ಲಾಭದ ಉದ್ದೇಶವಿಲ್ಲದ ಸಂಸ್ಥೆ ಪವರ್ (ಪ್ಲ್ಯಾಟ್‌ಫಾರಂ ಆಫ್ ವ್ಯೂಮೆನ್ ಎಂಟರ್‌ಪ್ರನ್ಯೂರ್) ಆಶ್ರಯದಲ್ಲಿ ಈ ಬಾರಿ ಫೆ.7ರಂದು ಪ್ರಾರಂಭಗೊಂಡು ಫೆ.9ರ ವರೆಗೆ ಮಿಷನ್ ಕಂಪೌಂಡ್ ಬಳಿಯ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ “ಪವರ್ ಪರ್ಬ 25’ಕ್ಕೆ ಸಕಲ ಸಿದ್ಧತೆ ಭರದಿಂದ ನಡೆಯುತ್ತಿದ್ದು, ಅತಿಥಿ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಪ್ರದರ್ಶನ ಮತ್ತು ಮಾರಾಟ:ಕೇಂದ್ರ ಸರಕಾರದ ಪಿಎಂಎಸ್ ಸ್ಕೀಮ್ ಆಫ್ ಎಂಎಸ್‌ಎಂಇ ಸಹಯೋಗದೊಂದಿಗೆ ಪರ್ಬ ಆಯೋಜಿಸುತ್ತಿದ್ದು, ಒಟ್ಟು […]
ಮಣಿಪಾಲ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ; ವ್ಯಕ್ತಿ ಮೃತ್ಯು.

ಮಣಿಪಾಲ: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜ.15ರಂದು ಮಧ್ಯಾಹ್ನ ವೇಳೆ ಮಣಿಪಾಲ ಕೆಎಂಸಿ ಆಸ್ಪತ್ರೆಯ ಎದುರುಗಡೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಚಿತ್ರದುರ್ಗದ ರಾಜಪ್ಪ ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಹಿರಿಯಡ್ಕ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ರಾಜಪ್ಪ ಅವರಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯ ಗೊಂಡ ಅವರು, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ […]
ಉಜಿರೆ:ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್ ನ ಬಗ್ಗೆ ಉಚಿತ ತರಬೇತಿ ಕಾರ್ಯಕ್ರಮ

ಉಜಿರೆ:ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು ಸರ್ವಿಸ್(ಸೆಕ್ಯುರಿಟಿ ಆಲಾರಾಂ, ಸ್ಮೋಕ್ ಡಿಟೆಕ್ಟರ್ ) ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 29.01.25 ರಿಂದ 10.02.25ರ ವರೆಗೆ (13ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.https://forms.gle/9LUE1UvHMAv21vRS7 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9902594791, 9591044014 ಹಾಗೂhttps://www.rudsetujire.com ಸಂಸ್ಥೆಯ ವೆಬ್ […]