ಉಡುಪಿ:ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಉಡುಪಿ: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ ದಾರಿಯೆಡೆಗೆ ಸಾಗಲು ಸಾಧ್ಯ. ಇದು ಎಲ್ಲಾ ಧರ್ಮಗಳ ಸಾರ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಬಡವರು ಮತ್ತು ದೀನ ದಲಿತರ ಬಗ್ಗೆ ಅವರ ಚಿಂತನೆಗಳು ಗಮನ ಸೆಳೆಯುತ್ತವೆ. ಮಾನವೀಯ ಮೌಲ್ಯಗಳೇ ವಿವೇಕಾನಂದರು ಪ್ರತಿಪಾದಿಸಿದ ಮುಖ್ಯ ತತ್ವವಾಗಿದೆ. ಇದು ಜಾಗತಿಕ ಶಾಂತಿಗೆ ಕಾರಣವಾಗುತ್ತದೆ. ಈ ದೃಷ್ಟಿಯಿಂದ ವಿವೇಕಾನಂದರ ಚಿಂತನೆ ಹೆಚ್ಚು ಸಮಕಾಲೀನವಾಗಿದೆ ಎಂದು ಚಿಂತಕಿ ಡಾ. ನಿಕೇತನ ಪ್ರತಿಪಾದಿಸಿದ್ದಾರೆ. ಅವರು ಶನಿವಾರ ನಗರದ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ […]

ಉಡುಪಿ:ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

udupixpress

ಉಡುಪಿ: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರ ವತಿಯಿಂದ ಒಂದು ದಿನದ ಡಾ.ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರವು ಜನವರಿ 27 ರಂದು ಬೆಳಗ್ಗೆ 10 ಗಂಟೆಗೆ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಲಿದೆ. ಕಾರಂತರ ಕಾದಂಬರಿಗಳನ್ನು ಕೇಂದ್ರವಾಗಿಟ್ಟುಕೊಂಡು ಕಾದಂಬರಿ ಪ್ರಕಾರದ ಸ್ವರೂಪವನ್ನು ಅರಿಯುವುದು ಶಿಬಿರದ ಮುಖ್ಯ ಉದ್ದೇಶವಾಗಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ಮಾಡಲಿದ್ದು, 25 ಜನರಿಗೆ ಮಾತ್ರ ಭಾಗವಹಿಸುವ ಅವಕಾಶವಿದೆ. ಉಚಿತ […]

ಉಡುಪಿ:ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಕರೆ

ಉಡುಪಿ: ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಾಹೆ ವಿ.ವಿ ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡಲಿದ್ದಾರೆ. ಸಾರ್ವಜನಿಕರು ಈ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದರೊಂದಿಗೆ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಕರೆ ನೀಡಿದರು. ಅವರು ಶನಿವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ […]

ಉಡುಪಿ:ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾಧಿಕಾರಿಯಿಂದ ವೀಕ್ಷಣೆ

ಉಡುಪಿ:ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಇಂದು ಸ್ಥಳ ಭೇಟಿ ಮಾಡಿ, ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯ ವೇಗವು ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅವರು, ಅದರ ವೇಗವನ್ನು ಮತ್ತಷ್ಟು ಹೆಚ್ಚಿಸಲು ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. […]