ಉಡುಪಿ: ರಾಷ್ಟ್ರೀಯ ಮತದಾರರ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಜನವರಿ 25 ರಂದು ಬೆಳಗ್ಗೆ 10.30ಕ್ಕೆ ನಗರದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕಿರಣ್ ಎಸ್.ಗಂಗಣ್ಣನವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ […]
ಉಡುಪಿ:ಜಾಂಯ್ಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ : ನಿಷೇಧಾಜ್ಞೆ ಜಾರಿ

ಉಡುಪಿ: ಜಿಲ್ಲೆಯಲ್ಲಿ ಐ.ಆನ್ ಡಿಜಿಟಲ್ ಝೋನ್, ಐ.ಡಿ.ಝಡ್ ಮಿಲ್ಕ್ ಡೈರಿ ರೋಡ್, ಡಾ.ಟಿ.ಎಂ.ಎ ಪೈಪಾಲಿಟೆಕ್ನಿಕ್, ಎಂ.ಐ.ಟಿ ಕ್ಯಾಂಪಸ್, ಈಶ್ವರ ನಗರ, ಮಣಿಪಾಲ ಮತ್ತು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿ ಜನವರಿ 22 ರಿಂದ 24 ರವರೆಗೆ ಮತ್ತು 28 ರಿಂದ 30 ರ ವರೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ಜಾಂಯ್ಟ್ ಎಂಟ್ರೆನ್ಸ್ ಎಕ್ಸಾಮಿನೇಷನ್ ನಡೆಯಲಿರುವ ಹಿನ್ನೆಲೆ, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ […]
ಉಡುಪಿ:ಕರ್ನಾಟಕ ಕ್ರೀಡಾಕೂಟ ಸಮಾರೋಪ : ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿ-ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾಕ್ರೀಡಾಂಗಣದಲ್ಲಿ ನಡೆಯಲಿದೆ. ಸದರಿ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ಗೌರವಾನ್ವಿತ ಥಾವರ್ ಚಂದ್ ಗೆಹೋಟ್, ರಾಜ್ಯದ ಗೃಹ ಸಚಿವರಾದ ಡಾ.ಜಿ ಪರಮೇಶ್ವರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. […]
ಉಡುಪಿ: ವಸತಿ ಶಾಲೆಗಳಲ್ಲಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯಮೊರಾರ್ಜಿ ದೇಸಾಯಿ, ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ನಾರಾಯಣಗುರು ವಸತಿ ಶಾಲೆಗಳಲ್ಲಿ 2025-26 ನೇ ಸಾಲಿಗೆ 6 ನೇ ತರಗತಿ ದಾಖಲಾತಿಗಾಗಿ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆಗಳಲ್ಲಿ ಜನವರಿ 25 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವೇಶ ಪರೀಕ್ಷೆಯು ಫೆಬ್ರವರಿ 15 ರಂದು ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರುಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರೂರು […]
ಉಡುಪಿ:ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರಿಗೆ ದಾರಿದೀಪ : ಡಾ.ಮಂಜುನಾಥ ಕೋಟ್ಯಾನ್

ಉಡುಪಿ: ಪ್ರಸ್ತುತ ಕಾಲಘಟ್ಟದಲ್ಲಿ ಅಕ್ಷರ ಜ್ಞಾನದ ಜೊತೆಗೆ ನಾಟಕಗಳು ವಿದ್ಯಾರ್ಥಿಗಳಿಗೆ ಮತ್ತು ಯುವಕರ ಬದುಕಿಗೆ ದಾರಿದೀಪವಾಗುತ್ತವೆ ಮತ್ತು ಮುಂದಿನ ಪೀಳಿಗೆಗೆ ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕಾರ್ಕಳ ಭುವನೇಂದ್ರಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ ಕೋಟ್ಯಾನ್ ಹೇಳಿದರು. ಅವರು ಭಾನುವಾರ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಬಯಲು ರಂಗಮಂದಿರದಲ್ಲಿ ಯಕ್ಷ ರಂಗಾಯಣ ಕಾರ್ಕಳಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಆಶ್ರಯದಲ್ಲಿ ನಡೆದ ಕಲ್ಲರಳಿ ಹೂವಾಗಿ-ಮೂರು ದಿನದ ಮಕರಾಯನ ನಾಟಕೋತ್ಸವವನ್ನು ಜಂಬೆ ವಾದ್ಯ ಬಾರಿಸುವುದರ ಮೂಲಕ ಉದ್ಘಾಟಿಸಿ […]