ಬಾರ್ಕೂರು: ಚಲಿಸುತ್ತಿದ್ದ ಬೈಕ್‌ ನಿಂದ ರಸ್ತೆಗೆ ಬಿದ್ದ ಮಹಿಳೆ: ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಉಡುಪಿ: ದ್ವಿಚಕ್ರ ವಾಹನದಲ್ಲಿ ಮಧ್ಯ ವಯಸ್ಕ ಮಹಿಳೆಯರು ತೆರಳುವಾಗ ಬಹಳ ಜಾಗೃತರಾಗಿರಬೇಕು. ವಯಸ್ಕ ಮಹಿಳೆಯರನ್ನು ಒನ್ ಸೈಡ್ ಕೂರಿಸಿ ಕರೆದುಕೊಂಡು ಹೋಗೋದು ಅಪಾಯವೇ. ಇಂತಹದೊಂದು ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಸಂಭವಿಸಿದೆ. ಹೌದು, ದ್ವಿಚಕ್ರ ವಾಹನದಲ್ಲಿ ಮಹಿಳೆಯೊಬ್ಬರನ್ನು ಕರೆದುಕೊಂಡು ಹೋಗುವಾಗ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾರೆ. ಬೈಕ್ ನ ಕ್ಲಚ್ ಬಿಡುವ ಸಂದರ್ಭದಲ್ಲಿ ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಕೂಡಲೇ ಸ್ಥಳೀಯರು ಸಹಾಯಕ್ಕೆ ಬಂದು ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದ್ದು, ಅಪಾಯದಿಂದ […]

ಉಡುಪಿ: ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಯ ಕುರಿತು ಮಾಹಿತಿಗೆ ಪೊಲೀಸರ ಮನವಿ

ಉಡುಪಿ: ಐದು ವರ್ಷದ ಬಾಲಕಿಗೆ ಅಪರಿಚಿತ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ನಡೆದಿದೆ. ಸುಮಾರು 30 ವರ್ಷದ ಯುವಕ ಈ ಕೃತ್ಯ ಎಸಗಿದ್ದು, ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡು […]

ಮಂಗಳೂರು: ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ಪ್ರಸಕ್ತ (2024-25ನೇ) ಸಾಲಿನ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭ ನೀಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನು ಒಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವಾಪಾಯದಿಂದ ಪಾರು ಮಾಡಿದಂತಹ ವ್ಯಕ್ತಿ/ಸಂಸ್ಥೆಗಳು ಫೆ.3ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗೆ ಮಂಗಳೂರು ಬಿಜೈ ಮೆಸ್ಕಾಂ ಬಳಿಯ, […]

ಉಡುಪಿ: ಇಂದು ದೂರದರ್ಶಕದಲ್ಲಿ ಗ್ರಹಗಳ ವೀಕ್ಷಣೆಗೆ ಅವಕಾಶ

ಉಡುಪಿ: ಜ.25ರ ಸಂಜೆಯ ವೇಳೆ ಆಕಾಶದಲ್ಲಿ ಶನಿ, ಶುಕ್ರ, ಗುರು, ಮಂಗಳ ಗ್ರಹಗಳು ನಕ್ಷತ್ರದಂತೆ ಬರಿಗಣ್ಣಿಗೆ ಕಾಣಿಸಲಿದ್ದು, ಇವುಗಳನ್ನು ಮಣಿಪಾಲದ ಆಕಾಶಕಾಯ ವೀಕ್ಷಕ ಆರ್. ಮನೋಹರ್ ಅವರು ಆವಿಷ್ಕಾರ ಮಾಡಿದ ದೂರದರ್ಶಕದ ಮೂಲಕ ನೇರವಾಗಿ ನೋಡುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟಕ ಗಣೇಶ್‌ರಾಜ್ ಸರಳಬೆಟ್ಟು ತಿಳಿಸಿದ್ದಾರೆ. ಜ.25ರ ಸಂಜೆ 6:30ರಿಂದ ಗ್ರಹಗಳ ಪಥಸಂಚಲನ ಆರಂಭ ಗೊಂಡು ಸ್ಪಷ್ಟವಾಗಿ ಕಾಣುವ ತನಕ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ನೋಡಲು ಅವಕಾಶ ಮಾಡಿಕೊಡಲಾಗುವುದು.ಉಡುಪಿಯ ಖಗೋಳ ವೀಕ್ಷಕರು, ಆಸಕ್ತರು ಇದರ […]

ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡುವುದು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. […]