ಉಡುಪಿ: ವಿಕಲಚೇತನರಿಗೆ ಬ್ಯಾಟರಿ ಚಾಲಿತ ವೀಲ್ಹ್‌ಚೇರ್ ಸೌಲಭ್ಯ; ಅರ್ಜಿ ಆಹ್ವಾನ
ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಶೇ.75 ಹಾಗೂ ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಹೊಂದಿರುವ, ಕರ್ನಾಟಕದಲ್ಲಿ ಕನಿಷ್ಠ 10 ವರ್ಷ ವಾಸವಾಗಿದ್ದು, ವಾರ್ಷಿಕ ಆದಾಯ ಎರಡು ಲಕ್ಷ ರೂ.ಗಿಂತ ಕಡಿಮೆ ಇರುವ ಯಂತ್ರಚಾಲಿತ ದ್ವಿಚಕ್ರವಾಹನ ಚಾಲನೆ ಮಾಡಲು ಸಾಮರ್ಥ್ಯ ಹೊಂದಿರದ ವಿಕಲಚೇತನರಿಂದ ಬ್ಯಾಟರಿ ಚಾಲಿತ ವೀಲ್ಹ್‌ಚೇರ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ಒಂದು ಕೈ, ಒಂದು ಕಣ್ಣು ಸ್ವಾಧೀನದಲ್ಲಿದ್ದು ಹಾಗೂ ಬ್ಯಾಟರಿ ಚಾಲಿತ ವೀಲ್ಹ್‌ಚೇರ್ ಚಲಾಯಿಸಲು ಇತರೆ ಎಲ್ಲಾ ರೀತಿಯಲ್ಲಿ ಸದೃಢರಾಗಿರುವವರು ಮಾತ್ರ […]
ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ ಮೊಗವೀರ ಅವರಿಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್-2025 ಆಯ್ಕೆ.
ಕುಂದಾಪುರ: ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಸರ್ದಾರ್ ಪಟೇಲ್ ಯುನಿಟಿ ಅವಾರ್ಡ್ಸ್ 2025-“ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಅತ್ಯಂತ ಸ್ಪೂರ್ತಿದಾಯಕ ವ್ಯಕ್ತಿತ್ವ”ಈ ಪ್ರಶಸ್ತಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರನ್ನು ಆಯ್ಕೆ ಮಾಡಲಾಗಿದ್ದು, ಇವರು ಇದುವರೆಗೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಪರಿಗಣಿಸಿ ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗಿದ್ದು, ಏಪ್ರಿಲ್ 11ರಂದು ಗೋವಾದಲ್ಲಿ ನಡೆಯಲಿರುವ ವೈಭವದ ಕಾರ್ಯಕ್ರಮದಲ್ಲಿ […]
ಪಡುಬಿದ್ರಿ: ಯಕ್ಷಗಾನ ಕಲಾವಿದನಿಗೆ ಮನೆಯಲ್ಲಿ ಕೂಡಿ ಹಾಕಿ ಹಲ್ಲೆ: ಪ್ರಕರಣ ದಾಖಲು.
ಉಡುಪಿ: ಹಣದ ವ್ಯವಹಾರಕ್ಕೆ ಸಂಬಧಿಸಿ ಯಕ್ಷಗಾನ ಕಲಾವಿದರೊಬ್ಬರನ್ನು ಮನೆಯಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿರುವ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಡುಬಿದ್ರಿ ನಡ್ಸಾಲು ಗ್ರಾಮದ ನಿತಿನ್ ಆಚಾರ್ಯ(31) ಹಲ್ಲೆಗೆ ಒಳಗಾಗಿರುವ ಕಲಾವಿದ. ಸಸಿಹಿತ್ಲು ಶ್ರೀಭಗವತಿ ಯಕ್ಣಗಾನ ಮೇಳದ ಕಲಾವಿದರಾಗಿರುವ ಇವರು, ಅವರ ಸ್ನೇಹಿತ ಪಾವಂಜೆ ಮೇಳದ ಕಲಾವಿದ ಸಚಿನ್‌ನಿಂದ 2020ರಲ್ಲಿ ಬಡ್ಡಿಗೆ ಸಾಲ ಪಡೆದುಕೊಂಡು ಅಸಲು ಹಾಗೂ ಬಡ್ಡಿಕಟ್ಟುತ್ತಿದ್ದರು. ನಿಗದಿತ ಸಮಯದೊಳಗೆ ಸಾಲವನ್ನು ಕಟ್ಟುತ್ತಿಲ್ಲ ಎಂಬ ಕಾರಣದಿಂದ ಸಚಿನ್, ಆತನ ಉದ್ಯಾವರದಲ್ಲಿರುವ ಮನೆಗೆ ಜ.21ರಂದು ಕರೆದುಕೊಂಡು […]
ಕಳತ್ತೂರು ಶ್ರೀ ಅಯ್ಯಣ್ಣ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ
ಕಳತ್ತೂರು ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕ್ರೀಡಾ ಕೂಟ ಕಾರಕ್ರಮವು ಶಾಲಾ ಮೈದಾನದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಲಾ ಹಳೆ ವಿದ್ಯಾರ್ಥಿಗಳಿಗೆ ಕಿಡಾಕೂಟ ನಡೆಸಿ ಸಂಜೆ ಸಮರೋಪ ಸಮಾರಂಭದೊಂದಿಗೆ ಒಂದು ದಿವಸ ಕ್ರೀಡಾಕೂಟ ನಡೆಯಿತು. ಶಾಲಾ ಸಂಚಾಲಕ ಪವೀಣ್ ಕುಮಾರ್ ಗುರ್ಮ ಹಾಗೂ ಕಿಶೋರ್ ಗುರ್ಮ ಭಾಗವಹಿಸಿ ಹಳೆ ವಿದ್ಯಾರ್ಥಿಗಳಿಗೆ ಪ್ರೋತ್ತಾಹ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ನಿತ್ಯಾನಂದ ಶೆಟ್ಟಿ, […]