ಉಡುಪಿ:ಫಲಪುಷ್ಪ ಪ್ರದರ್ಶನ – ಉದ್ಘಾಟನಾ ಸಮಾರಂಭ

udupixpress

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನ -2025 ವು ಜನವರಿ 25 ರಿಂದ 27 ರ ವರೆಗೆ ನಗರದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜನವರಿ 25 ರಂದು ಬೆಳಗ್ಗೆ 9.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ […]

ಉಡುಪಿ:ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್, ಸಂಸದರಾದ […]

ಉಡುಪಿ:ಕೇಂದ್ರ ಪುರಸ್ಕೃತ ಯೋಜನೆಗಳನ್ನು ನಿಗಧಿತ ಅವಧಿಯೊಳಗೆ ಪ್ರತಿಶತಃ ನೂರರಷ್ಟು ಅನುಷ್ಠಾನ ಮಾಡಬೇಕು : ಸಂಸದ ಬಿ.ವೈ ರಾಘವೇಂದ್ರ

ಉಡುಪಿ: ಕೇಂದ್ರ ಪುರಸ್ಕೃತ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತಃ ನೂರರಷ್ಟು ನಿಗಧಿತಕಾಲಾವಧಿಯೊಳಗೆ ಅನುಷ್ಠಾನಗೊಳಿಸಬೇಕು ಎಂದು ಶಿವಮೊಗ್ಗ-ಉಡುಪಿ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಕೇಂದ್ರ ಸರ್ಕಾರ ಜನಸಾಮಾನ್ಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳ ಅನುಷ್ಠಾನ […]

ಉಡುಪಿ:ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು : ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ

ಉಡುಪಿ: ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು ಎಂದುಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಅನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಯ ಕುರಿತು ಆಯೋಜಿಸಲಾದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಉಡುಪಿಯ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ […]

ಕುಂದಾಪುರ: ಮೀನುಗಾರ ನಾಪತ್ತೆ

ಉಡುಪಿ: ಗಂಗೊಳ್ಳಿ ಬಂದರಿನಿಂದ ಹೊರಟು ಮೀನುಗಾರಿಕೆಗೆ ತೆರಳಿದ್ದ ಗಂಗೊಳ್ಳಿಯ ನಾರಾಯಣ ಮೊಗವೇರ (58) ಎಂಬ ವ್ಯಕ್ತಿಯು ಜನವರಿ 02 ರಂದು ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಬೋಟಿನಿಂದ ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದು ಕಾಣೆಯಾಗಿದ್ದು, ಇತರೆ ಮೀನುಗಾರರು ಹುಡುಕಾಡಿದರೂ ಈವರೆಗೆ ಪತ್ತೆಯಾಗಿರುವುದಿಲ್ಲ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಗಂಗೊಳ್ಳಿ ಪೊಲೀಸ್ ಠಾಣೆ ದೂ.ಸಂಖ್ಯೆ:08254-265333, ಮೊ.ನಂ: 9480805457 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕರು […]