ಮಲ್ಪೆ ರಾಮ ಮಂದಿರಕ್ಕೆ ಕಾಶೀ ಮಠಾಧೀಶರ ಭೇಟಿ: ” ಶ್ರೀ ಸುಧೀಂದ್ರ ತೀರ್ಥ ನಿಲಯ ” ಇದರ ಉದ್ಘಾಟನಾ ಕಾರ್ಯಕ್ರಮ

ಮಲ್ಪೆ: ಶ್ರೀ ರಾಮ ಮಂದಿರ ಜಿ ಎಸ್ ಬಿ ಸಮಾಜ ಮಲ್ಪೆ ಇದರ ರಜತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಒಂದಾದ ಅತಿಥಿ ಗ್ರಹ ” ಶ್ರೀ ಸುಧೀಂದ್ರ ತೀರ್ಥ ನಿಲಯ ” ಇದರ ಉದ್ಘಾಟನೆ ಕಾರ್ಯಕ್ರಮವು ಜನವರಿ 20 ರಂದು ಸಂಜೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದಂಗಳವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡಿತು. ದೇವಳದ ವತಿಯಿಂದ ಪೂಜ್ಯ ಶ್ರೀಗಳನ್ನು ಚಂಡೆ , ಮಂಗಳವಾದ್ಯ ಹಾಗೂ ಪೂರ್ಣ ಕುಂಭ […]
ಮಣಿಪಾಲ: ಮೆಸ್ಕಾಂ ಕಚೇರಿಯ ನಾಲ್ಕನೇ ಮಹಡಿಯಿಂದ ಜಿಗಿದು ಚಾಲಕ ಆತ್ಮಹತ್ಯೆ

ಉಡುಪಿ: ಮೆಸ್ಕಾಂ ಕಚೇರಿಯ ನಾಲ್ಕನೇ ಮಹಡಿಯ ಹಿಂಭಾಗದಿಂದ ವ್ಯಕ್ತಿಯೋರ್ವ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಪಶ್ಚಿಮ ಬಂಗಾಲದ ರವಿ ಮೊಹಂತ್ (24) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಾಂಕ್ರೀಟ್ ಸಾಗಾಟದ ಲಾರಿಯ ಚಾಲಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಣಿಪಾಲ ಪೋಲಿಸ್ ಠಾಣೆಯ ಎಎಸ್ಐ ನಾಗೇಶ್ ನಾಯ್ಕ್, ತನಿಖಾ ಸಹಾಯಕ ಸುಕುಮಾರ್ ಶೆಟ್ಟಿ ಆಗಮಿಸಿ ಪರಿಶೀಲನೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಮರಣೋತ್ತರ […]
ಕೊಡವೂರು- ಮಲ್ಪೆ ರಸ್ತೆಯ ತುಂಬಾ ಹೊಂಡಗುಂಡಿ: ವಾಹನ ಸವಾರರ ಪರದಾಟ

ಉಡುಪಿ: ಕೊಡವೂರು- ಮಲ್ಪೆ ರಸ್ತೆಯು ಹೊಂಡಗುಂಡಿಗಳಿಂದ ಕೂಡಿದ್ದು, ಸ್ಥಳೀಯರು ಪರದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ.ರಸ್ತೆಯ ಡಾಂಬರು ಕಿತ್ತುಹೋಗಿದ್ದು, ಜಲ್ಲಿಕಲ್ಲುಗಳು ಮೇಲೆ ಎದ್ದಿವೆ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ನಿತ್ಯ ಸಂಚರಿಸುವ ಜನರು ಸಂಕಷ್ಟ ಎದುರಿಸುವಂತಾಗಿದೆ. ಈಗಾಗಲೇ ಹಲವು ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. ನಗರಸಭೆಯ ಟೆಂಡರ್ ಪ್ರಕ್ರಿಯೆ ಆಗಿದ್ದು, ಕಾಮಗಾರಿ ಮಾತ್ರ ಇನ್ನೂ ಶುರುವಾಗಿಲ್ಲ. ಹೀಗಾಗಿ ಕೂಡಲೇ ಕಾಮಗಾರಿ ಆರಂಭಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಲೋಕ ಕಲ್ಯಾಣಾರ್ಥಕ್ಕಾಗಿ 1008 ಗಣಯಾಗ

ಉಡುಪಿ: ಉಡುಪಿಯಲ್ಲಿ ಅಪರೂಪದ 1008 ಗಣಯಾಗ ನಡೆದಿದೆ. ಜಿಲ್ಲೆಯ ಕಾಪು ತಾಲೂಕಿನ ಮಜೂರಿನಲ್ಲಿ ನಡೆದ ಈ ಯಾಗವನ್ನು ಲೋಕಕಲ್ಯಾಣಾರ್ಥಕ್ಕಾಗಿ ಆಯೋಜಿಸಲಾಗಿತ್ತು.ಹತ್ತಾರು ಪುರೋಹಿತರು ಯಜ್ಞದಲ್ಲಿ ಭಾಗವಹಿಸಿದ್ದರು. ಉಡುಪಿಯ ಅಷ್ಟಮಠಗಳಿಗೆ ಸೇರಿದ ದಂಡ ತೀರ್ಥ ಕ್ಷೇತ್ರದ ಅರ್ಚಕರಾಗಿರುವ ಶ್ರೀನಿವಾಸ ಭಟ್ ಈ ಯಾಗ ಆಯೋಜಿಸಿದ್ದರು. ಇದೊಂದು ಅಪರೂಪಕ್ಕೆ ನಡೆಯುವ ಯಾಗವಾಗಿದ್ದು, ಅನೇಕ ಶ್ರದ್ದಾಳುಗಳು ಈ ಗಳಿಗೆಗೆ ಸಾಕ್ಷಿಯಾದರು.
ಜ.23ರಂದು ಬೆಂಗಳೂರಿನಲ್ಲಿ ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಉಡುಪಿ: ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ನೇತೃತ್ವದಲ್ಲಿ ಇದೇ ಜ.23ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದು, ಈ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ ಸುಮಾರು 1 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ಯ ಜಿಲ್ಲಾ ಸಂಚಾಲಕ ಮಂಜುನಾಥ್ ಗಿಳಿಯಾರು ತಿಳಿಸಿದರು. […]