ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಅಲೆವೂರು ಗ್ರಾಮದ ಪ್ರಗತಿನಗರ ನಿವಾಸಿ ಮಾರುತಿ ಮುದುಕಪ್ಪ ಕಿರಸೂರು (52) ಎಂಬವರು 2024ರ ನವೆಂಬರ್ 28ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ದೂ.ಸಂಖ್ಯೆ: 0820- 2570328 ಅಥವಾ ಎಸ್.ಡಿ.ಪಿ.ಓ ದೂ.ಸಂಖ್ಯೆ: 0820-2521257 […]
ಉಡುಪಿ: ಡಾ.ಭಾಸ್ಕರಾನಂದ ಕುಮಾರ್‌ಗೆ ರಂಗಭೂಮಿ ಪ್ರಶಸ್ತಿ

ಉಡುಪಿ: ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ.ಭಾಸ್ಕರಾನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಫೆ.2ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುವ ಈ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಮತ್ತು ಹಲವು ಗಣ್ಯರ ಸಮಕ್ಷಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವ್ಯಕ್ತಿಗೆ ಜಾತಿನಿಂದನೆ, ಹಲ್ಲೆ ಪ್ರಕರಣ; ಆರೋಪಿಗೆ ಜೈಲು ಶಿಕ್ಷೆ – ನ್ಯಾಯಾಲಯ ಆದೇಶ

ಉಡುಪಿ: ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿಗೆ ಜಾತಿ ನಿಂದನೆ ಮಾಡಿ ಹಲ್ಲೆಗೈದ ಪ್ರಕರಣದ ಆರೋಪಿಗೆ ಉಡುಪಿಯ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಕಂಚಿನಡ್ಕದ ಅಶ್ರಫ್ ಶಿಕ್ಷೆಗೆ ಗುರಿಯಾದ ಆರೋಪಿ. 2016ರ ಫೆ.28ರಂದು ಉಡುಪಿ ತಾಲೂಕಿನ ನಡ್ಸಾಲು ಗ್ರಾಮದ ಕಂಚಿನಡ್ಕದ ನಿವಾಸಿ ಪರಿಶಿಷ್ಟ ಜಾತಿಗೆ ಸೇರಿದ ಗೋವಿಂದ ಎಂಬವರಿಗೆ ಆರೋಪಿ ಕ್ಷುಲ್ಲಕ ವಿಚಾರಕ್ಕೆ ಜಾತಿ ನಿಂದನೆ ಮಾಡಿ ಕಬ್ಬಿಣದ ಪಂಚ್‌ನಿಂದ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುವುದಾಗಿ […]
ಕಲ್ಸಂಕ ಜಂಕ್ಷನ್ ಬ್ಯಾರಿಕೇಡ್ ತೆರವು; ಶೀಘ್ರದಲ್ಲಿ ಟ್ರಾಫಿಕ್ ಸಿಗ್ನಲ್ ಅಳವಡಿಕೆ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಉಡುಪಿ ನಗರದ ಕಲ್ಸಂಕ ಜಂಕ್ಷನ್‌ನಲ್ಲಿ ವಾಹನ ದಟ್ಟಣೆಯಿಂದ ಟ್ರಾಫಿಕ್ ನಿಯಂತ್ರಣ ಮಾಡಲು ಅಳವಡಿಸಿದ್ದ ಬ್ಯಾರಿಕೇಡ್ ತೆರವು ಮಾಡಲಾಗಿದ್ದು, ರವಿವಾರ ಸಂಜೆಯಿಂದಲೇ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದರು. ಉಡುಪಿ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ಮನವಿ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ಚರ್ಚೆ ನಡೆಸಿ ಬ್ಯಾರಿಕೇಡ್ ತೆರವಿಗೆ ಕ್ರಮ ವಹಿಸಲಾಗಿದೆ. ಸರಣಿ ರಜೆ ಹಾಗೂ ವಾರಾಂತ್ಯದಲ್ಲಿ ಪ್ರವಾಸಿಗರ ದಟ್ಟಣೆ ಉಂಟಾದ ಸಂದರ್ಭದಲ್ಲಿ […]