ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ.

ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ; ಮೂವರು ಆರೋಪಿಗಳ ಬಂಧನ.: ಕೋಟೆಕಾರ್ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಗೆ ಕಳೆದ ಶುಕ್ರವಾರ ನುಗ್ಗಿದ ದರೋಡೆಕೋರರು ಸಿಬ್ಬಂದಿಯನ್ನು ಬೆದರಿಸಿ ದರೋಡೆಗೈದು ಪರಾರಿಯಾದವರ ಪೈಕಿ ಮೂವರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ಕಾರೊಂದರಲ್ಲಿ ಬಂದ ಐವರು ಮುಸುಕುಧಾರಿಗಳ ತಂಡ ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ಈ ದರೋಡೆ ನಡೆಸಿದ್ದರು. ದರೋಡೆ ಮಾಡಿದ ನಂತರ ಆರೋಪಿಗಳು ತಮಿಳುನಾಡಿನ ತಿರುನಲ್ವೇಲಿ ತೆರಳಿದ್ದರು. ಬಂಧಿತರಿಂದ ತಲ್ವಾರ್, […]
ಪರ್ಕಳ ಮಹಾಲಿಂಗೇಶ್ವರ ದೇವಸ್ಥಾನ ಕೆರೆ ಮರು ನಿರ್ಮಾಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಪರ್ಕಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆ ಕಾಮಗಾರಿ ಸ್ಥಳಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಕ್ಷಣ ಕೆರೆಯ ಮರು ನಿರ್ಮಾಣದ ಕಾಮಗಾರಿ ಆರಂಭ ಮಾಡುವಂತೆ ಸೂಚನೆ ನೀಡಿದರು. ಕಳೆದ ಮಳೆಗಾಲದಲ್ಲಿ ಕೆರೆ ಕಾಮಗಾರಿ ಹಂತದಲ್ಲೇ ಕುಸಿದ ಹಿನ್ನೆಲೆಯಲ್ಲಿ ಹಿರಿಯ ತಾಂತ್ರಿಕ ಪರಿಣಿತರ ಸಲಹೆಯಂತೆ, ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸ್ಥಳೀಯರ ಅಭಿಪ್ರಾಯ ಪಡೆದು ಅತ್ಯಂತ ವೈಜ್ಞಾನಿಕ ರೀತಿಯಲ್ಲಿ ಕಾಮಗಾರಿ ನಡೆಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ […]
ಜ. 26ರಂದು ಸಮುದ್ರ ಕಿನಾರೆಯಲ್ಲಿ ವಿಷ್ಣು ಸಹಸ್ರ ನಾಮ ಸ್ತೋತ್ರ ಪಠಿಸುವ ಮಹಾಭಿಯಾನ

ಉಡುಪಿ: ಕಡಲ್ಕೊರೆತದಂತಹ ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಲುವಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಸಮಿತಿ ವತಿಯಿಂದ ಇದೇ ಜ.26ರಂದು ಸಂಜೆ 4ರಿಂದ 6ಗಂಟೆಯವರೆಗೆ ಸಮುದ್ರ ಕಿನಾರೆಯ 108 ಸ್ಥಳಗಳಲ್ಲಿ ವಿಷ್ಣು ಸಹಸ್ರ ನಾಮ ಸ್ತೋತ್ರವನ್ನು ಸಾಮೂಹಿಕವಾಗಿ ಪಠಿಸುವ ಮಹಾಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಶಶೀಂದ್ರ ಕುಮಾರ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,ಕೇರಳದ ಕಣ್ಣೂರಿನಿಂದ ಉಡುಪಿಯ ಶಿರೂರಿನವರೆಗೆ 108 ಜನರ ಗುಂಪು 108 ಕೇಂದ್ರಗಳಲ್ಲಿ ವಿಷ್ಣು ಸಹಸ್ರನಾಮ ಸ್ತೋತ್ರವನ್ನು 6 […]
ಉಚ್ಚಿಲ ಪೇಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಲ್ಲದ ಅಪಘಾತ; ಉಚ್ಚಿಲ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಉಡುಪಿ: ಉಚ್ಚಿಲ ಪೇಟೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತ ಹಾಗೂ ಅವೈಜ್ಞಾನಿಕ ರಸ್ತೆ ಕಾಮಗಾರಿ ಖಂಡಿಸಿ ಸೋಮವಾರ ಉಚ್ಚಿಲಪೇಟೆಯಲ್ಲಿ ಉಚ್ಚಿಲ ನಾಗರಿಕ ಹೋರಾಟ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಹೆದ್ದಾರಿ ತಡೆ ನಡೆಸಿ, ಅಸಮರ್ಪಕ ಹೆದ್ದಾರಿ ಕಾಮಗಾರಿ, ಬೀದಿ ದೀಪ, ಪಾದಚಾರಿಗಳಿಗೆ ಆಗುತ್ತಿರುವ ಸಮಸ್ಯೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಈ ಹೆದ್ದಾರಿ ತಡೆಗೆ ಉಚ್ಚಿಲ ಪರಿಸರದ ಸಾರ್ವಜನಿಕರು ಸಾಥ್ ಕೊಟ್ಟರು. ಅಲ್ಲದೆ ಪ್ರತಿಭಟನಾ […]
ಬ್ರಹ್ಮಾವರ: ಸೈಟ್ ಸೂಪರ್ವೈಸರ್ ಹುದ್ದೆಗೆ ನೇಮಕಾತಿ.

ಬ್ರಹ್ಮಾವರ:ಸೈಟ್ ಸೂಪರ್ವೈಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಕಟ್ಟಡ ನಿರ್ಮಾಣ ಯೋಜನೆಗಳಲ್ಲಿ ಅನುಭವ ಹೊಂದಿದ್ದು, ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ:+91 97414 70799