ಕುಂದಾಪುರ:ರಾಜ್ಯ ಮಟ್ಟದ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ಸಿನಾನ್.

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಒಲಿಂಪಿಕ್ ಸಂಸ್ಥೆ ಜಿಲ್ಲಾಡಳಿತ, ದಕ್ಷಿಣ ಕನ್ನಡ ಮತ್ತು ಉಡುಪಿ ಇವರ ಸಹಯೋಗದಲ್ಲಿ ಜನವರಿ 17 ರಿಂದ 23 ರ ವರೆಗೆ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ನಡೆದ ರಾಜ್ಯ ಮಟ್ಟದ ಕರ್ನಾಟಕ ಕ್ರೀಡಾಕೂಟ 2025 ರ ಎತ್ತರ ಜಿಗಿತದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಿನಾನ್ ಚಿನ್ನದ ಪದಕ ಪಡೆಯುವುದರ ಮೂಲಕ ಅತ್ಯುತ್ತಮ ಸಾಧನೆಗೆ ಸಾಕ್ಷಿಯಾಗಿದ್ದಾನೆ.ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ […]
“ಸುಶಾನ್ ಟ್ರಸ್ಟ್ ಕೊಡ್ಲಾಡಿ” ಇದರ ಉದ್ಘಾಟನೆ ಹಾಗೂ ಕೊಡ್ಲಾಡಿ ಎಂ ಆನಂದ ಶೆಟ್ಟಿ ಮತ್ತು ಶ್ರೀಮತಿ ಸುಶೀಲಾ ಶೆಟ್ಟಿಯವರ 50ನೇ ಮದುವೆ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ

ಕೋಟೇಶ್ವರ :”ಸುಶಾನ್ ಟ್ರಸ್ಟ್ ಕೊಡ್ಲಾಡಿ” ಇದರ ಉದ್ಘಾಟನೆ ಹಾಗೂ ಕೊಡ್ಲಾಡಿ ಎಂ ಆನಂದ ಶೆಟ್ಟಿ ಮತ್ತು ಶ್ರೀಮತಿ ಸುಶೀಲಾ ಶೆಟ್ಟಿಯವರ 50ನೇ ಮದುವೆ ವಾರ್ಷಿಕೋತ್ಸವ ಸಮಾರಂಭದ ಭಾಗವಾಗಿ, ವಿಜ್ಞಾನದ ಯೋಚನೆ ಯೋಜನೆಗಳಿಗೆ ಪ್ರೇರಣೆ ಮತ್ತು ಪರಿಸರ ಕಾಳಜಿ ಧ್ಯೇಯೋದ್ದೇಶ ಇರಿಸಿಕೊಂಡಿರುವ “ಸುಶಾನ್ ಟ್ರಸ್ಟ್-ಕೊಡ್ಲಾಡಿ “ ಕೋಟೇಶ್ವರದ ಯುವ ಮೆರಿಡಿಯನ್ ಒಪೇರಾ ಪಾರ್ಕನಲ್ಲಿ ಉದ್ಘಾಟನೆ ಗೊಂಡಿತು. ಹೆಸರಾಂತ ಜೈವಿಕ ವಿಜ್ಞಾನಿ , ಪರಿಸರ ಸಂರಕ್ಷಕರಾದ ಡಾ। ಸಂಜಯ್ ಗುಬ್ಬಿಯವರು ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದರು. ಯುವಪೀಳಿಗೆ ಹೇಗೆ ವನ ಮತ್ತು ವನಜೀವಿಗಳ […]
ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ

ಉಡುಪಿ: ಉಡುಪಿಯ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿಯನ್ನು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಇಂದು ವೀಕ್ಷಣೆ ಮಾಡಿದರು. ಸಂತೆಕಟ್ಟೆ ಕಾಮಗಾರಿ ಆಮಗತಿಯಲ್ಲಿ ನಡೆಯುತ್ತಿದೆ ಎಂಬ ಸ್ಥಳೀಯರ ಆಕ್ರೋಶದ ಹಿನ್ನೆಲೆಯಲ್ಲಿ ಇಂದು ರಾಷ್ಟ್ರೀಯ ಹೆದ್ದಾರಿಯ ರೀಜನಲ್ ಆಫೀಸರ್ ನ್ನು ಸ್ಥಳಕ್ಕೆ ಕರೆಸಿಕೊಂಡ ಕೋಟ, ಶೀಘ್ರ ಕಾಮಗಾರಿಗೆ ವೇಗ ನೀಡುವಂತೆ ಸೂಚನೆ ನೀಡಿದರು. ಸಂತೆಕಟ್ಟೆಯ ಡಾಂಬರೀಕರಣ ಕಾಮಗಾರಿ ಇನ್ನು ಮೂರು ದಿನಗಳ ಒಳಗೆ ಪ್ರಾರಂಭಗೊಳ್ಳಲಿದೆ. ನಂತರ ಒಂದು ವಾರದ ಒಳಗೆ ಡಾಂಬರೀಕರಣ ಕಾರ್ಯ ಪೂರ್ಣಗೊಳಿಸಲಾಗುತ್ತದೆ. ಬೆಂಗಳೂರಿನಿಂದ ರೀಜನಲ್ ಆಫೀಸರ್ ಇವತ್ತು […]
ಅಲೆವೂರು: ಶಾಮಿಯಾನ ಗೋಡೌನ್ ನಲ್ಲಿ ಬೆಂಕಿ ಅವಘಡ : ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿ

ಉಡುಪಿ: ಶಾಮಿಯಾನದ ಗೋಡೌನ್ ನಲ್ಲಿ ಬೆಂಕಿ ಅವಘಡ ಉಂಟಾದ ಘಟನೆ ಸೋಮವಾರ ಮುಂಜಾನೆ 3.30ರ ಸುಮಾರಿಗೆ ಅಲೆವೂರಿನಲ್ಲಿ ಸಂಭವಿಸಿದೆ. ಶಾಂತಲಾ ಈವೆಂಟ್ಸ್ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ರೂ.ಮೌಲ್ಯದ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ರಮಾನಂದ ನಾಯಕ್ ಒಡೆತನದ ಶಾಂತಲಾ ಈವೆಂಟ್ ಗೋಡೌನ್ ನಲ್ಲಿ ಘಟನೆ ನಡೆದಿದ್ದು, ಶಾಮಿಯಾನದ ಮ್ಯಾಟ್ ಗಳನ್ನು ಶೇಖರಿಸಿಟ್ಟಿದ್ದ ಸ್ಥಳದಲ್ಲಿ ಆರಂಭದಲ್ಲಿ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ವಾಟರ್ ಟ್ಯಾಂಕ್ ಸೇರಿದಂತೆ ಎಲ್ಲಾ ಪರಿಕರಗಳಿಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕಗಳ ಸ್ಥಳಕ್ಕೆ ಆಗಮಿಸಿ, ಬೆಂಕಿನಂದಿಸುವ […]
ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ

ಉಡುಪಿ: ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ. ಇನ್ನು, ಶಾರದಾ ಶಾಲೆಯಲ್ಲಿ ರಾಜ್ಯದ ನಾನಾ ಭಾಗದ ಹಾಗೂ ಅಂತರರಾಜ್ಯದ […]