ಕಾರ್ಕಳ: ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.

ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ಜ.19 ರಂದು ತಡರಾತ್ರಿ ಒಬ್ಬ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು ಸೈಂಟ್‌ ಜೋಸೆಫ್‌ ವಿದ್ಯಾಲಯದಲ್ಲಿ ಎಂಬಿಎ ಪ್ರಥಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದ ವೆಂಕಟೇಶ್, ವಿದ್ಯಾಭ್ಯಾಸದಲ್ಲಿ ಕಷ್ಟವಾಗುತ್ತಿದೆ ಎಂದು ತಂದೆಯೊಂದಿಗೆ ಹಂಚಿಕೊಂಡಿದ್ದರು. ಸುಮಾರು 10 ದಿನಗಳಿಂದ ಮೌನವಾಗಿದ್ದ ವೆಂಕಟೇಶ್, ನಿನ್ನೆ ತಡರಾತ್ರಿ ತನ್ನ ಮನೆಯ ಹಿಂಬದಿಯ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ […]

ಪರ್ಕಳ: ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ; ಆರೋಪಿಯ ಬಂಧನ.

ಉಡುಪಿ: ಪರ್ಕಳದ ಲಾಡ್ಜ್‌ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಆರೋಪಿ ಶರಣಪ್ಪನನ್ನು ಬಂಧಿಸಿದ್ದಾರೆ. ಹಾಗೂ ಮಹಿಳೆಯನ್ನು ರಕ್ಷಿಸಲಾಗಿದೆ. ಪರ್ಕಳದ ಬಸ್‌ ನಿಲ್ದಾಣದ ಹಿಂಭಾಗದಲ್ಲಿರುವ ಲಾಡ್ಜ್‌ ಒಂದರಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಜ. 19ರಂದು ಪೊಲೀಸ್‌ ನಿರೀಕ್ಷಕ ರಾಮಚಂದ್ರ ನಾಯಕ್‌ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಹಂಚಿಕೆ: ಯಾವುದೇ ದಾಖಲೆ ನೀಡದಂತೆ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ.

ಉಡುಪಿ: ಕಳೆದ ಒಂದೆರಡು ದಿನಗಳಿಂದ ಮಲ್ಪೆ ಸುತ್ತುಮುತ್ತಲಿನ ಪ್ರದೇಶದ ವ್ಯಾಪ್ತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯಗಳಿಗೆ ಸಂಪರ್ಕಿಸುವಂತೆ ಕರಪತ್ರ ಹಂಚುತ್ತಿದ್ದು, ಇದನ್ನು ನಂಬಿ ಯಾವುದೇ ರೀತಿಯ ವ್ಯವಹಾರ, ದಾಖಲೆ ನೀಡಬಾರದು ಎಂದು ಉಡುಪಿ ಜಿಲ್ಲಾಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಕೇವಲ ಮೊಬೈಲ್ ನಂಬ್ರ ಮಾತ್ರ ಹೊಂದಿರುವ ಈ ಕರಪತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಯಡಿಯಲ್ಲಿ ಎಲ್ಲಾ ತರದ ಸಾಲ ಸೌಲಭ್ಯ ಗಳಿಗಾಗಿ ಸಂಬಂಧಿಸಿದ ದಾಖಲೆಗಳ ಜೊತೆ ಸಂಪರ್ಕಿಸುವಂತೆ ಎರಡು […]

ಉಡುಪಿ: ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು; ಮನೋಹರ್ ಹೆಚ್ ಕೆ.

ಉಡುಪಿ: ಮಾಹೆಯ ಎಂಐಟಿ, ​ಎನ್‌ಎಸ್‌ಎಸ್ ಘಟಕಗಳು ಉಡುಪಿ ಜಿಲ್ಲಾ ಪೊಲೀಸ್​ ಇಲಾಖೆ, ನುಡಿ ಘಟಕ ಮಣಿಪಾಲ ಸಿವಿಲ್ ಇಂಜಿನಿಯರಿಂಗ್ ವಿಭಾಗ ಸಹಯೋಗದೊಂದಿಗೆ ಜನವರಿ 18, 2025 ರಂದು ಸಂಚಾರ ಜಾಗೃತಿ ಸಪ್ತಾಹವನ್ನು ಯಶಸ್ವಿಯಾಗಿ ಆಯೋಜಿಸಿತ್ತು. ಮಣಿಪಾಲ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ಮನೋಹರ್ ಹೆಚ್ ಕೆ ಉದ್ಘಾಟಿಸಿ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಮತ್ತು ಸಮುದಾಯಕ್ಕೆ ಟ್ರಾಫಿಕ್ ಸಿಗ್ನಲ್ ಜಾಗೃತಿ, ಮದ್ಯಪಾನ ಮತ್ತು ಚಾಲನೆಯ ಅಪಾಯಗಳು, ಜವಾಬ್ದಾರಿಯುತ ಪಾರ್ಕಿಂಗ್ ಅಭ್ಯಾಸಗಳು, ಸಂಚಾರ ಅಡಚಣೆಗಳನ್ನು […]