ಉಡುಪಿ: ಶಾರದಾ ಕಲ್ಯಾಣ ಮಂಟಪದ ಉಸ್ತುವಾರಿ ಹೃದಯಾಘಾತದಿಂದ ನಿಧನ

ಉಡುಪಿ: ಉಡುಪಿ ಕುಂಜಿಬೆಟ್ಟಿನ ಶಾರದಾ ಲ್ಯಾಣ ಮಂಟಪದ ವ್ಯವಸ್ಥಾಪಕ ಅಜಿತ್ ರಾವ್ (43) ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಇವರು ಇಂದು ಸಂಜೆ ಕಲ್ಯಾಣ ಮಂಟಪದಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಒಮ್ಮಿಂದೊಮ್ಮೆಲೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ತಕ್ಷಣ ಸ್ಥಳದಲ್ಲಿದ್ದ ಆಟೋ ರಿಕ್ಷಾದಲ್ಲಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆ ಅಜಿತ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಮೃತರು ತಾಯಿ, ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಉಡುಪಿ:ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋಗೆ ಚಾಲನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ್ ರಾವ್ ಮಂಗಳವಾರ ಮಲ್ಪೆ ಪೊಲೀಸ್ ಠಾಣೆಯ ಬಳಿ ಚಾಲನೆ ನೀಡಿದರು. ಇದೇ ಸಂಧರ್ಭದಲ್ಲಿ ಮಾತನಾಡಿದ ಅವರು, ಸಿರಿಧಾನ್ಯದ ಬಳಕೆಯಿಂದ ಯಾವ ರೀತಿಯ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು, ಅರಿತು ಅವುಗಳನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳಬೇಕು. ಸಿರಿಧಾನ್ಯಗಳು ಉತ್ತಮ ಪೋಷಕಾಂಶವುಳ್ಳ ಆಹಾರವಾಗಿರುವುದರಿಂದ ಇದರ […]

ತ್ರಾಸಿ: ಮನೆಯಲ್ಲಿ ಚಿನ್ನಾಭರಣ ಕಳವು; ದಂಪತಿಯ ಸೆರೆ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಬಳಿಯ ಉದಯ ಪೂಜಾರಿ ಎಂಬವರ ಮನೆಯಲ್ಲಿ ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು, ಕುಂದಾಪುರ ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ‌ ಆತನ ಪತ್ನಿ […]

ಉಡುಪಿ:ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

udupixpress

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು ಜನವರಿ 23 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ […]

ನನ್ನ ಅವಧಿಯಲ್ಲಿ ಟೆಂಡರ್ ಆಗಿರುವ ಟ್ರಾಫಿಕ್ ಸಿಗ್ನಲ್ ಯೋಜನೆ‌ಗೆ ಶಾಸಕರಿಂದ ತಡೆ

ಉಡುಪಿ: ವಾಹನ ದಟ್ಟಣೆಯ ಹೆಸರಿನಲ್ಲಿ ಉಡುಪಿಯ ಕಲ್ಸಂಕ ಜಂಕ್ಷನ್ ಅನ್ನು ಬ್ಯಾರಿಕೇಡ್ ಹಾಕಿ ಮುಚ್ಚಿರುವುದು ಅವೈಜ್ಞಾನಿಕ. ಈಗಾಗಲೇ ಟೆಂಡರ್ ಆಗಿರುವ ಟ್ರಾಫಿಕ್ ಸಿಗ್ನಲ್ ಯೋಜನೆ‌ ಅನುಷ್ಠಾನಗೊಳಿಸಿ ಟ್ರಾಫಿಕ್ ಸಮಸ್ಯೆ ಪರಿಹರಿಸಬೇಕಿತ್ತು. ಆದರೆ ನನ್ನ ಅವಧಿಯಲ್ಲಿ ಟೆಂಡರ್ ಆಗಿದೆ ಎಂಬ ಕಾರಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಈ ಯೋಜನೆಗೆ ತಡೆಯೊಡ್ಡುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪಿಸಿದರು. ಉಡುಪಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ರೀತಿಯ ಸಾರ್ವಜನಿಕ ಪ್ರಕಟಣೆ ಹೊರಡಿಸದೆ, ಗಜೆಟ್ […]