ಉಡುಪಿ: ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಮನೆಗೆ ಗೃಹ ಸಚಿವರ ಭೇಟಿ

ಉಡುಪಿ: ಉಡುಪಿಗೆ ಆಗಮಿಸಿದ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಇಂದು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು

ಕರಾವಳಿ ಆಟೋಮೊಬೈಲ್ಸ್ ಪ್ರಮಾಣೀಕೃತ ಮಲ್ಟಿ ಬ್ರ್ಯಾಂಡ್ ಪ್ರಿ ಓನ್ಡ್ ಕಾರುಗಳ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಕರಾವಳಿ ಆಟೋಮೊಬೈಲ್ಸ್ ಪ್ರಮಾಣೀಕೃತ ಮಲ್ಟಿ ಬ್ರ್ಯಾಂಡ್ ಪ್ರಿ ಓನ್ಡ್ ಕಾರುಗಳ ಶೋರೂಮ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು: ◾ಫ್ರಂಟ್ ಆಫೀಸ್ ಮತ್ತು ಶೋರೂಮ್ ಎಕ್ಸಿಕ್ಯೂಟಿವ್ (ಮಹಿಳೆ)-1 ◾ಸೇಲ್ಸ್ ಆಫೀಸರ್ಸ್ (ಪುರುಷ)-2 ನಿಮ್ಮ ರೆಸ್ಯೂಮ್ ಅನ್ನು ಕಳುಹಿಸಿ:[email protected] ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 📞+91 8050092644 🌐www.karavaliautomobiles.in

ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಬಂಧವಿಲ್ಲ: ಜಯರಾಮ ಅಂಬೆಕಲ್ಲು

ಉಡುಪಿ: ಮಂಗಳೂರಿನಲ್ಲಿ ನಡೆದ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಸಂಬಂಧವಿಲ್ಲ ಎಂದು ಶ್ರೀರಾಮಸೇನೆ ಮಂಗಳೂರು ವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು ಸ್ಪಷ್ಟಪಡಿಸಿದ್ದಾರೆ. ಈ ದಾಳಿಯಲ್ಲಿ ನಮ್ಮ ಸಂಘಟನೆಯ ಯಾವುದೇ ಕಾರ್ಯಕರ್ತರು ಭಾಗಿಯಾಗಿಲ್ಲ. ಇಂದು ಪ್ರಮೋದ್ ಮುತಾಲಿಕ್ ಅವರ 70ನೇ ವರ್ಷದ ಜನ್ಮದಿನಾಚರಣೆ ನಡೆಯುತ್ತಿದ್ದು, ಎಲ್ಲಾ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಪೂಜೆ ಹವನ ಹಾಗೂ ಇನ್ನಿತರ ಕಾರ್ಯಕ್ರಮ ನಡೆಸುತ್ತಿದ್ದಾರೆ. ಹೆಚ್ಚಿನ ಪದಾಧಿಕಾರಿಗಳು ಅಯೋಧ್ಯೆ ಹಾಗೂ ಕುಂಭ ಮೇಳ ಪ್ರವಾಸದಲ್ಲಿದ್ದಾರೆ ಎಂದರು.

ಮಂಕಿ ಪಾಕ್ಸ್ ರೋಗಿ ಗುಣಮುಖ: ಆತಂಕ ಪಡುವ ಅಗತ್ಯವಿಲ್ಲ- ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ದುಬೈ ಟ್ರಾವೆಲ್ ಹಿಸ್ಟರಿ ಹೊಂದಿರುವ ಉಡುಪಿಯ ವ್ಯಕ್ತಿಯಲ್ಲಿ ಮಂಕಿ ಪಾಕ್ಸ್ ಕಾಣಿಸಿಕೊಂಡಿದೆ. ಸದ್ಯ ಆ ವ್ಯಕ್ತಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು. ಆದರೂ ಆ ವ್ಯಕ್ತಿಯ ಸ್ಯಾಂಪಲ್‌ಅನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು ಆರೋಗ್ಯಾಧಿಕಾರಿಗಳು ರಿಪೋರ್ಟ್ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಮಾಹಿತಿ ನೀಡಿದ್ದು, ಈ ವ್ಯಕ್ತಿಯ ಯಾವುದೇ ಸಂಬಂಧಿಕರಲ್ಲಿ ರೋಗಲಕ್ಷಣಗಳು ಕಂಡುಬಂದಿಲ್ಲ, ಅವರು ಬೇರೆ ಕಡೆಯಿಂದ ಬಂದಿರುವ ವ್ಯಕ್ತಿ. ಅವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರ […]

ಪುಷ್ಪಾನಂದ ಫೌಂಡೇಶನ್ ₹25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ : ಯಶ್ ಪಾಲ್ ಸುವರ್ಣ

ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡಾ 85 ಕ್ಕಿಂತ ಹೆಚ್ಚು ಅಂಕಗಳಿಸಿದ 1450 ವಿದ್ಯಾರ್ಥಿಗಳಿಗೆ ₹25 ಲಕ್ಷ ವೆಚ್ಚದಲ್ಲಿ ಜನವರಿ 25 ಶನಿವಾರ ದಂದು ಪ್ರತಿಭಾ ಪುರಸ್ಕಾರ ವಿತರಣೆ ಮಾಡುವುದಾಗಿ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಬ್ರಹ್ಮಾವರ ಭಾಗದ ವಿದ್ಯಾರ್ಥಿಗಳಿಗೆ ಶನಿವಾರ ಮಧ್ಯಾಹ್ನ 2.30ಕ್ಕೆ ಬ್ರಹ್ಮಾವರದ ಬಂಟರ ಭವನದ ಸಭಾಂಗಣ ಹಾಗೂ ಉಡುಪಿ […]