ಫೆ.1ರಂದು ಉಡುಪಿ ಅಂದು-ಇಂದು ಚಿತ್ರ ಸಂಪುಟ ಲೋಕಾರ್ಪಣೆ

ಉಡುಪಿ: ಉಡುಪಿ, ಮೂರುದಶಕಗಳ ಉಡುಪಿಯ ಪ್ರಗತಿಯ ಕುರಿತಾಗಿ ಚಿತ್ರಗಳ ಮೂಲಕ ಸಾಕ್ಷೀಕರಿಸುವ ವಿಶಿಷ್ಟ ಮಿನಿ ಕಾಫಿ ಟೇಬಲ್ ಬುಕ್ ಫೆ. 1 ರಂದು ಉಡುಪಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಅಧ್ಯಕ್ಷ ಶ್ರೀ ರವಿರಾಜ್ ಎಚ್. ಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭೂತರಾಜ ಪ್ರಕಾಶನದ 4 ನೇ ಕೃತಿ ಇದಾಗಿದ್ದು ಉಡುಪಿಯ 30 ವರ್ಷಗಳ ಬೆಳಣಿಗೆ ಕುರಿತು ಈ ಪುಸ್ತಕ ಬೆಳಕು ಚೆಲ್ಲಲಿದೆ. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಚಿತ್ರ ಕಲಾವಿದ […]
ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ ನಿಧನ.

ಉಡುಪಿ: ಯಕ್ಷಗಾನ ತಾಳಮದ್ದಳೆಯ ಹಿರಿಯ ಅರ್ಥಧಾರಿ ಬರೆ ಕೇಶವ ಭಟ್ಟ (84) ಶನಿವಾರ (25. 1. 25) ನಿಧನ ಹೊಂದಿದರು. ವೃತ್ತಿಯಲ್ಲಿ ಅಧ್ಯಾಪಕರಾಗಿದ್ದ ಕೇಶವ ಭಟ್ಟರು ಅರ್ಥಧಾರಿಯಾಗಿ, ಹವ್ಯಾಸಿ ವೇಷಧಾರಿಯಾಗಿ, ಕಲಾ ಸಂಯೋಜಕರಾಗಿ, ಕಲಾವಿಮರ್ಶಕರಾಗಿ, ಲೇಖಕರಾಗಿ ಸಾಹಿತ್ಯ ಮತ್ತು ಕಲಾ ಕ್ಷೇತ್ರಕ್ಕೆ ಅಪೂರ್ವ ಕೊಡುಗೆ ನೀಡಿದ್ದರು. ನಿವೃತ್ತಿಯ ಅನಂತರ ವಾಸುದೇವ ಸಾಮಗರ ಸಂಯಮಂ ತಂಡದಲ್ಲಿ ಕೆಲವು ವರ್ಷ ತಿರುಗಾಟ ಮಾಡಿದ್ದರು. ಅಪಾರ ಪುರಾಣ ಜ್ಞಾನ, ಭಾವಪೂರ್ಣ ಅರ್ಥಗಾರಿಕೆಯಿಂದ ಕಲಾಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಸಂಸ್ಥೆಯ ತಾಳಮದ್ದಲೆ ಸಪ್ತಾಹದಲ್ಲಿ ಅರ್ಥಧಾರಿಯಾಗಿ, […]